ನಹೂಮ 2:10 - ಕನ್ನಡ ಸತ್ಯವೇದವು C.L. Bible (BSI)10 ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿನವೆಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ಕರಗಿ ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಗರಿಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಈಗ ನಿನೆವೆಯು ಖಾಲಿಯಾಯಿತು. ಎಲ್ಲಾ ದೋಚಲ್ಪಟ್ಟಿತು. ನಗರವು ನಾಶವಾಯಿತು. ಜನರು ತಮ್ಮ ಧೈರ್ಯ ಕಳೆದುಕೊಂಡಿದ್ದಾರೆ. ಭಯದಿಂದ ಅವರ ಹೃದಯವು ಕರಗುತ್ತಿದೆ. ಮೊಣಕಾಲುಗಳು ನಡುಗುತ್ತಿದೆ. ಅವರ ದೇಹವು ಅಲ್ಲಾಡುತ್ತಿದೆ. ಭಯದಿಂದ ಅವರ ಮುಖವು ರಕ್ತಹೀನವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿನೆವೆ ಬರಿದಾಗಿದೆ, ಸುಲಿಗೆಯಾಗಿದೆ, ಹಾಳುಬಿದ್ದಿದೆ, ಹೃದಯಗಳು ಕರಗುತ್ತವೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲರ ಸೊಂಟಗಳಲ್ಲಿ ಸಂಕಟವಿದೆ; ಎಲ್ಲಾ ಮುಖಗಳು ಕಳೆಗುಂದುತ್ತವೆ. ಅಧ್ಯಾಯವನ್ನು ನೋಡಿ |
‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”