Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:14 - ಕನ್ನಡ ಸತ್ಯವೇದವು C.L. Bible (BSI)

14 ಅಸ್ಸೀರಿಯವೇ, ಸರ್ವೇಶ್ವರನಾದ ನಾನು ನಿನ್ನ ಬಗ್ಗೆ ಹೊರಡಿಸಿದ ಆಜ್ಞೆ ಏನೆಂದರೆ: ಹೆಸರೆತ್ತಲು ನಿನಗೆ ಸಂತಾನವೇ ಇಲ್ಲದಂತಾಗುವುದು. ನಿನ್ನ ದೇವರುಗಳ ಗುಡಿಗಳಲ್ಲಿರುವ ಕೆತ್ತನೆಯ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಒಡೆದುಹಾಕುವೆನು. ನಿನಗೆ ಸಮಾಧಿಯೊಂದನ್ನು ಸಿದ್ಧಗೊಳಿಸುವೆನು; ಏಕೆಂದರೆ ನೀನು ಕೆಡುಕ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಶ್ಶೂರವೇ, ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ, ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು; ನಿನ್ನ ಪಾಪಗಳು ದುರ್ವಾಸನೆ ಬೀರುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 [ಅಶ್ಶೂರವೇ,] ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಗೋರಿಯನ್ನು ಸಿದ್ಧಮಾಡುವೆನು; ನೀನು ತುಚ್ಫ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಶ್ಶೂರದ ಅರಸನೇ, ನಿನ್ನ ವಿಷಯವಾಗಿ ಯೆಹೋವನು ಕೊಟ್ಟ ಆಜ್ಞೆ ಏನೆಂದರೆ, “ನಿನ್ನ ಹೆಸರನ್ನು ಧರಿಸುವ ಸಂತತಿಯವರು ಯಾರೂ ಇರುವುದಿಲ್ಲ. ನಿನ್ನ ಕೆತ್ತನೆಯ ವಿಗ್ರಹಗಳನ್ನು ನಾನು ನಾಶಮಾಡುವೆನು. ನಿನ್ನ ದೇವರುಗಳ ಆಲಯದಲ್ಲಿರುವ ಲೋಹದ ಬೊಂಬೆಗಳನ್ನು ಕೆಡವಿಬಿಡುವೆನು. ನಿನ್ನ ಅಂತ್ಯವು ಬೇಗನೆ ಬರಲಿರುವುದರಿಂದ ನಿನಗೆ ಸಮಾಧಿಯನ್ನು ತಯಾರುಮಾಡುತ್ತಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿನೆವೆಯೇ, ನಿನ್ನ ವಿಷಯವಾಗಿ ಯೆಹೋವ ದೇವರು ಆಜ್ಞಾಪಿಸುವುದೇನೆಂದರೆ: ಹೆಸರೆತ್ತಲು ನಿನಗೆ ಸಂತಾನವಿಲ್ಲದಂತೆ ಮಾಡುವೆನು. ನಿನ್ನ ದೇವರ ಮಂದಿರದಲ್ಲಿರುವ ಕೆತ್ತಿದ ವಿಗ್ರಹವನ್ನೂ, ಎರಕ ಬೊಂಬೆಯನ್ನೂ ನಾಶಮಾಡುವೆನು. ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:14
21 ತಿಳಿವುಗಳ ಹೋಲಿಕೆ  

ನಿರ್ಮೂಲವಾಗಲಿ ಅವನಾ ಪೀಳಿಗೆ I ನಿರ್ನಾಮವಾಗಲಿ ಮರುವಂಶದೊಳಗೆ II


ನೀನು ಕೆತ್ತಿದ ವಿಗ್ರಹಗಳನ್ನು ಒಡೆದುಹಾಕಿ, ನೀನು ನಿಲ್ಲಿಸಿದ ಕಲ್ಲುಕಂಬಗಳನ್ನು ಉರುಳಿಸಿಬಿಡುವೆನು. ನಿನ್ನ ಕೈಗೆಲಸವಾದ ವಿಗ್ರಹಗಳನ್ನು ನೀನು ಪೂಜಿಸದಂತೆ ಮಾಡುವೆನು.


ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.


ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಪಲಾಯನ ಗೈದರು. ಅವನ ಸ್ಥಾನದಲ್ಲಿ ಅವನ ಮಗ ಏಸರ್ ಹದ್ದೋನನು ಅರಸನಾದನು.


“ಅವನ ಸ್ಥಾನದಲ್ಲಿ ನೀಚನೊಬ್ಬನು ಏಳುವನು. ಅವನು ರಾಜಪದವಿಗೆ ಹಕ್ಕುದಾರನಲ್ಲ. ಆದರೂ ನೆಮ್ಮದಿಯ ಕಾಲದಲ್ಲಿ ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


“ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.


ದೂರ ಇರುವವರೇ, ನಾನು ಎಸಗಿದ ಕಾರ್ಯಗಳನ್ನು ಕೇಳಿ ತಿಳಿದುಕೊಳ್ಳಿರಿ. ಹತ್ತಿರ ಇರುವವರೇ, ನನ್ನ ಪರಾಕ್ರಮವನ್ನು ಒಪ್ಪಿಕೊಳ್ಳಿರಿ.”


ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


ನೀನಾಗಿರು ನನಗಾಶ್ರಯದುರ್ಗ, ಕೋಟೆಕೊತ್ತಲು I ನೀನೇ ನನ್ನ ದುರ್ಗ, ಕೋಟೆ ನನ್ನನು ರಕ್ಷಿಸಲು II


ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ತನ್ನ ಮಕ್ಕಳು ದೇವದೂಷಕರು ಎಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ತಿದ್ದಲಿಲ್ಲ. ಈ ಪಾಪದ ನಿಮಿತ್ತ ಅವನ ಕುಟುಂಬವನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.


ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದುಹೋಗುವೆನು; ಮನುಷ್ಯರಾಗಲಿ, ಪ್ರಾಣಿಗಳಾಗಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ!


ಅವನ ಸ್ಮರಣೆ ಅಳಿದುಹೋಗುವುದು ಜಗದಲಿ ಇಲ್ಲವಾಗುವುದು ಅವನ ಹೆಸರು ನಾಡಿನಲಿ.


ನಿನ್ನ ಆಶೇರಾ ದೇವತೆಯ ವಿಗ್ರಹಗಳನ್ನು ಕಿತ್ತೊಗೆದು, ನಿನ್ನ ಪಟ್ಟಣಗಳನ್ನು ನೆಲಸಮ ಮಾಡುವೆನು.


ನಿನ್ನ ಯೋಜನೆಗಳಿಂದ ನಿನ್ನ ಮನೆತನಕ್ಕೆ ಅಪಕೀರ್ತಿ ತಂದುಕೊಂಡಿರುವೆ. ಹಲವಾರು ನಾಡುಗಳನ್ನು ನಿರ್ಮೂಲಮಾಡಿ ನಿನ್ನ ವಂಶಕ್ಕೆ ವಿನಾಶವನ್ನು ಬರಮಾಡಿಕೊಂಡಿರುವೆ.


'ತೆಕೇಲ್’ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನಿನ್ನ ತೂಕ ಕಡಿಮೆಯಾಗಿ ಕಂಡುಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು