ನಹೂಮ 2:5 - ಕನ್ನಡ ಸತ್ಯವೇದವು C.L. Bible (BSI)5 ಹಾಜರಾಗಲು ಕರೆಬಂದಿದೆ ಅರಸನಿಂದ ಸೇನಾಪತಿಗಳಿಗೆ; ಎದ್ದುಬಿದ್ದು ಓಡಾಡುತ್ತಿರೆ ಅವರು ಪೌಳಿಗೋಡೆ ಕಡೆಗೆ ಅಡ್ಡ ಗುರಾಣಿಗಳನ್ನೊಡ್ಡುತ್ತಿರೆ ಟಗರು ದಿಮ್ಮಿಗಳಿಗೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಪಟ್ಟಣದ ಅರಸನು ತನ್ನ ಸರದಾರರನ್ನು ಕರೆಕಳುಹಿಸಿದ್ದಾನೆ; ಅವರು ಓಡಿ ಹೋಗುತ್ತಾ ಮುಗ್ಗರಿಸುತ್ತಾರೆ; ಪೌಳಿಗೋಡೆ ಕಡೆಗೆ ತ್ವರೆಯಾಗಿ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 [ಪಟ್ಟಣದ] ಅರಸನು ತನ್ನ ಸರದಾರರನ್ನು ಸ್ಮರಿಸುತ್ತಾನೆ; ಹೋಗುತ್ತಾ ಮುಗ್ಗರಿಸುತ್ತಾರೆ; ಪೌಳಿಗೋಡೆಗೆ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ವೈರಿಗಳು ತಮ್ಮ ಶೂರ ಯೋಧರನ್ನು ಕರೆಯುತ್ತಿದ್ದಾರೆ. ಅವರು ಮುನ್ನುಗ್ಗುವಾಗ ಎಡವಿಬೀಳುವರು, ಗೋಡೆಗಳ ಕಡೆಗೆ ನುಗ್ಗಿ ತಮ್ಮ ಗುರಾಣಿಗಳನ್ನು ಇಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿನೆವೆಯು ತನ್ನ ಸೇನಾಪತಿಗಳನ್ನು ಕರೆಕಳುಹಿಸಿದ್ದಾನೆ. ಅವರು ತಮ್ಮ ನಡೆಯಲ್ಲಿ ಎಡವುವರು. ಅವರು ಸುಣ್ಣದ ಗೋಡೆಯ ಬಳಿಗೆ ತ್ವರೆಯಾಗಿ ಬರುವರು. ರಕ್ಷಣಾತ್ಮಕ ಗುರಾಣಿಯನ್ನು ಸಿದ್ಧ ಮಾಡಲಾಗಿದೆ. ಅಧ್ಯಾಯವನ್ನು ನೋಡಿ |