Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:11 - ಕನ್ನಡ ಸತ್ಯವೇದವು C.L. Bible (BSI)

11 ನಿನೆವೆಯೇ, ಸರ್ವೇಶ್ವರಸ್ವಾಮಿಗೆ ವಿರುದ್ಧವಾಗಿ ಕುಯುಕ್ತಿಯನ್ನು ಕಲ್ಪಿಸುವವನು ನಿನ್ನಿಂದಲೆ ಹೊರಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿನವೆಯೇ, ಯೆಹೋವನಿಗೆ ವಿರುದ್ಧವಾಗಿ ದುಷ್ಟ ಆಲೋಚನೆ ಮಾಡಿ ಕೇಡನ್ನು ಕಲ್ಪಿಸುವವನು ನಿನ್ನೊಳಗಿಂದ ಹೊರಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 [ನಿನೆವೆಯೇ,] ಯೆಹೋವನಿಗೆ ವಿರುದ್ಧವಾಗಿ ದುರಾಲೋಚನೆಮಾಡಿ ಕೇಡನ್ನು ಸಂಕಲ್ಪಿಸುವವನು ನಿನ್ನೊಳಗಿಂದ ಹೊರಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಶ್ಶೂರವೇ, ನಿನ್ನಿಂದ ಒಬ್ಬ ಮನುಷ್ಯನು ಬಂದು, ಯೆಹೋವನಿಗೆ ವಿರುದ್ಧವಾದ ಯೋಜನೆಗಳನ್ನು ಹಾಕಿದನು. ದುರಾಲೋಚನೆಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿನೆವೆಯೇ ಯೆಹೋವ ದೇವರಿಗೆ ವಿರೋಧವಾಗಿ ದುರಾಲೋಚನೆ ಮಾಡಿ, ಕೇಡನ್ನು ಯೋಚಿಸುವವನು ನಿನ್ನೊಳಗಿಂದ ಹೊರಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:11
11 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ವಿರುದ್ಧ ಮಾಡಬಲ್ಲಿರಾ ನೀವು ಕುಯುಕ್ತಿ? ಮರಳಿ ತಲೆಯೆತ್ತದಂತೆ ನಾಶಮಾಡುವನು ನಿಮ್ಮನು ಪೂರ್ತಿಯಾಗಿ.


ಕಾಕಪೋಕರೂ ದುಷ್ಟರೂ ಆದ ಜನರನ್ನು ಕೂಡಿಕೊಂಡ ಎಳೇಪ್ರಾಯದವನೂ ಮುಗ್ಧನೂ ತಮ್ಮೆದುರಿನಲ್ಲಿ ನಿಲ್ಲಲು ಅಶಕ್ತನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.


ಹಿಜ್ಕೀಯನು ನಿಮಗೆ, ‘ಸರ್ವೇಶ್ವರ ಸ್ವಾಮಿಯಲ್ಲೇ ನಂಬಿಕೆಯಿಡಿ; ಅವರು ನಿಮ್ಮನ್ನು ಹೇಗಾದರೂ ಮಾಡಿ ರಕ್ಷಿಸುವರು; ಈ ಪಟ್ಟಣವು ಅಸ್ಸೀರಿಯದ ರಾಜನ ವಶವಾಗುವುದಿಲ್ಲ,’ ಎಂಬುದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿ, ಒಪ್ಪಿಕೊಳ್ಳಬೇಡಿ.


ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.


ಏಲಿಯ ಮಕ್ಕಳು ಮಹಾದುಷ್ಟರು. ಅವರು ಸರ್ವೇಶ್ವರನನ್ನು ಲಕ್ಷಿಸುತ್ತಿರಲಿಲ್ಲ.


ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ;


ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು