Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 3:15 - ಕನ್ನಡ ಸತ್ಯವೇದವು C.L. Bible (BSI)

15 ನೀನು ಇದ್ದಲ್ಲಿಯೇ ಬೆಂಕಿ ನಿನ್ನನ್ನು ಕಬಳಿಸುವುದು. ಕತ್ತಿಯು ನಿನ್ನನ್ನು ಕಡಿದುಬಿಡುವುದು. ಮಿಡತೆಗಳು ಬೆಳೆಯನ್ನು ನುಂಗುವಂತೆ ಶತ್ರುಗಳು ನಿನ್ನನ್ನು ನುಂಗಿಬಿಡುವರು. “ನಿನ್ನ ಜನರು ಮಿಡತೆಗಳಂತೆ ಅಸಂಖ್ಯಾತರಾಗಲಿ! ಗುಂಪುಮಿಡತೆಗಳಂತೆ ಅಪರಿಮಿತರಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದ್ದಲ್ಲಿಯೇ ಬೆಂಕಿಯು ನಿನ್ನನ್ನು ನುಂಗುವುದು. ಕತ್ತಿಯು ನಿನ್ನನ್ನು ಕಡಿದುಬಿಡುವುದು, ಮಿಡತೆಗಳೋಪಾದಿಯಲ್ಲಿ ನುಂಗಲ್ಪಡುವಿ; ನಿನ್ನ ಜನಸಂಖ್ಯೆಯು ಮಿಡತೆಗಳಷ್ಟು ಅಸಂಖ್ಯಾತವಾಗಲಿ, ಗುಂಪುಮಿಡತೆಗಳಷ್ಟು ಅಪರಿಮಿತವಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದ್ದಲ್ಲಿಯೇ ಬೆಂಕಿಯು ನಿನ್ನನ್ನು ನುಂಗುವದು, ಕತ್ತಿಯು ನಿನ್ನನ್ನು ಕಡಿದುಬಿಡುವದು, ವಿುಡತೆಗಳೋಪಾದಿಯಲ್ಲಿ ನುಂಗಲ್ಪಡುವಿ; ನಿನ್ನ ಜನಸಂಖ್ಯೆಯು ವಿುಡತೆಗಳಷ್ಟು ಅಸಂಖ್ಯಾತವಾಗಲಿ. ಗುಂಪುವಿುಡತೆಗಳಷ್ಟು ಅಪರಿವಿುತವಾಗಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇವೆಲ್ಲವನ್ನು ನೀನು ಮಾಡಬಹುದು. ಆದರೂ ಬೆಂಕಿಯು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುವುದು. ಖಡ್ಗವು ನಿನ್ನನ್ನು ಸಾಯಿಸುವದು. ನಿನ್ನ ದೇಶವು ಮಿಡತೆಗಳ ಹಿಂಡಿನಿಂದ ತಿಂದುಹಾಕಲ್ಪಟ್ಟ ದೇಶದಂತೆ ಕಾಣುವುದು. ನಿನೆವೆಯೇ, ನೀನು ಬೆಳೆಯುತ್ತಾ ಬೆಳೆಯುತ್ತಾ ಮಿಡತೆಗಳ ಹಿಂಡಿನಂತಾದೆ. ನೀನು ಮಿಡತೆಗಳಂತಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಲ್ಲೇ ಬೆಂಕಿ ನಿನ್ನನ್ನು ತಿನ್ನುವುದು; ಖಡ್ಗವು ನಿನ್ನನ್ನು ಕಡಿದುಬಿಡುವುದು; ಹುಲ್ಲು ಮೇಯುವ ಹುಳ ನಿನ್ನನ್ನು ತಿಂದುಬಿಡುವುದು; ಬಹುಮಂದಿಯಾಗು, ಮಿಡತೆಗಳಂತೆ ಬಹುಮಂದಿಯಾಗು, ಗುಂಪು ಮಿಡತೆಗಳಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 3:15
10 ತಿಳಿವುಗಳ ಹೋಲಿಕೆ  

ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದುಬಿಟ್ಟಿದ್ದನ್ನು ಕುದುರೆಮಿಡತೆ ತಿಂದುಬಿಟ್ಟಿತು; ಕುದುರೆಮಿಡತೆ ಬಿಟ್ಟದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.


ನಿನ್ನ ಯೋಧರನ್ನು ನೋಡು; ಅವರೆಲ್ಲ ಹೆಣ್ಣಿಗರು. ನಿನ್ನ ದೇಶದ ದ್ವಾರಗಳು ಶತ್ರುಗಳಿಗೆ ತೆರೆದ ಬಾಗಿಲುಗಳು. ಅದರ ಕಬ್ಬಿಣದ ಅಗುಳಿಗಳು ಬೆಂಕಿಯಿಂದ ಭಸ್ಮವಾದವು.


ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನಗೆ ವಿರುದ್ಧವಾಗಿದ್ದೇನೆ ನಾನು; ಸುಟ್ಟು ಭಸ್ಮಮಾಡುವೆ ನಿನ್ನ ರಥಗಳನು; ಸಂಹರಿಸಿಬಿಡುವೆನು ನಿನ್ನ ಯುವಸಿಂಹಗಳನು; ನಿನಗೆ ಜಗದಲ್ಲೆಲ್ಲ ಬೇಟೆ ಸಿಗದಂತೆ ಮಾಡುವೆನು; ಯಾರೂ ಕೇಳರು ನಿನ್ನ ರಾಯಭಾರಿಗಳ ಮಾತನು.”


ಅಸ್ಸೀರಿಯವನ್ನು ಸರ್ವೇಶ್ವರ ತಮ್ಮ ಭುಜಬಲದಿಂದ ಧ್ವಂಸಮಾಡುವರು; ನಿನೆವೆ ಪಟ್ಟಣವನ್ನು ಹಾಳುಬಿದ್ದ ಅವಶೇಷವಾಗಿ, ನೀರಿಲ್ಲದ ಮರುಭೂಮಿಯಾಗಿ ಮಾಡುವರು.


ಗುಂಪುಮಿಡತೆ, ಕಂಬಳಿಮಿಡತೆ, ಚೂರಿಮಿಡತೆ, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಿಮಗೆ ಭರಿಸಿಕೊಡುವೆನು.


ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ


ನ್ಯಾಯ ತೀರಿಸುವನು ಸರ್ವೇಶ್ವರ ಮನುಜರಿಗೆಲ್ಲ ಅಗ್ನಿಯಿಂದ, ತನ್ನ ಖಡ್ಗದಿಂದ. ಹತರಾಗುವರು ಬಹುಜನ ಆತನಿಂದ.


ಸೇನಾಧೀಶ್ವರ ಸರ್ವೇಶ್ವರ ತಮ್ಮ ಮೇಲೆ ಆಣೆಯಿಟ್ಟು ಹೇಳುವುದು ಇದು: “ಖಂಡಿತವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುವೆನು. ಅವರು ನಿನ್ನ ಮೇಲೆ ಜಯಘೋಷಮಾಡುವರು.”


ಒಡೆಯರಾದ ಸರ್ವೇಶ್ವರ ನನಗೆ ತೋರಿಸಿದ ದರ್ಶನ ಇದು: ಹಿಂಗಾರು ಮಳೆ ಬಿದ್ದಿತ್ತು. ಪೈರು ಸೊಂಪಾಗಿ ಬೆಳೆಯಲು ಆರಂಭಿಸಿತ್ತು. ಈಗಾಗಲೇ ರಾಜಾದಾಯದ ಹುಲ್ಲಿನ ಕೊಯಿಲು ಮುಗಿದು ಮತ್ತೆ ಹುಲ್ಲು ಬೆಳೆಯುತ್ತಿತ್ತು. ಆಗ ಸರ್ವೇಶ್ವರ ಮಿಡತೆಗಳ ಗುಂಪೊಂದನ್ನು ಹೊರಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು