Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:11 - ಕನ್ನಡ ಸತ್ಯವೇದವು C.L. Bible (BSI)

11 ಮೃಗರಾಜನ ಗವಿಯೆಲ್ಲಿ? ಯುವಸಿಂಹಗಳ ಹಕ್ಕೆಯೆಲ್ಲಿ? ಸಿಂಹ ಸಿಂಹಿಣಿಗಳು, ಅವುಗಳ ಮರಿಗಳು ಹೆದರದೆ ತಿರುಗಾಡುತ್ತಿದ್ದ ಎಡೆಯೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೃಗರಾಜರ ಪ್ರಾಯದ ಸಿಂಹಗಳ ಗವಿ ಎಲ್ಲಿ? ಸಿಂಹ, ಸಿಂಹಿಣಿ, ಸಿಂಹದ ಮರಿ ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೃಗರಾಜರ ಗವಿ, ಪ್ರಾಯದ ಸಿಂಹಗಳ ಹಕ್ಕೆ ಎಲ್ಲಿ? ಸಿಂಹ, ಸಿಂಹಿ, ಸಿಂಹದ ಮರಿ, ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸಿಂಹದ ಗುಹೆಯಂತಿದ್ದ ನಿನೆವೆಯು ಎಲ್ಲಿ? ಗಂಡು ಹೆಣ್ಣು ಸಿಂಹಗಳು ಅದರೊಳಗೆ ವಾಸಿಸುತ್ತಿದ್ದವು. ಅದರ ಮರಿಗಳಿಗೆ ಭಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸಿಂಹದ ಗವಿಯೂ, ಎಳೆಯ ಸಿಂಹಗಳು ಮೇಯುವ ಸ್ಥಳವೂ ಎಲ್ಲಿ? ಸಿಂಹವೂ, ಸಿಂಹಿಣಿಯೂ, ಸಿಂಹದ ಮರಿಗಳೂ ಭಯವಿಲ್ಲದೆ ನಡೆದಾಡುವ ಸ್ಥಳಗಳೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:11
17 ತಿಳಿವುಗಳ ಹೋಲಿಕೆ  

ಗರ್ಜಿಸುತಿಹರು ಸೈನಿಕರು ಸಿಂಹದಂತೆ, ಆರ್ಭಟಿಸುತಿಹರವರು ಪ್ರಾಯದ ಸಿಂಹಗಳಂತೆ, ಗುರುಗುಟ್ಟುತಿಹರು ಬೇಟೆ ಹಿಡಿದ ಕೇಸರಿಯಂತೆ. ಅದನ್ನೆತ್ತಿಕೊಂಡು ಓಡುತಿಹರು, ಬಿಡಿಸುವರಾರೂ ಇಲ್ಲದಂತೆ.


ಶತ್ರುಗಳು ಯುವ ಸಿಂಹಗಳಂತೆ ಅವನಿಗೆ ವಿರುದ್ಧ ಗರ್ಜಿಸಿ ಆರ್ಭಟಿಸುತ್ತಿವೆ; ಅವನ ನಾಡನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.


ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ಧಿಕ್ಕಾರ ರಕ್ತಮಯವಾದ ನಗರಕೆ! ತುಂಬಿದೆ ಅದರಲಿ ಸುಳ್ಳು ಮತ್ತು ಸುಲಿಗೆ ನಿಲ್ಲದೆ ನಡೆಯುತ್ತಿದೆ ಅದರಲಿ ಕೊಳ್ಳೆ.


ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


“ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.


ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಸಿಂಹವೋ ಪ್ರಾಯದ ಸಿಂಹವೋ ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಆ ಕೂಗನ್ನು ಕೇಳಿ ಕುರುಬರನೇಕರು ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದು, ಅವರ ಗದ್ದಲಕ್ಕೆ ಎದೆಗುಂದದು. ಅಂತೆಯೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆದ ನಾನು ಯುದ್ಧಮಾಡಲು ಸಿಯೋನ್ ಶಿಖರದ ಮೇಲೆ ಇಳಿದು ಬರುವಾಗ ನನ್ನನ್ನು ಯಾರೂ ಹೆದರಿಸುವುದಿಲ್ಲ, ಎದೆಗುಂದಿಸುವಂತಿಲ್ಲ.


ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ ಕಾಲು ಮಡಿಚಿ ಹೊಂಚು ಕೂತ ಕೇಸರಿಯಂತೆ ಈ ಸಿಂಹಿಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ?


ಈ ಜನಾಂಗ ಯುವಸಿಂಹದಂತೆ ನಿಂತಿಹುದು ಮೃಗೇಂದ್ರನಂತೆ ಮೃಗ ಕೊಂದು, ರಕ್ತ ಕುಡಿದು, ಮಾಂಸ ತಿಂದು, ತೃಪ್ತಿಹೊಂದದ ಹೊರತು ಆ ಸಿಂಹ ವಿರಮಿಸದು.”


“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನನ್ನು ಕುರಿತು ಶೋಕಗೀತೆಯೊಂದನ್ನು ನುಡಿ : “ನೀನು ಮೃಗರಾಜನೆನಿಸಿಕೊಂಡಿರುವೆ ಜನಾಂಗಗಳಲ್ಲಿ, ಇಗೋ ದೊಡ್ಡ ಮೊಸಳೆಯಾಗಿಬಿಟ್ಟಿರುವೆ ಮಹಾನದಿಯಲ್ಲಿ. ನೀನಿದ್ದ ನದಿಗಳ ಭೇದಿಸಿಕೊಂಡು ಬಂದು, ಕಾಲಿಂದ ನೀ ಕಲಕಿರುವೆ ಅದರ ನೀರನ್ನು, ತುಳಿದು ಬದಿಮಾಡಿರುವೆ ಜನಾಂಗವೆಂಬ ಹೊಳೆಯನ್ನು.”


ಅಸ್ಸೀರಿಯದವರು ಇವರ ಶಸ್ತ್ರಾಸ್ತ್ರಗಳಿಗೆ ತುತ್ತಾಗುವರು. ನಿಮ್ರೋದ್ ಸೀಮೆಯ ಪ್ರವೇಶದ್ವಾರಗಳು ಧ್ವಂಸವಾಗುವುವು. ಅಸ್ಸೀರಿಯದವರು ನಮ್ಮ ನಾಡಿಗೆ ನುಗ್ಗಿ ನಮ್ಮ ಕೋಟೆಯನ್ನು ಆಕ್ರಮಿಸುವಾಗ, ಆ ಶಾಂತಿದಾತನು ನಮ್ಮನ್ನು ರಕ್ಷಿಸುವನು.


ಅಲ್ಲಿ ಸಿಂಹಬೇಟೆಯನ್ನು ಸೀಳಿಹಾಕುತ್ತಿತ್ತು ತನ್ನ ಮರಿಗಳಿಗಾಗಿ; ಕೊರಳುಹಿಡಿದು ಪ್ರಾಣಿಗಳನ್ನು ಹೊಸಕುತ್ತಿತ್ತು ಸಿಂಹಿಣಿಗಳಿಗಾಗಿ; ಗವಿಗಳನ್ನು ಬೇಟೆಯಿಂದ, ಹಕ್ಕೆಗಳನ್ನು ಮಾಂಸದಿಂದ ತುಂಬಿಸುತ್ತಿತ್ತು ಅವುಗಳಿಗಾಗಿ.


ಈ ಕಾರಣ ಜೋಲುಬೀಳುವುವು ಎಲ್ಲರ ಕೈಗಳು; ಕರಗಿ ನೀರಾಗುವುವು ಎಲ್ಲರ ಹೃದಯಗಳು.


ಅವುಗಳ ನೋಟ, ರಾಷ್ಟ್ರಗಳಿಗೆ ಪ್ರಾಣಸಂಕಟ; ಎಲ್ಲರ ಮುಖಗಳಿಗೆ ಮಂಕಾಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು