ಧರ್ಮೋಪದೇಶಕಾಂಡ 9:9 - ಕನ್ನಡ ಸತ್ಯವೇದವು C.L. Bible (BSI)9 ಸರ್ವೇಶ್ವರ ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಬರೆದ ಆ ಕಲ್ಲಿನ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದಾಗ ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಲವತ್ತು ದಿನ ಆ ಬೆಟ್ಟದಲ್ಲಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಾಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನು ಕಲ್ಲಿನ ಹಲಗೆಗಳನ್ನು ತೆಗೆದುಕೊಂಡು ಬರಲು ಬೆಟ್ಟದ ಮೇಲೇರಿದ್ದೆನು. ಯೆಹೋವ ದೇವರು ನಿಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆ ಆ ಹಲಗೆಯ ಮೇಲೆ ಬರೆಯಲ್ಪಟ್ಟಿತ್ತು. ನಾನು ಆ ಬೆಟ್ಟದ ಮೇಲೆ ನಲವತ್ತು ದಿವಸ ಹಗಲಿರುಳು ಕಳೆದೆನು. ನಾನು ಅನ್ನವನ್ನಾಗಲಿ ನೀರನ್ನಾಗಲಿ ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆ ಕಲ್ಲಿನ ಹಲಗೆಗಳು ಅಂದರೆ, ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ, ನಲವತ್ತು ದಿವಸ ಹಗಲುರಾತ್ರಿ ಬೆಟ್ಟದಲ್ಲಿದ್ದೆನು. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ. ಅಧ್ಯಾಯವನ್ನು ನೋಡಿ |