Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:11 - ಕನ್ನಡ ಸತ್ಯವೇದವು C.L. Bible (BSI)

11 ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸ್ವಾಮೀ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ ನಿನ್ನ ನಾಮಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಆ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಬೇಕು ಎಂದು ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:11
27 ತಿಳಿವುಗಳ ಹೋಲಿಕೆ  

ಕೃಪೆಮಾಡಿ ನನಗೆ ಕಿವಿಗೊಡಿ, ಕಟಾಕ್ಷಿಸಿ ನೋಡಿ; ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿ, ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ; ಅವರು ನಿಮಗೆ ವಿರುದ್ಧ ಮಾಡಿದ ಪಾಪಗಳನ್ನು ಅರಿಕೆಮಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.


ರಾಜ ವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳನ್ನೂ ಪಟ್ಟಣದ ಪೌಳಿಗೋಡೆಯನ್ನೂ ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡಬೇಕಾಗುತ್ತದೆ; ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆ. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ ರಾಜನು ಅವುಗಳನ್ನು ನನಗೆ ಕೊಟ್ಟನು.


ನಾನು ರಾಜನ ಪಾನಸೇವಕನಾಗಿದ್ದೆ. ಅರ್ತಷಸ್ತರಾಜನ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ, ರಾಜನು ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ, ದ್ರಾಕ್ಷಾರಸವನ್ನು ತಂದುಕೊಟ್ಟೆ. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ.


ನಮಗಾಗಿಯೂ ಪ್ರಾರ್ಥಿಸಿರಿ. ಎಲ್ಲಾ ವಿಷಯಗಳಲ್ಲಿ ನಾವು ಸಜ್ಜನರಾಗಿ ನಡೆದುಕೊಳ್ಳಬೇಕೆಂಬುದೇ ನಮ್ಮ ಅಪೇಕ್ಷೆ. ನಮ್ಮ ಮನಸ್ಸಾಕ್ಷಿ ಶುದ್ಧವಾಗಿದೆಯೆಂಬ ದೃಢನಂಬಿಕೆ ನಮಗಿದೆ.


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ಆಲಿಸು, ಕಿವಿಗೊಡು ಪ್ರಭೂ, ನನ್ನಾರ್ತ ವಿಜ್ಞಾಪನೆಗೆ II


ಎಜ್ರನು, ಇಸ್ರಯೇಲ್ ದೇವರಾದ ಸರ್ವೇಶ್ವರನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾಂಡಿತ್ಯ ಪಡೆದ ಒಬ್ಬ ಧರ್ಮಶಾಸ್ತ್ರಿ ಆಗಿದ್ದನು. ಅವನ ದೇವರಾದ ಸರ್ವೇಶ್ವರನ ಕೃಪಾಹಸ್ತ ಅವನ ಮೇಲಿತ್ತು. ಆದುದರಿಂದ ಅರಸನು ಅವನಿಗೆ ಇಷ್ಟವಾದುದನ್ನೆಲ್ಲ ಅನುಗ್ರಹಿಸಿದನು.


ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ I ನನ್ನ ವಿಜ್ಞಾಪನೆಗಳ ಕೋರಿಕೆಗೆ II


ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು:


ಪಾನಸೇವಕರ ಮುಖ್ಯಸ್ಥನನ್ನು ಪುನಃ ಅವನ ನೌಕರಿಗೆ ಏರಿಸಿದ; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸುವಂಥವನಾದ.


ಆದರೆ ಮುಖ್ಯ ಪಾನಸೇವಕನು ಜೋಸೆಫನನ್ನು ನೆನಪಿಗೆ ತಂದುಕೊಳ್ಳಲಿಲ್ಲ, ಅವನನ್ನು ಮರೆತೇಬಿಟ್ಟ.


ಆಗ ಪಾನಸೇವಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಒಡೆಯಾ, ಈ ದಿನತಾನೆ ನನ್ನ ನೆನಪಿಗೆ ಬರುತ್ತಿದೆ.


ನನ್ನ ಅಣ್ಣ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಂದಿರನ್ನೂ ಕೊಲ್ಲುವನೋ ಏನೋ ಎಂಬ ಭಯ ನನಗಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಏಕೆಂದರೆ ಸುಜ್ಞಾನವನ್ನೇ ಅವರು ದ್ವೇಷಿಸಿದರು, ಸರ್ವೇಶ್ವರನಲ್ಲಿ ಭಯಭಕ್ತಿಯಿರಿಸದೆ ಹೋದರು.


ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ಫರೋಹನು ಆ ಇಬ್ಬರು ನೌಕರರ ಮೇಲೆ, ಅಂದರೆ ಪಾನಸೇವಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆಭಟ್ಟರ ಮುಖ್ಯಸ್ಥನ ಮೇಲೆಯೂ ಕೋಪಗೊಂಡು,


“ನಾನು ಇಂದು ಈ ಊರಿನ ಬುಗ್ಗೆಯ ಬಳಿಗೆ ಬಂದೆ. ‘ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಇಗೋ, ನೀರಿನ ಬುಗ್ಗೆಯ ಬಳಿಯಲ್ಲೇ ನಿಂತಿದ್ದೇನೆ. ನೀವು ನನ್ನ ಪ್ರಯಾಣವನ್ನು ಸಫಲ ಮಾಡಿದ್ದಾದರೆ


ಈ ಘಟನೆಗಳಾದ ಬಳಿಕ ಈಜಿಪ್ಟಿನ ಅರಸನಾದ ಫರೋಹನ ಮುಖ್ಯಪಾನದಾಯಕ ಮತ್ತು ಮುಖ್ಯ ಅಡಿಗೆಭಟ್ಟ ಯಾವುದೋ ವಿಷಯದಲ್ಲಿ ತಮ್ಮ ದಣಿಗೆ ದ್ರೋಹಮಾಡಿದ್ದರು.


“ನನ್ನ ದೇವರೇ, ಕಟಾಕ್ಷವಿಡಿ, ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡಿ.


ನಾ ಹೊತ್ತ ಹರಕೆಗಳಿಗೆ ದೇವಾ ನೀ ಲಕ್ಷ್ಯವಿತ್ತೆ I ನಿನ್ನ ಭಕ್ತರಿಗೆ ಸಿಗುವ ಭಾದ್ಯತೆಯ ನನಗೂ ಇತ್ತೆ II


ನಾನು ನಿಮಗೆ ಕರುಣೆತೋರಿಸುವೆನು. ಅವನು ನಿಮ್ಮ ಮೇಲೆ ಮನಮರುಗಿ ಸ್ವಂತ ನಾಡಿಗೆ ಹೋಗಲುಬಿಡುವಂತೆ ಮಾಡುವೆನು.


ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು