Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:3 - ಕನ್ನಡ ಸತ್ಯವೇದವು C.L. Bible (BSI)

3 ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ. ಜೆರುಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ನನಗೆ - ಸೆರೆಯವರೊಳಗೆ ತಪ್ಪಿಸಿಕೊಂಡು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇವಿುನ ಪೌಳಿಗೋಡೆಯು ಕೆಡವಲ್ಪಟ್ಟಿರುತ್ತದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟ ನಿಂದೆಗಳಿಗೆ ಒಳಗಾಗಿದ್ದಾರೆ. ಯೆರೂಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:3
33 ತಿಳಿವುಗಳ ಹೋಲಿಕೆ  

ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣಮುಂದಿರುತ್ತದಲ್ಲವೇ? ಜೆರುಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಜೆರುಸಲೇಮಿನ ಗೋಡೆಯನ್ನು ಕಟ್ಟೋಣ, ಹೀಗೆ ಮಾಡಿದರೆ ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.


ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತುಗೋಡೆಗಳನ್ನೆಲ್ಲ ಕೆಡವಿದರು.


ಸೆರೆಯಿಂದ ಹಿಂತಿರುಗಿ ಬಂದ ಯೆಹೂದ ಜನಾಂಗದವರ ಪಟ್ಟಿ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಂದ ಸೆರೆಗೆ ಒಯ್ಯಲ್ಪಟ್ಟವರಲ್ಲಿ ಜೆರುಸಲೇಮಿಗೂ ಜುದೇಯ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಹಿಂದಿರುಗಿದವರು ಇವರು: ಅ ಇವರ ನಾಯಕರಲ್ಲಿ


ನಾನು ರಾತ್ರಿ ವೇಳೆಯಲ್ಲಿ ಕಣಿವೆಯ ಬಾಗಿಲಿನಿಂದ ಹೊರಟು, ಹಾಳುಬಿದ್ದ ಜೆರುಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲಾಗಿದ್ದ ಅದರ ಬಾಗಿಲುಗಳನ್ನೂ ನೋಡುತ್ತಾ ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆ.


ನಾನು ರಾಜನಿಗೆ, “ರಾಜಾಧಿರಾಜರು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಹೀಗಿರುವಲ್ಲಿ, ನನ್ನ ಮುಖ ಕಳೆಗುಂದದೆ ಇರಲು ಸಾಧ್ಯವೆ?,” ಎಂದು ಹೇಳಿದೆ.


“ದಾರ್ಯಾವೆಷ ರಾಜರಿಗೆ ಸರ್ವಥಾ ಕ್ಷೇಮ! ನಾವು ಜುದೇಯ ನಾಡಿಗೆ ಹೋಗಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಇದನ್ನು ರಾಜರಿಗೆ ಈ ಮೂಲಕ ಅರಿಕೆಮಾಡುತ್ತಿದ್ದೇವೆ: ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಿದ್ದಾರೆ. ಈ ಕೆಲಸ ಜಾಗರೂಕತೆಯಿಂದ ಮುಂದುವರೆದಿದೆ; ಅವರ ಶ್ರಮೆಯಿಂದ ವೇಗವಾಗಿ ಬೆಳೆಯುತ್ತಿದೆ.


ಹೇ, ಸರ್ವೇಶ್ವರಾ, ನಮಗೊದಗಿರುವ ದುರ್ಗತಿಯನ್ನು ನೆನೆಸಿಕೊ ನಾವು ಸಹಿಸುತ್ತಿರುವ ನಿಂದೆ ಅವಮಾನಗಳನ್ನು ಗಮನಕ್ಕೆ ತಂದುಕೋ.


“ಸರ್ವೇಶ್ವರಾ, ನಿನ್ನ ಕಿವಿಗೆ ಬಿದ್ದಿದೆ ನನ್ನ ವೈರಿ ಕಲ್ಪಿಸಿದ ಕುಯುಕ್ತಿ.


ಜೆರುಸಲೇಮ್ ದಿಕ್ಕುಪಾಲಾಗಿ ಕಷ್ಟಪಡುವಾಗ ನೆನಸಿಕೊಳ್ಳುತ್ತಾಳೆ ತನ್ನ ಪ್ರಾಚೀನ ವೈಭವಗಳನ್ನೆಲ್ಲಾ. ತನ್ನ ಜನತೆ ವೈರಿಗಳ ವಶವಾದಾಗ ಆಕೆಗೆ ಸಿಗಲಿಲ್ಲ ಯಾರೊಬ್ಬರ ಬೆಂಬಲ. ಆಕೆಯಾ ಹೀನಸ್ಥಿತಿ ನೋಡಿ ವೈರಿಗಳು ಮಾಡಿದರು ಪರಿಹಾಸ್ಯ.


ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತ ಗೋಡೆಗಳನ್ನೆಲ್ಲ ಕೆಡವಿದರು.


“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಜೆರುಸಲೇಮಿನ ಮೇಲೆ ಹೇಗೆ ಸುರಿಯಿತೋ ಹಾಗೆಯೆ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೆ ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ನಾಡನ್ನು ನೀವು ಮತ್ತೆ ನೋಡಲಾರಿರಿ.’


ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬಾಬಿಲೋನಿಯದವರು ಬೆಂಕಿಯಿಂದ ಸುಟ್ಟು ಜೆರುಸಲೇಮಿನ ಸುತ್ತಣವಿದ್ದ ಗೋಡೆಗಳನ್ನು ಕೆಡವಿದರು.


ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು.


ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.


ಆಕ್ರಮಣಕಾರರಿಗೆ ಕರೆ; ಸಿಯೋನೆಂಬ ದ್ರಾಕ್ಷಾತೋಟದ ಸಾಲುಗಿಡಗಳನ್ನು ಹಾಳುಮಾಡಿ. ಆದರೆ ಅದನ್ನು ನಿರ್ಮೂಲಮಾಡಬೇಡಿ. ಅದರ ರೆಂಬೆಗಳನ್ನು ಕಿತ್ತುಹಾಕಿ. ಅವು ಸರ್ವೇಶ್ವರನಾದ ನನಗೆ ಸೇರಿದವುಗಳಲ್ಲ.


ಎಂದೇ ಗುರಿಮಾಡಿದೆ ಯಕೋಬನ್ನು ಶಾಪಕ್ಕೆ ಈಡುಪಡಿಸಿದೆ ಇಸ್ರಯೇಲನ್ನು ನಿಂದೆದೂಷಣೆಗೆ.”


ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ.


ನಿಂದಾಸ್ಪದರಾದೆವು ನೆರೆಹೊರೆಯ ಜನಾಂಗಗಳಿಗೆ I ಗುರಿಯಾದೆವು ಸುತ್ತಣವರ ಹಾಸ್ಯಕುಚೋದ್ಯಗಳಿಗೆ II


ಭಾರತ (ಇಂಡಿಯಾ) ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇದ್ದ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅರಸ ಅಹಷ್ವೇರೋಷನು ಆಳುತ್ತಿದ್ದನು.


ಯೆಹೂದ ಕುಲದವರಲ್ಲಿ - ಒಬ್ಬನು ಅತಾಯ; ಇವನು ಉಜ್ಜೀಯನ ಮಗ; ಇವನು ಜೆಕರ್ಯನ ಮಗ; ಇವನು ಅಮರ್ಯನ ಮಗ; ಇವನು ಶೆಫಟ್ಯನ ಮಗ; ಇವನು ಮಹಲಲೇಲನ ಮಗ; ಇವನು ಪೆರೆಚ್ ಸಂತಾನದವನು.


ಸೆರೆಯಿಂದ ಮರಳಿ ಬಂದ ಯೆಹೂದ್ಯ ಸಮಾಜದವರ ಅಂಕೆಸಂಖ್ಯೆ ಹೀಗಿದೆ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಬಾಬಿಲೋನಿನ ಸೆರೆಯಲ್ಲಿ ಬಂಧಿಸಿದ್ದವರಲ್ಲಿ ಬಿಡುಗಡೆ ಹೊಂದಿ ಹಿಂತಿರುಗಿದವರು ಇವರು:


ನಾನು ಕೊಟ್ಟ ನಾಡಿನಿಂದ ಇಸ್ರಯೇಲರನ್ನು ತೆಗೆದುಹಾಕುವೆನು; ನನ್ನ ಹೆಸರಿಗಾಗಿ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಯೇಲರು ಎಲ್ಲಾ ಜನಾಂಗಗಳವರ ಲಾವಣಿಗೂ ನಿಂದೆಪರಿಹಾಸ್ಯಕ್ಕೂ ಗುರಿಯಾಗುವರು.


ಆತ್ಮಸ್ವಾಧೀನವಲ್ಲದ ಮನುಷ್ಯ ಗೋಡೆಬಿದ್ದು ಕಾವಲಿಲ್ಲದ ಹಾಳೂರು.


ಹೂತುಹೋಗಿವೆ ಸಿಯೋನ್ ಹೆಬ್ಬಾಗಿಲುಗಳು ಚೂರುಚೂರಾಗಿ ಬಿದ್ದಿವೆ ಅದರ ಅಗುಳಿಗಳು. ಅರಸರೂ ಪಾಲಕರೂ ಸೇರಿಹೋದರು ಅನ್ಯಜನಾಂಗಗಳೊಳು. ನಿಂತುಹೋಗಿವೆ ಧರ್ಮಶಾಸ್ತ್ರ ಬೋಧನೆಗಳು. ಸರ್ವೇಶ್ವರನಿಂದ ಪ್ರವಾದಿಗಳಿಗೆ ಆಗುತ್ತಿದ್ದ ದಿವ್ಯದರ್ಶನಗಳು.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ಅವನ ಜನರು ಜೆರುಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿದರು; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು