Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:5 - ಕನ್ನಡ ಸತ್ಯವೇದವು C.L. Bible (BSI)

5 ಆತನೆದುರು ಅದರುತ್ತವೆ ಬೆಟ್ಟಗಳು ಕರಗುತ್ತವೆ ಗುಡ್ಡಗಳು. ಆತನ ದರ್ಶನಕೆ ಕಂಪಿಸುತ್ತದೆ ಭೂಗೋಳವು ತಲ್ಲಣಿಸುತ್ತದೆ ಲೋಕ ಲೋಕನಿವಾಸಿಗಳೆಲ್ಲವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂವಿುಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲವೂ ತಲ್ಲಣಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಬರುತ್ತಾನೆ. ಪರ್ವತಗಳು ಭಯದಿಂದ ನಡುಗುವವು. ಬೆಟ್ಟಗಳು ಕರಗಿಹೋಗುವವು. ಯೆಹೋವನು ಬರುತ್ತಾನೆ, ಮತ್ತು ಭೂಮಿಯು ಭಯದಿಂದ ನಡುಗುವುದು. ಇಡೀ ಪ್ರಪಂಚ ಮತ್ತು ಅದರಲ್ಲಿರುವ ಜನರೆಲ್ಲಾ ಭಯದಿಂದ ನಡುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಬೆಟ್ಟಗಳು ಅವರ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ, ಲೋಕವೂ, ಅದರ ನಿವಾಸಿಗಳೆಲ್ಲವೂ ಅವರ ಮುಂದೆ ನಡುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:5
34 ತಿಳಿವುಗಳ ಹೋಲಿಕೆ  

ಬೆಂಕಿಗೆ ಕರಗುವ ಮೇಣದಂತೆ ಇಳಿಜಾರು ಪ್ರದೇಶದ ನೀರು ನೆಲವನ್ನು ಕೊರೆವಂತೆ ಕರಗಿಹೋಗುವುವು ಆತನ ಪಾದದಡಿ ಪರ್ವತಗಳು; ಸೀಳಿಹೋಗುವುವು ಕೊಲ್ಲಿಗಳು.


ಬೆಟ್ಟಗಳನ್ನು ನೋಡಿದೆ, ಅವು ನಡುನಡುಗುತ್ತಿದ್ದವು. ಗುಡ್ಡ ದಿಣ್ಣೆಗಳೂ ಅಲ್ಲೋಲಕಲ್ಲೋಲವಾಗಿದ್ದವು.


ಆಗ ಕಂಪಿಸಿತು ಭೂಮಿ ಗಡಗಡನೆ ಕದಲಿದವು ಆಗಸದಸ್ತಿವಾರಗಳು ಮಿಲಮಿಲನೆ ಏಕೆನೆ ಸಿಟ್ಟೇರಿತ್ತು ಆತನಿಗೆ.


ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು.


ನಡುಗಿತು ಪೊಡವಿ, ಕಂಪಿಸಿತು ಸೀನಾಯಿ, ದೇವ ಪ್ರತ್ಯಕ್ಷನಾದನೆಂದು I ಮಳೆಗರೆಯಿತು ಮೋಡಗಿರಿ, ಇಸ್ರಯೇಲ್ ದೇವ ಪ್ರತ್ಯಕ್ಷನಾದನೆಂದು II


ಕರಗಿಹೋದವು ಬೆಟ್ಟಗುಡ್ಡಗಳು ಆ ಸರ್ವೇಶ್ವರನ ಮುಂದೆ ನೀರಾಗಿ ಹೋಯಿತು ಸೀನಾಯಿ ಪರ್ವತವು ಇಸ್ರಯೇಲರ ದೇವನೆದುರಿಗೆ.


ಪರ್ವತಗಳೇ, ಕುಪ್ಪಳಿಸಿದಿರೇಕೆ ಟಗರುಗಳಂತೆ? I ಬೆಟ್ಟಗುಡ್ಡಗಳೇ, ಕುಣಿದಿರೇಕೆ ಕುರಿಮರಿಗಳಂತೆ? II


ಕುಪ್ಪಳಿಸಿದವು ಪರ್ವತಗಳು ಟಗರುಗಳಂತೆ I ಕುಣಿದವು ಬೆಟ್ಟಗುಡ್ಡಗಳು ಕುರಿಮರಿಗಳಂತೆ II


ಗರ್ಜಿಸಲಿ ಸಮುದ್ರವು ಅದರಲ್ಲಿರುವುದೆಲ್ಲವು I ಕೀರ್ತಿಸಲಿ ಜಗವು, ಅದರೊಳು ವಾಸಿಸುವ ಜನರೆಲ್ಲರು II


ನಡುಗಿದವು ರಾಷ್ಟ್ರಗಳು, ಉಡುಗಿದವು ರಾಜ್ಯಗಳು I ದೇವರ ಗರ್ಜನೆಗೆ ಕರಗಿತು ಧರೆಯೆಲ್ಲವು II


ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು.


ಆಗ ಇಗೋ, ಮಹಾದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೆ ಇಬ್ಭಾಗವಾಗಿ ಸೀಳಿಹೋಯಿತು; ಭೂಮಿ ನಡುಗಿತು,


ಆಕಾಶವು ಸುರುಳಿಯಂತೆ ಸುತ್ತಿಕೊಂಡು ಕಣ್ಮರೆಯಾಯಿತು. ಎಲ್ಲಾ ಪರ್ವತಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚಲಿಸಿದವು.


ಆಗ ಕಂಪಿಸಿತು ಭೂಮಿ ಗಡಗಡನೆ I ಕದಲಿದವು ಬೆಟ್ಟದ ಬುಡಗಳು ಮಿಲಮಿಲನೆ I ಏಕೆನೆ, ಸಿಟ್ಟೇರಿತ್ತು ಆತನಿಗೆ II


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಇಗೋ, ಸರ್ವೇಶ್ವರ ಬರಿದುಮಾಡುವರು ಧರೆಯನು, ನಿರ್ಜನ ಪ್ರದೇಶವಾಗಿಸುವರು ವಿರೂಪಗೊಳಿಸಿ ಅದನು, ಚದರಿಸುವರು ಅದರ ನಿವಾಸಿಗಳನು.


ಓಲಾಡುವುದು ಭೂಮಿ ಅಮಲೇರಿದವನಂತೆ, ತೂಗಾಡುವುದು ಬಿರುಗಾಳಿಗೆ ಸಿಕ್ಕಿದ ಗುಡಿಸಲಂತೆ, ಕುಸಿದು ಬೀಳುವುದು ದ್ರೋಹದ ಭಾರಕೆ, ಮರಳಿ ಏಳದಂತೆ.


ಅವುಗಳ ಮುಂದೆ ಭೂಮಂಡಲ ಕಂಪಿಸುತ್ತದೆ, ಆಕಾಶಮಂಡಲ ನಡುಗುತ್ತದೆ. ಸೂರ್ಯಚಂದ್ರಗಳು ಮಂಕಾಗುತ್ತವೆ, ನಕ್ಷತ್ರಗಳು ಕಾಂತಿಗುಂದುತ್ತವೆ.


ಅಡ್ಡಿ ಅಡಚಣೆಗಳು ಬೆಟ್ಟದಂತಿದ್ದರೂ ನೀನು ದೇವಾಲಯವನ್ನು ಕಟ್ಟುವೆ. ಅಂತ್ಯದಲ್ಲಿ ಕಲಶವನ್ನು ಸ್ಥಾಪಿಸುವಾಗ ಜನರು ‘ಎಷ್ಟು ರಮ್ಯ! ಎಷ್ಟು ಸುಂದರ!’ ಎಂದು ಉದ್ಗರಿಸುವರು.”


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಆತ ಪರ್ವತಗಳನ್ನೇ ಸರಿಸುತ್ತಾನೆ ಅರಿಯದಂತೆ ಅವುಗಳನ್ನು ಉರುಳಿಸುತ್ತಾನೆ ಸಿಟ್ಟುಗೊಂಡಂತೆ.


ಆಕಾಶಮಂಡಲದ ಸ್ತಂಭಗಳು ಕದಲುವುವು ಆತನ ಗದರಿಕೆಗೆ ಅವುಗಳು ಬೆರಗಾಗುವುವು.


ಹೊರಬಂದಿತು ಹೊಗೆ ಆತನ ಮೂಗಿಂದ I ಹೊರಟಿತು ಅಗ್ನಿಜ್ವಾಲೆ ಆತನ ಬಾಯಿಂದ I ಕಾದುಕೆಂಡವಾಗಿಸಿತದು ಎದುರಿಗೆ ಸಿಕ್ಕಿದ್ದನೆಲ್ಲ II


ನಡುಗುತ್ತದೆ ಭೂಮಂಡಲ ಆತನ ಕೃತ್ಯಕೆ I ಹೊಗೆಕಾರುತ್ತದೆ ಪರ್ವತ ಆತನ ಸ್ಪರ್ಶಕೆ II


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಭೂಜಂತುಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಹಾಗು ಜಗದ ಸಕಲ ಮಾನವರು ನನ್ನೆದುರಿಗೆ ನಡುಗುವರು; ಪರ್ವತಗಳು ಉರುಳಿಹೋಗುವುವು, ಝರಿಗಳು ಕವಚಿಕೊಳ್ಳುವುವು, ಎಲ್ಲ ಗೋಡೆಗಳು ನೆಲಸಮವಾಗುವುವು.


ಸೇನಾಧಿಶ್ವರ ದೇವರಾದ ಸರ್ವೇಶ್ವರ ಮುಟ್ಟಿದ ಮಾತ್ರಕ್ಕೆ ಕರಗುವುದು ಭೂಮಿ. ಗೋಳಿಡುವುದು ಸಕಲ ಜನತೆ ಉಬ್ಬುವುದು ನಾಡೆಲ್ಲ ನೈಲ್ ನದಿಯಂತೆ ಕುಗ್ಗಿ ಕರಗುವುದು ಈಜಿಪ್ಟಿನ ನದಿಯಂತೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು