Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:2 - ಕನ್ನಡ ಸತ್ಯವೇದವು C.L. Bible (BSI)

2 (ಸರ್ವೇಶ್ವರ, ಕೊಳ್ಳೆಗಾರರು ಸುಲಿಗೆಮಾಡಿದ್ದನ್ನೂ ಮುರಿದುಹಾಕಿದ ದ್ರಾಕ್ಷಿಯ ತೋಟಗಳನ್ನೂ ಸರಿಪಡಿಸಲಿದ್ದಾರೆ. ಯಕೋಬಿನ ಮಹತ್ವವನ್ನು ಹಾಗೂ ಇಸ್ರಯೇಲಿನ ಮಹಿಮೆಯನ್ನು ಈಗ ಮತ್ತೆ ಸ್ಥಾಪಿಸಲಿದ್ದಾರೆ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯದಂತೆ ಪುನರುಜ್ಜೀವನಗೋಳಿಸುವನು; ಕೊಳ್ಳೆಹೊಡೆಯುವವರು ಆ ಅತಿಶಯವನ್ನು ಸೂರೆಗೈದು ಅವುಗಳ ದ್ರಾಕ್ಷಾಲತೆಗಳನ್ನು ಹಾಳುಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 (ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯವನ್ನು ಸಹ ಪುನರುಜ್ಜೀವನ ಮಾಡುವನು; ಸೂರೆಗಾರರು ಅವುಗಳನ್ನು ಸೂರೆಗೈದು ಅವುಗಳ ಶಾಖೆಗಳನ್ನು ಹಾಳುಮಾಡಿದ್ದರಷ್ಟೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹೌದು, ಯೆಹೋವನು ಯಾಕೋಬನ ವೈಭವವನ್ನು ಇಸ್ರೇಲಿನ ವೈಭವವಾಗಿ ಸ್ಥಾಪಿಸುವನು. ವೈರಿಯು ಅವರನ್ನು ನಾಶಮಾಡಿ ಅವರ ದ್ರಾಕ್ಷಿಬಳ್ಳಿಯನ್ನು ಹಾಳುಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಯಾಕೋಬಿನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ಪುನಃ ಸ್ಥಾಪಿಸುತ್ತಾರೆ. ನಾಶಕರು ಅವುಗಳನ್ನು ನಾಶಮಾಡಿದರೂ ಅವರ ದ್ರಾಕ್ಷಿಬಳ್ಳಿಗಳನ್ನು ಕೆಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:2
14 ತಿಳಿವುಗಳ ಹೋಲಿಕೆ  

ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ.


ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯ ವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ, ತಮ್ಮನ್ನು ಇನ್ನು ಮುಂದೆ ಹೊಲೆಗೆ ಹೊಯ್ದುಕೊಳ್ಳರು. ಅವರು ಪಾಪ ಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಪರಿತ್ಯಕ್ತಳೂ ದ್ವೇಷಿತಳೂ ಆದ ನಿರ್ಜನ ನಗರಿಯೇ, ನಿತ್ಯಘನತೆಯನು, ಶಾಶ್ವತ ಸಂತೋಷವನು ನೀಡುವೆ ನಿನಗೆ.


ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ.


ದ್ರಾಕ್ಷೆಯ ಹಣ್ಣನ್ನು ಕೀಳುವವರು ನಿನ್ನಲ್ಲಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸುತ್ತಿದ್ದರಲ್ಲವೆ? ಕಳ್ಳರು ರಾತ್ರಿವೇಳೆಯಲ್ಲಿ ಮನೆಗೆ ನುಗ್ಗಿದರೆ ತಮಗೆ ಸಾಕಾಗುವಷ್ಟನ್ನು ಮಾತ್ರ ಕೊಳ್ಳೆಹೊಡೆಯುತ್ತಿದ್ದರಲ್ಲವೆ?


ಇಗೋ, ನನ್ನ ಹೆಸರುಗೊಂಡಿರುವ ನಗರದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಳ್ಳುವಿರೊ? ಆಗುವುದೇ ಇಲ್ಲ. ಏಕೆಂದರೆ ಭೂನಿವಾಸಿಗಳೆಲ್ಲರಿಗೆ ವಿರುದ್ಧವಾಗಿ ಖಡ್ಗವನ್ನು ಬರಮಾಡುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.’


ಆಯ್ದನಾಡನು ಸೊತ್ತಾಗಿ ನೀಡಿದನೆಮಗೆ I ಪ್ರತಿಷ್ಠಿತರು ನಾವು, ಆತನೊಲಿದ ಯಕೋಬಿಗೆ II


ಮೋವಾಬು ಚಿಕ್ಕತನದಿಂದಲೂ ನೆಮ್ಮದಿಯಾಗಿದೆ. ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ. ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ. ಅದು ಎಂದೂ ಸೆರೆಹೋಗಲಿಲ್ಲ. ಆದಕಾರಣ ಅದರ ರುಚಿ ಅದರಲ್ಲಿದೆ. ಅದರ ವಾಸನೆ ಮಾರ್ಪಡಲಿಲ್ಲ.


ಇದನ್ನೂ ಅವರಿಗೆ ನುಡಿ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಗೋ, ಇಸ್ರಯೇಲರು ವಶವಾಗಿರುವ ಜನಾಂಗಗಳಿಂದ ನಾನು ಅವರನ್ನು ಉದ್ಧರಿಸಿ, ಎಲ್ಲ ಕಡೆಯಿಂದಲು ಒಟ್ಟುಗೂಡಿಸಿ, ಸ್ವದೇಶಕ್ಕೆ ಕರೆದುತರುವೆನು.


ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ.


ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿ ಶೇಖರಿಸಿಡು. ನಿನ್ನ ಕೋಟೆಯನ್ನು ಭದ್ರಪಡಿಸು. ಮಣ್ಣಿಗೆ ಇಳಿ; ಜೇಡಿಯನ್ನು ತುಳಿ; ಇಟ್ಟಿಗೆಯ ಅಚ್ಚನ್ನು ಹಿಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು