Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:6 - ಕನ್ನಡ ಸತ್ಯವೇದವು C.L. Bible (BSI)

6 ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; ಬಂಡೆಗಳು ಆತನ ಮುಂದೆ ಕೆಡವಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:6
31 ತಿಳಿವುಗಳ ಹೋಲಿಕೆ  

ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


“ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು?


ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.


ನೀನಾದರೋ ದೇವಾ, ಮಹಾಭಯಂಕರನು I ಸಿಟ್ಟೇರಿದ ನಿನ್ನ ಮುಂದೆ ಯಾವನು ನಿಂತಾನು? II


ನಾನು ಈಜಿಪ್ಟಿಗೆ ಕಿಚ್ಚನ್ನು ಹತ್ತಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು; ತೆಬೆಸ್ ಭಂಗಕ್ಕೆ ಈಡಾಗುವುದು; ಮೆಂಫೀಸ್ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.


ಸುರಿಸಿದ್ದಾನೆ ಸರ್ವೇಶ್ವರ ತನ್ನ ರೋಷಾಗ್ನಿಯನ್ನು ತೀರಿಸಿಕೊಂಡಿದ್ದಾನೆ ತನ್ನ ಉಗ್ರಕೋಪವನ್ನು. ಆತ ಹೊತ್ತಿಸಿದ ಬೆಂಕಿಗೆ ಸಿಯೋನಿನ ಅಸ್ತಿವಾರ ಆಹುತಿಯಾಗಿದೆ.


ಬಿಲ್ಲುಹಿಡಿದು ಬಂದ ಆತ ವೈರಿಯಂತೆ ಬಲಗೈಯೆತ್ತಿ ನಿಂತ ವಿರೋಧಿಯಂತೆ, ಸಂಹರಿಸಿಬಿಟ್ಟ ಸುಂದರ ಪ್ರಜೆಯೆಲ್ಲರನ್ನು ರೋಷಾಗ್ನಿ ಸುರಿಸಿ ಭಸ್ಮಮಾಡಿದ ಸಿಯೋನ್ ಗುಡಾರವನ್ನು.


ಇದರ ಬಗ್ಗೆ ನನಗೆ ಇನ್ನಿಲ್ಲ ರೌದ್ರ, ಇದರೊಳಗಿಲ್ಲ ಮುಳ್ಳುಕಳ್ಳಿಗಳ ಗಹ್ವರ, ಇದ್ದಿದ್ದರೆ ಸುಟ್ಟು ಭಸ್ಮ ಮಾಡುತ್ತಿದ್ದೆ ಹೂಡಿ ಸಮರ.


ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.


ನಿನ್ನ ಕೋಪದಾ ಪ್ರತಾಪವನು ಬಲ್ಲವನಾರು? I ಭಯಂಕರ ರೌದ್ರವನು ಅನುಭವಿಸುವವರಾರು? II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಆಗ ಇನ್ನೊಮ್ಮೆ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಸರ್ವೇಶ್ವರನ ಮುಂದೆ ನಿಲ್ಲು,” ಎಂದು ವಾಣಿಯಾಯಿತು; ಆಹಾ! ಸರ್ವೇಶ್ವರ ಅಲ್ಲೇ ಹಾದುಹೋದರು, ಅವರ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿ ಬೀಸಿತು; ಸರ್ವೇಶ್ವರ ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲೂ ಅವರಿರಲಿಲ್ಲ.


ನಾಲ್ಕನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ, ಕಡುಬಿಸಿಲಿನಿಂದ ಮನುಷ್ಯರನ್ನು ಸುಡುವ ಶಕ್ತಿಯನ್ನು ಕೊಡಲಾಯಿತು.


ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.


ಏಕೆಂದರೆ, ಅವರ ಕೋಪಾಗ್ನಿಯ ಘೋರ ದಿನವು ಬಂದಿದೆ. ಅದರ ಮುಂದೆ ನಿಲ್ಲುವುದಕ್ಕೆ ಯಾರು ತಾನೇ ಶಕ್ತರು?” ಎಂದು ಹಲುಬಿದರು.


ನಿನ್ನ ಕಡುಕೋಪವನು ಎಲ್ಲೆಡೆಯೂ ಹರಡಿಸು ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು.


ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II


ಸೇನಾಧೀಶ್ವರ ಸರ್ವೇಶ್ವರನು ಕೋಪೋದ್ರೇಕದಿಂದ ರೋಷಾವೇಶದಿಂದ ಕೆರಳುವ ದಿನದಂದು ಆಕಾಶಮಂಡಲ ನಡುಗುವುದು, ಭೂಮಂಡಲ ಸ್ಥಳಪಲ್ಲಟಗೊಳ್ಳುವುದು.


ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ


‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.


“ಇನ್ನು ಸ್ವಲ್ಪಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು, ನನ್ನ ಕೋಪವನ್ನು ತೀರಿಸಿಕೊಳ್ಳುವೆನು; ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಕಾರಿ, ಕ್ರೂರಿಗಳನ್ನು ಹಾಳುಮಾಡುವುದರಲ್ಲಿ ಗಟ್ಟಿಗರಾದವರ ಕೈಗೆ ಸಿಕ್ಕಿಸುವೆನು.


ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಿತವಾಗುವುದು.


ಕಾಲವು ಹೊಟ್ಟಿನಂತೆ ಹಾರಿಹೋಗುವ ಮೊದಲು, ಸರ್ವೇಶ್ವರಸ್ವಾಮಿಯ ಉಗ್ರಕೋಪವು ನಿಮ್ಮ ಮೇಲೆ ಎರಗುವ ಮುಂಚೆ, ಅವರ ಸಿಟ್ಟಿನ ದಿನ ನಿಮ್ಮನ್ನು ಮುಟ್ಟುವುದಕ್ಕೆ ಮುನ್ನ ಸೇರ ಬನ್ನಿ, ಕೂಡಿ ಬನ್ನಿ.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಆತ ಪರ್ವತಗಳನ್ನೇ ಸರಿಸುತ್ತಾನೆ ಅರಿಯದಂತೆ ಅವುಗಳನ್ನು ಉರುಳಿಸುತ್ತಾನೆ ಸಿಟ್ಟುಗೊಂಡಂತೆ.


ಆಕಾಶಮಂಡಲದ ಸ್ತಂಭಗಳು ಕದಲುವುವು ಆತನ ಗದರಿಕೆಗೆ ಅವುಗಳು ಬೆರಗಾಗುವುವು.


ನಿನ್ನ ನಿರ್ಣಯ ಸಗ್ಗದಿಂದ ಕೇಳಿಸಿದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ಶತ್ರು ಬಂದೆರಗಿದಾಗ ಸ್ವಾಮಿ ತನ್ನ ಶಕ್ತಿಯುತ ಕೈಯನ್ನು ಹಿಂದೆಗೆದುಬಿಟ್ಟ, ಇಸ್ರಯೇಲಿನ ಕೋಡನ್ನು ಕಡಿದು ಪುಡಿಪುಡಿ ಮಾಡಿಬಿಟ್ಟ, ಸುತ್ತುಗಟ್ಟಿ ನುಂಗುವ ಅಗ್ನಿಜ್ವಾಲೆಯಂತೆ ಯಕೋಬನನ್ನು ದಹಿಸಿಬಿಟ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು