Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:1 - ಕನ್ನಡ ಸತ್ಯವೇದವು C.L. Bible (BSI)

1 ನಿನೆವೆಯನ್ನು ಕುರಿತ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಪ್ರವಾದಿಗೆ ಆದ ದೈವದರ್ಶನವಿದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿನವೆ ಪಟ್ಟಣದ ಬಗ್ಗೆ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಎಂಬ ಪ್ರವಾದಿಗೆ ಆದ ದೈವದರ್ಶನದ ಗ್ರಂಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿನೆವೆಯ ವಿಷಯವಾದ ದೈವೋಕ್ತಿ. ಎಲ್ಕೋಷ್ ಊರಿನ ನಹೂಮನಿಗೆ ಆದ ದೈವದರ್ಶನದ ಗ್ರಂಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎಲ್ಕೋಷ್ ಎಂಬ ಊರಿನವನಾದ ನಹೂಮನಿಗೆ ಆದ ದೇವದರ್ಶನದ ಪುಸ್ತಕ. ನಿನೆವೆ ಪಟ್ಟಣದ ವಿಷಯವಾಗಿ ದುಃಖಕರವಾದ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಿನೆವೆಯ ವಿಷಯವಾದ ಪ್ರವಾದನೆ: ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:1
19 ತಿಳಿವುಗಳ ಹೋಲಿಕೆ  

ಅಸ್ಸೀರಿಯವನ್ನು ಸರ್ವೇಶ್ವರ ತಮ್ಮ ಭುಜಬಲದಿಂದ ಧ್ವಂಸಮಾಡುವರು; ನಿನೆವೆ ಪಟ್ಟಣವನ್ನು ಹಾಳುಬಿದ್ದ ಅವಶೇಷವಾಗಿ, ನೀರಿಲ್ಲದ ಮರುಭೂಮಿಯಾಗಿ ಮಾಡುವರು.


ಹದ್ರಾಕ್ ನಾಡಿಗೂ ದಮಸ್ಕಪಟ್ಟಣಕ್ಕೂ ವಿರುದ್ಧ ಸರ್ವೇಶ್ವರ ನುಡಿದ ದೈವೋಕ್ತಿ: ಸರ್ವೇಶ್ವರಸ್ವಾಮಿ ನರಮಾನವರ ಮೇಲೆ ಕಣ್ಣಿಟ್ಟಿದ್ದಾರೆ. ಹೌದು ಇಸ್ರಯೇಲಿನ ಸಕಲ ಕುಲಗಳ ಮೇಲೆ ಕಣ್ಣಿಟ್ಟಿದ್ದಾರೆ.


“ನಿನೆವೆ ಮಹಾನಗರದ ನಿವಾಸಿಗಳು ಎಷ್ಟು ದುಷ್ಟರೆಂಬುದು ನನಗೆ ತಿಳಿದುಬಂದಿದೆ. ನೀನು ಅಲ್ಲಿಗೆ ಹೋಗು ಅವರನ್ನು ಕಟುವಾಗಿ ಖಂಡಿಸು.”


ನಿನೆವೆ ಕಟ್ಟೆಯೊಡೆದ ಕೆರೆಯಂತಿದೆ; “ನಿಲ್ಲಿರಿ! ನಿಲ್ಲಿರಿ!” ಎಂಬ ಕೂಗು ಕೇಳುತ್ತಿದೆ; ಆದರೂ ಓಡುತಿಹರು ಜನರೆಲ್ಲರು ಹಿಂದೆ ನೋಡದೆ.


ಬಾಬಿಲೋನಿನ ವಿಷಯವಾಗಿ ಆಮೋಚನ ಮಗ ಯೆಶಾಯನಿಗೆ ಕೇಳಿಬಂದ ದೇವವಾಣಿ :


ಅವನು ಆ ನಾಡಿನಿಂದ ಹೊರಟು ಅಸ್ಸೀರಿಯಾ ನಾಡಿಗೆ ಬಂದು ನಿನೆವೆ, ರಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ


ಟೈರ್ ನಗರವನ್ನು ಕುರಿತ ದೈವೋಕ್ತಿ : “ಗೋಳಾಡಿರಿ ತಾರ್ಷಿಷಿನ ನಾವಿಕರೆಲ್ಲ, ಹಾಳಾಗಿವೆ ನಿಮ್ಮ ಬಂದರುಗಳೆಲ್ಲ; ಹಡಗುಗಳಿಗೆ ರೇವಿಲ್ಲ, ನೆಲೆಯಿಲ್ಲ, ಸೈಪ್ರಸ್ಸಿನಿಂದ ಬಂದ ನಾವಿಕರಿಂದ ಈ ಸುದ್ದಿ ನಿಮಗೆ ತಿಳಿಯುವುದು.”


ಕಡಲಡವಿಯ ಕುರಿತು ದೈವೋಕ್ತಿ : ದಕ್ಷಿಣ ಸೀಮೆಯ ನಾಡನ್ನು ಕಸದಂತೆ ಗುಡಿಸುವ ಸುಂಟರಗಾಳಿಯ ಹಾಗೆ, ಅರಣ್ಯದ ಕಡೆಯ ಭಯಂಕರ ನಾಡಿನಿಂದ ಗಂಡಾಂತರ ಬರಲಿದೆ.


ಮೋವಾಬನ್ನು ಕುರಿತ ದೈವೋಕ್ತಿ ಇದು : “ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಆರ್ ಪಟ್ಟಣವು. ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಕೀರ್ ಪಟ್ಟಣವು.


ಅರಸ ಆಹಾಜನು ಕಾಲವಾದ ವರುಷದಲಿ ಕೇಳಿಬಂದಿತು ಈ ದೈವೋಕ್ತಿ :


‘ದಿವ್ಯದರ್ಶನದ ಕಣಿವೆ’ಯ ಕುರಿತ ದೈವೋಕ್ತಿ : ಏನಾಯಿತು? ಜನರೆಲ್ಲರೂ ಮನೆಮಾಳಿಗೆಗಳನ್ನು ಏರಿ ಸಡಗರದಿಂದ ಇರುವುದೇಕೆ?


ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು. ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲೆ ವಾಸಿಸಿದನು.


ಪ್ರವಾದಿ ಹಬಕ್ಕೂಕನಿಗೆ ಪ್ರಕಟಿಸಲಾದ ದೈವೋಕ್ತಿ:


ಮಲಾಕಿಯನ ಮುಖಾಂತರ ಇಸ್ರಯೇಲ್ ಜನರಿಗೆ ಸರ್ವೇಶ್ವರ ನೀಡಿದ ದೈವೋಕ್ತಿ:


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ನನಗೂ ನಿನಗೂ ಹಿಂದೆ, ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ಆಪತ್ತು-ವಿಪತ್ತು, ಕಾಯಿಲೆ-ಕಷ್ಟ, ಇಂಥವುಗಳನ್ನು ಸಾರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು