Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:6 - ಕನ್ನಡ ಸತ್ಯವೇದವು C.L. Bible (BSI)

6 ಕೃಪೆಮಾಡಿ ನನಗೆ ಕಿವಿಗೊಡಿ, ಕಟಾಕ್ಷಿಸಿ ನೋಡಿ; ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿ, ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ; ಅವರು ನಿಮಗೆ ವಿರುದ್ಧ ಮಾಡಿದ ಪಾಪಗಳನ್ನು ಅರಿಕೆಮಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೃಪೆಮಾಡಿ ನನ್ನ ಮೊರೆಗೆ ಕಿವಿಗೊಡು, ನನ್ನನ್ನು ಕಟಾಕ್ಷಿಸು, ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲರಿಗಾಗಿ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆ ಮಾಡುತ್ತಾ ಇದ್ದೇನೆ; ನಾನೂ, ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕೃಪೆಮಾಡಿ ಕಿವಿಗೊಡಬೇಕು, ಕಟಾಕ್ಷಿಸಬೇಕು; ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲ್ಯರಿಗೋಸ್ಕರ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕೃಪೆಮಾಡಿ ನನಗೆ ಕಿವಿಗೊಡಿರಿ, ಕಟಾಕ್ಷಿಸಿ ನೋಡಿರಿ, ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿರಿ. ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಾಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ. ಅವರು ನಿಮಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ. ನಾನೂ, ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:6
34 ತಿಳಿವುಗಳ ಹೋಲಿಕೆ  

ನಾನು ಬಾಯಿಬಿಟ್ಟು ಬೇಡಿಕೊಂಡೆ. ನನ್ನ ಮತ್ತು ನನ್ನ ಜನರಾದ ಇಸ್ರಯೇಲರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ದೇವರಾದ ಸರ್ವೇಶ್ವರನಿಗೆ ಬಿನ್ನವಿಸಿದೆ.


ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆಂದು ಬಿನ್ನವಿಸಿದೆ: “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ.


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ನಮ್ಮ ಪಿತೃಗಳಂತೆಯೆ ಪಾಪಿಗಳು ನಾವು I ಅಕ್ರಮಗೈದೆವು, ಅಪರಾಧಿಗಳಾದೆವು II


ನಿಮ್ಮ ಪೂರ್ವಜರು ನಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಮಾಡಿ ಅವರ ಚಿತ್ತಕ್ಕೆ ವಿರುದ್ಧ ನಡೆದು ಅವರನ್ನು ತೊರೆದುಬಿಟ್ಟರು; ಅವರ ನಿವಾಸ ಸ್ಥಳಕ್ಕೆ ಬೆನ್ನುಕೊಟ್ಟು ವಿಮುಖರಾದರು.


“ನನ್ನ ದೇವರೇ, ಕಟಾಕ್ಷವಿಡಿ, ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡಿ.


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.


ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?


ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದಪಡಬೇಕೆಂದು ಹಂಬಲಿಸುತ್ತಿದ್ದೇನೆ.


ನಮ್ಮ ಪಿತೃಗಳು ಪಾಪಮಾಡಿ ಗತಿಸಿಹೋದರು ಅವರ ದೋಷಫಲವನ್ನು ನಾವು ಸವಿಯಬೇಕಾಗಿ ಬಂದಿತು.


ದಿಕ್ಕಿಲ್ಲದೆ ಒಬ್ಬಂಟಿಗಳಾಗಿರುವ ವಿಧವೆ ದೇವರ ಮೇಲೆ ಭರವಸೆಯಿಟ್ಟು ಹಗಲಿರುಳು ಪ್ರಾರ್ಥನೆಗಳಲ್ಲೂ ವಿಜ್ಞಾಪನೆಗಳಲ್ಲೂ ನಿರತಳಾಗಿರುತ್ತಾಳೆ.


ಆಲಿಸು, ಕಿವಿಗೊಡು ಪ್ರಭೂ, ನನ್ನಾರ್ತ ವಿಜ್ಞಾಪನೆಗೆ II


ತ್ರಿಕಾಲದೊಳು ಗೋಗರೆದು ಯಾಚಿಸುವೆನು I ಎನ್ನಯ ಮೊರೆಗಾತನು ಕಿವಿಗೊಡದಿರನು II


ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II


ಎಜ್ರನು ದೇವಾಲಯದ ಮುಂದೆ ಹೀಗೆ ಅಡ್ಡಬಿದ್ದು ಅಳುತ್ತಾ, ವಿಜ್ಞಾಪನೆಯನ್ನೂ ಪಾಪ ನಿವೇದನೆಯನ್ನೂ ಮಾಡುತ್ತಿರುವಾಗ ಇಸ್ರಯೇಲರ ಗಂಡಸರು, ಹೆಂಗಸರು ಹಾಗು ಮಕ್ಕಳು ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಜನರೆಲ್ಲರು ಅಲ್ಲಿ ಬಹಳವಾಗಿ ದುಃಖಿಸತೊಡಗಿದರು.


ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.


ಅವಳಿಗೆ ಸುಮಾರು ಎಂಬತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು.


ಪ್ರಭು, ಜೀವೋದ್ಧಾರಕನೇ ಕೇಳು I ನಿನಗೆ ಮೊರೆಯಿಡುವೆ ಹಗಲಿರುಳು II


ಈಗ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತಕ್ಕನುಸಾರ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ,” ಎಂದನು.


ಇದೂ ಸಾಲದೆಂದು ನೀವು ಯೆಹೂದ್ಯರನ್ನೂ ಜೆರುಸಲೇಮನ್ನೂ ಬಲಾತ್ಕರಿಸಿ ದಾಸದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರುದ್ಧ ಅಪರಾಧಗಳನ್ನು ನೀವೂ ಮಾಡಿದ್ದೀರಲ್ಲವೆ?


ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸಿದರೆ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ.


ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಪಶ್ಚಾತ್ತಾಪಪಟ್ಟು,


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II


“ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ.


ಸ್ವಾಮೀ, ನಿಮಗೆ ವಿರುದ್ಧ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಒಡೆಯರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.


“ಸರ್ವೇಶ್ವರಾ, ನಮ್ಮ ದೇವರೇ, ನೀವು ನಿಮ್ಮ ಭುಜಪರಾಕ್ರಮವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟಿನಿಂದ ಪಾರುಮಾಡಿ, ಇಂದಿನವರೆಗೂ ಸುಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡವರಾಗಿದ್ದೀರಿ. ಈಗ ಚಿತ್ತೈಸಿ. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು