Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:8 - ಕನ್ನಡ ಸತ್ಯವೇದವು C.L. Bible (BSI)

8 ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನೆವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಆತನು ತನ್ನ ವೈರಿಗಳನ್ನು ಪೂರ್ತಿಯಾಗಿ ನಾಶಮಾಡುತ್ತಾನೆ. ತೆರೆಯಂತೆ ಅವರನ್ನು ಕೊಚ್ಚಿಕೊಂಡು ಹೋಗುತ್ತಾನೆ. ಕತ್ತಲೆಯ ಕಡೆಗೆ ವೈರಿಗಳನ್ನು ಅಟ್ಟಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಮೇರೆ ಮೀರುವ ಪ್ರಳಯದಿಂದ ನಿನೆವೆಯನ್ನು ಮುಗಿಸಿಬಿಡುವರು. ಕತ್ತಲೆ ಅವರ ಶತ್ರಗಳನ್ನು ಹಿಂದಟ್ಟುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:8
26 ತಿಳಿವುಗಳ ಹೋಲಿಕೆ  

“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಕೆಡವಿಹಾಕುವೆನು; ಅದನ್ನು ನಾಶಮಾಡಲು ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು; ರೋಷದಿಂದ ಆನೆಕಲ್ಲುಗಳು ಸುರಿಯುವುವು.


ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.


ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು.


ಅಸ್ಸೀರಿಯವನ್ನು ಸರ್ವೇಶ್ವರ ತಮ್ಮ ಭುಜಬಲದಿಂದ ಧ್ವಂಸಮಾಡುವರು; ನಿನೆವೆ ಪಟ್ಟಣವನ್ನು ಹಾಳುಬಿದ್ದ ಅವಶೇಷವಾಗಿ, ನೀರಿಲ್ಲದ ಮರುಭೂಮಿಯಾಗಿ ಮಾಡುವರು.


ಅವರ ದುಷ್ಕೃತ್ಯಗಳ ನಿಮಿತ್ತವೇ ನಾಡು ಕಂಪಿಸುವುದು; ನಿವಾಸಿಗಳೆಲ್ಲರು ದುಃಖಿಸುವರು. ನಾಡೆಲ್ಲವು ನೈಲ್ ನದಿಯಂತೆ ಉಬ್ಬುವುದು. ಅಲ್ಲೋಲಕಲ್ಲೋಲವಾಗಿ ಈಜಿಪ್ಟಿನ ನದಿಯಂತೆ ಕುಗ್ಗಿ ಕರಗಿಹೋಗುವುದು.


ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”


ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!”


ನಿನೆವೆ ಕಟ್ಟೆಯೊಡೆದ ಕೆರೆಯಂತಿದೆ; “ನಿಲ್ಲಿರಿ! ನಿಲ್ಲಿರಿ!” ಎಂಬ ಕೂಗು ಕೇಳುತ್ತಿದೆ; ಆದರೂ ಓಡುತಿಹರು ಜನರೆಲ್ಲರು ಹಿಂದೆ ನೋಡದೆ.


ನಿನೆವೆಯನ್ನು ಕುರಿತ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಪ್ರವಾದಿಗೆ ಆದ ದೈವದರ್ಶನವಿದು:


“ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.


ಅವನನ್ನು ಎದುರಿಸುವ ದೊಡ್ಡ ದೊಡ್ಡ ಸೈನ್ಯಗಳು ಹಾಗು ದೇವರ ಪ್ರಧಾನ ಯಾಜಕನು ಅವನ ಸೈನ್ಯ ಪ್ರವಾಹಕ್ಕೆ ಸಿಕ್ಕಿ ಅದರಲ್ಲಿ ಮುಳುಗಿ ನಾಶವಾಗುವರು.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ದುರ್ಜನರ ಮಾರ್ಗ ಕಗ್ಗತ್ತಲಿನ ಹಾಗೆ, ಎಡವಿಬಿದ್ದ ಸ್ಥಳವೇ ತಿಳಿಯದು ಅವರಿಗೆ.


ಅಡ್ಡಿ ಆತಂಕಗಳು ನನ್ನನು ಸುತ್ತುವರೆದಿವೆ ನನ್ನ ಮಾನಮರ್ಯಾದೆ ತೂರಿಹೋಗುತ್ತಿದೆ ಗಾಳಿಯಂತೆ ನನ್ನ ಯೋಗಕ್ಷೇಮ ತೇಲಿಹೋಗುತ್ತಿದೆ ಮೋಡದಂತೆ.


ಆಮೇಲೆ ಉತ್ತರರಾಜನ ಮಕ್ಕಳು ಯುದ್ಧಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯ ಬೆಳೆದು ತುಂಬಿತುಳುಕುವ ಪ್ರವಾಹದಂತೆ ಹಬ್ಬಿಕೊಳ್ಳುವುದು. ಅವರು ಮತ್ತೆ ಯುದ್ಧಕ್ಕೆ ಹೊರಟು ದಕ್ಷಿಣರಾಜನ ದುರ್ಗದವರೆಗೆ ನುಗ್ಗುವರು.


ನಿನ್ನ ಕಡುಕೋಪವನು ಎಲ್ಲೆಡೆಯೂ ಹರಡಿಸು ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು.


ಇಗೋ, ಸರ್ವೇಶ್ವರನ ದಿನ ಬರುತ್ತಿದೆ ! ಭೂಮಿಯನ್ನು ಹಾಳುಮಾಡಲು, ಪಾಪಿಗಳನ್ನು ನಿರ್ಮೂಲಮಾಡಲು; ಕೋಪೋದ್ರೇಕದಿಂದ, ರೋಷಾವೇಶದಿಂದ, ಕ್ರೂರವಾಗಿ ಬರುತ್ತಿದೆ !


ಆಕಾಶದ ತಾರೆಗಳು, ನಕ್ಷತ್ರಗಳು ಬೆಳಗವು, ಸೂರ್ಯನು ಅಂಧಕಾರಮಯನಾಗುವನು, ಚಂದ್ರನು ಕಾಂತಿಹೀನನಾಗುವನು.


ಇದೋ, ಸರ್ವೇಶ್ವರ ಸ್ವಾಮಿ ಬಳಿ ಮಹಾ ಬಲಿಷ್ಠನೊಬ್ಬನು ಇದ್ದಾನೆ. ಆತನು ರಭಸವಾಗಿರುವ ಕಲ್ಮಳೆಯಂತೆ, ವಿನಾಶಕರವಾದ ಬಿರುಗಾಳಿಯಂತೆ, ಕೊಚ್ಚಿ ಹರಿಯುವ ತುಂಬು ಪ್ರವಾಹದಂತೆ ಬರುವನು. ಆ ನಗರ ನೆಲಕ್ಕೆ ಕುಸಿದುಬಿದ್ದು ನೆಲಸಮವಾಗುವಂತೆ ಮಾಡುವನು.


ಆಮೇಲೆ, ‘ಸರ್ವೇಶ್ವರ ಸ್ವಾಮಿ ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಈ ನಗರ ಹೀಗೆಯೇ ಮುಳುಗುವುದು, ಮತ್ತೆ ಏಳದು,’ ಎಂದು ಹೇಳು.” ಇಲ್ಲಿಗೆ ಯೆರೆಮೀಯನ ಪ್ರವಾದನೆ ಮುಗಿಯಿತು.


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ಮೃತ್ಯುವಿನೊಂದಿಗೆ ನೀವು ಮಾಡಿಕೊಂಡ ಒಪ್ಪಂದ ಬಿದ್ದುಹೋಗುವುದು. ಆ ಮಹಾವಿಪತ್ತು ನಾಡನ್ನು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು