ನಹೂಮ 2:8 - ಕನ್ನಡ ಸತ್ಯವೇದವು C.L. Bible (BSI)8 ನಿನೆವೆ ಕಟ್ಟೆಯೊಡೆದ ಕೆರೆಯಂತಿದೆ; “ನಿಲ್ಲಿರಿ! ನಿಲ್ಲಿರಿ!” ಎಂಬ ಕೂಗು ಕೇಳುತ್ತಿದೆ; ಆದರೂ ಓಡುತಿಹರು ಜನರೆಲ್ಲರು ಹಿಂದೆ ನೋಡದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪುರಾತನ ಕಾಲದಿಂದ ನಿನವೆ ಪಟ್ಟಣವೂ ಕಟ್ಟೆ ಒಡೆದು ನೀರು ತುಂಬಿದ ಕೆರೆಯಂತೆ ಇದೆ. ಆಹಾ! ಹರಿದು ಓಡುವ ನೀರಿನಂತೆ ಅದರ ನಿವಾಸಿಗಳು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಎಂದು ಅಪ್ಪಣೆಯಾದರೂ ಯಾರೂ ಹಿಂದೆ ನೋಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪುರಾತನಕಾಲದಿಂದ ನಿನೆವೆಯು ನೀರು ತುಂಬಿದ ಕೆರೆಯಂತೆ ಇರುತ್ತದೆ; ಆಹಾ, [ಒಡೆದು ಓಡುವ ನೀರಿನಂತೆ ಅದರ ನಿವಾಸಿಗಳು] ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ [ಎಂದು ಅಪ್ಪಣೆಯಾದರೂ] ಯಾರೂ ಹಿಂದೆ ನೋಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಿನೆವೆಯು ನೀರು ಬತ್ತುತ್ತಿರುವ ಕೊಳದಂತಿದೆ. “ನಿಲ್ಲಿ, ನಿಲ್ಲಿ, ಓಡಿಹೋಗಬೇಡಿ” ಎಂದು ಜನರು ಬೊಬ್ಬಿಡುತ್ತಾರೆ. ಆದರೆ ಅದರಿಂದ ಪ್ರಯೋಜನವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು. ಅದರ ನೀರು ಹರಿದು ಖಾಲಿಯಾಗುತ್ತಲಿದೆ. “ನಿಲ್ಲಿರಿ! ನಿಲ್ಲಿರಿ!” ಎಂದು ಅವರು ಕೂಗಿದರೂ, ಒಬ್ಬನೂ ಹಿಂದಕ್ಕೆ ನೋಡುವುದಿಲ್ಲ. ಅಧ್ಯಾಯವನ್ನು ನೋಡಿ |