Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:10 - ಕನ್ನಡ ಸತ್ಯವೇದವು C.L. Bible (BSI)

10 ಅವರು ನಿಮ್ಮ ದಾಸರು ಹಾಗೂ ನೀವು ನಿಮ್ಮ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿಮ್ಮ ಪ್ರಜೆಗಳೂ ಆಗಿರುತ್ತಾರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಅವರು ನಿನ್ನ ಸೇವಕರೂ, ನೀನು ನಿನ್ನ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ನಿನ್ನ ಸೇವಕರೂ ನೀನು ನಿನ್ನ ಮಹಾಶಕ್ತಿಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಇಸ್ರೇಲ್ ಜನರು ನಿನ್ನ ಜನಾಂಗ; ಅವರು ನಿನ್ನ ಸೇವಕರಾಗಿದ್ದಾರೆ. ನೀನು ನಿನ್ನ ಮಹಾಶಕ್ತಿಯನ್ನು ಉಪಯೋಗಿಸಿ ಅವರನ್ನು ರಕ್ಷಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಅವರು ನಿಮ್ಮ ಮಹಾಶಕ್ತಿಯಿಂದಲೂ, ನಿಮ್ಮ ಭುಜಪರಾಕ್ರಮಗಳಿಂದ ನೀವು ವಿಮೋಚಿಸಿದ ನಿಮ್ಮ ಸೇವಕರೂ, ನಿಮ್ಮ ಜನರೂ ಆಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:10
17 ತಿಳಿವುಗಳ ಹೋಲಿಕೆ  

ಮಹಾಶಕ್ತಿಯಿಂದಲೂ ಭುಜಬಲದಿಂದಲೂ ನೀವು ಬಿಡಿಸಿದ ನಿಮ್ಮ ಸ್ವಕೀಯ ಜನ ಹಾಗು ಸೊತ್ತು ಇವರಲ್ಲವೇ? ಎಂದು ಬಿನ್ನೈಸಿದೆ.


ಆಗ ಮೋಶೆ ತನ್ನ ದೇವರಾದ ಸರ್ವೇಶ್ವರನನ್ನು ಹೀಗೆಂದು ಬೇಡಿಕೊಂಡನು: “ಸ್ವಾಮಿ ಸರ್ವೇಶ್ವರಾ, ಮಹಾಶಕ್ತಿಯಿಂದಲೂ ಭುಜಬಲದಿಂದಲೂ ತಾವೇ ಈಜಿಪ್ಟಿನಿಂದ ಬಿಡಿಸಿದ ತಮ್ಮ ಪ್ರಜೆಯ ಮೇಲೆ ಕೋಪಾಗ್ನಿ ಕಾರಬಹುದೆ?


ಸ್ವಾಮಿ, ನಮ್ಮ ಮೇಲೆ ಅತಿಕೋಪಗೊಳ್ಳದಿರಿ. ಸದಾ ನಮ್ಮ ಅಕ್ರಮಗಳನ್ನು ನೆನೆಸದಿರಿ, ಇಗೋ ನೋಡಿ, ಬೇಡುತ್ತಿದ್ದೇವೆ, ನಾವೆಲ್ಲರೂ ನಿಮ್ಮ ಜನರು.


ಭುಜಬಲದಿಂದ ಕೈಚಾಚಿ ಅವರನು ಬಿಡಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ನೆನಸಿಕೊ ಆದಿಯಲೆ ನೀ ಸಂಪಾದಿಸಿಕೊಂಡ ಸಭೆಯನು I ಸ್ಮರಿಸಿಕೊ ಸೊತ್ತಾಗಿ ನೀ ರಕ್ಷಿಸಿಕೊಂಡ ಗೋತ್ರವನು I ಜ್ಞಾಪಿಸಿಕೊ ನಿನ್ನ ಸದನವಾಗಿದ್ದ ಸಿಯೋನ್ ಶಿಖರವನು II


ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ.


ನೀ ಬಿಡುಗಡೆ ಮಾಡಿದ ಜನರನ್ನು ನಡೆಸಿಕೊಂಡೆ ಪ್ರೀತಿಯಿಂದ ನಿನ್ನ ಶ್ರೀನಿವಾಸದ ತನಕ ಅವರನ್ನು ಬರಮಾಡಿದೆ ಶಕ್ತಿಯಿಂದ.


ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.


ಅದಕ್ಕೆ ಸರ್ವೇಶ್ವರ ಸ್ವಾಮಿ ಮೋಶೆಗೆ, “ನಾನು ಫರೋಹನಿಗೆ ಮಾಡಲು ಹೋಗುವುದನ್ನು ನೀನು ಇಷ್ಟರಲ್ಲೇ ನೋಡುವೆ. ಅವನು ನನ್ನ ಭುಜಬಲವನ್ನು ಕಂಡು ಅವರನ್ನು ಹೋಗಲು ಬಿಡುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ನಾಡಿನಿಂದ ಹೊರಡಿಸುವನು,” ಎಂದರು.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಈ ಸಂದೇಶವನ್ನು ನೀವು ನೆನಪಿನಲ್ಲಿಡಬೇಕು. ಇದಕ್ಕೆ ಈ ಪದ್ಧತಿಯು ನಿಮ್ಮ ಕೈಗೆ ಕಟ್ಟಿದ ಕಂಕಣದಂತಿರುತ್ತದೆ, ಹಣೆಗೆ ಕಟ್ಟಿದ ಜ್ಞಾಪಕಪಟ್ಟಿಯಂತಿರುತ್ತದೆ.


ನೀತಿನ್ಯಾಯ ನಿನ್ನ ಸಿಂಹಾಸನದಸ್ತಿವಾರ I ಪ್ರೀತಿಸತ್ಯತೆ ನಿನ್ನ ಸಾನ್ನಿಧ್ಯ ಪರಿವಾರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು