Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:7 - ಕನ್ನಡ ಸತ್ಯವೇದವು C.L. Bible (BSI)

7 ನಾವು ನಿಮಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀವು ನಿಮ್ಮ ದಾಸ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾವು ನಿನಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀನು ನಿನ್ನ ಸೇವಕನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾವು ನಿನಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀನು ನಿನ್ನ ಸೇವಕನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲರಾದ ನಾವು ನಿನಗೆ ಕೆಟ್ಟವರಾಗಿ ಜೀವಿಸಿದೆವು; ನೀನು ನಿನ್ನ ಸೇವಕನಾದ ಮೋಶೆಗೆ ಕೊಟ್ಟ ವಿಧಿನಿಯಮಗಳಿಗೆ ನಾವು ವಿಧೇಯರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾವು ನಿಮಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು. ನೀವು ನಿಮ್ಮ ದಾಸನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:7
24 ತಿಳಿವುಗಳ ಹೋಲಿಕೆ  

ಇಸ್ರಯೇಲರೆಲ್ಲರು ನಿಮ್ಮ ಧರ್ಮಶಾಸ್ತ್ರವನ್ನು ಮೀರಿ ನಿಮ್ಮ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿಮ್ಮ ಶಾಪದ ಕೇಡುಗಳನ್ನೂ ದೇವರ ದಾಸನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀವು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳನ್ನೂ ನಮ್ಮ ಮೇಲೆ ಸುರಿಯಲಾಗಿದೆ. ನಾವು ದ್ರೋಹಿಗಳೇ ಸರಿ.


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಧರ್ಮಮಾರ್ಗಗಳನ್ನು ತೊರೆದುಬಿಟ್ಟಿದ್ದೇವೆ. ನಿಮ್ಮ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಸರ್ವೇಶ್ವರನೆಂಬ ನಿಮ್ಮ ದಯೆಯನ್ನು ಬೇಡಿಕೊಳ್ಳಲಿಲ್ಲ.


ನಮ್ಮ ಪಿತೃಗಳಂತೆಯೆ ಪಾಪಿಗಳು ನಾವು I ಅಕ್ರಮಗೈದೆವು, ಅಪರಾಧಿಗಳಾದೆವು II


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


“ನಾನು ನನ್ನ ದಾಸನಾದ ಮೋಶೆಗೆ ಬೋಧಿಸಿದ ಧರ್ಮಶಾಸ್ತ್ರವನ್ನು ಜ್ಞಾಪಕಕ್ಕೆ ತಂದುಕೊಳ್ಳಿ. ಆ ವಿಧಿನಿಯಮಗಳನ್ನು ಆತನಿಗೆ ಹೋರೇಬ್ ಬೆಟ್ಟದಲ್ಲಿ ಕೊಟ್ಟದ್ದು ಇಸ್ರಯೇಲರು ಅವುಗಳನ್ನು ಅನುಸರಿಸಲೆಂದೇ.”


ಇದರಿಂದಲಾದರೂ ಜೆರುಸಲೇಮ್ ನಗರ ನನಗೆ ಭಯಪಡುವುದು, ನಾನು ಕಲಿಸಿದ ಪಾಠವನ್ನು ಎಂದಿಗೂ ಮರೆಯದು’ ಎಂದುಕೊಂಡೆ. ಆದರೆ ಅದರ ನಿವಾಸಿಗಳು ತಮ್ಮ ನಡತೆಯನ್ನು ಕೆಡಿಸಿಕೊಳ್ಳಲು ಮತ್ತಷ್ಟು ಕಾತರರಾದರು.”


ಪೂರ್ವದಲ್ಲಿ ಗಿಬ್ಯದವರು ಭ್ರಷ್ಟರಾದಂತೆ ಎಫ್ರಯಿಮಿನವರು ಅತಿ ಭ್ರಷ್ಟರಾಗಿದ್ದಾರೆ. ದೇವರು ಅವರ ಅಪರಾಧವನ್ನು ನೆನಪಿಗೆ ತಂದುಕೊಳ್ಳುವರು. ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವರು.


ಎಜ್ರನು, ಇಸ್ರಯೇಲ್ ದೇವರಾದ ಸರ್ವೇಶ್ವರನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾಂಡಿತ್ಯ ಪಡೆದ ಒಬ್ಬ ಧರ್ಮಶಾಸ್ತ್ರಿ ಆಗಿದ್ದನು. ಅವನ ದೇವರಾದ ಸರ್ವೇಶ್ವರನ ಕೃಪಾಹಸ್ತ ಅವನ ಮೇಲಿತ್ತು. ಆದುದರಿಂದ ಅರಸನು ಅವನಿಗೆ ಇಷ್ಟವಾದುದನ್ನೆಲ್ಲ ಅನುಗ್ರಹಿಸಿದನು.


ತನ್ನ ತಂದೆಯಾದ ಉಜ್ಜೀಯನಂತೆ ಇವನು ಸರ್ವೇಶ್ವರನ ಚಿತ್ತಾನುಸಾರ ನಡೆದನು; ಆದರೆ ಅವನಂತೆ ಸರ್ವೇಶ್ವರನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.


ಆದರೆ ‘ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪಕ್ಕೆ ಮಕ್ಕಳಿಗಾಗಲಿ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು’ ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಅಪ್ಪಣೆಯನ್ನು ನೆನಪುಮಾಡಿಕೊಂಡು, ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.


ನಿನ್ನ ದೇವರಾದ ಸರ್ವೇಶ್ವರಸ್ವಾಮಿಯ ಕಟ್ಟಳೆಯನ್ನು ಕೈಗೊಂಡು ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಅವರ ಆಜ್ಞಾನಿಯಮ-ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವೆ.


“ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಿಮಗೆ ಬೋಧಿಸಲು ನನಗೆ ಆಜ್ಞಾಪಿಸಿದ ಈ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನೀವು ನದಿದಾಟಿ ಸ್ವಾಧೀನಪಡಿಸಿಕೊಳ್ಳಲಿರುವ ಆ ನಾಡಿನಲ್ಲಿ ಅನುಸರಿಸಬೆಕು.


ಮೋಶೆ ಇಸ್ರಯೇಲರನ್ನು ಕರೆದು ಹೀಗೆ ಸಂಬೋಧಿಸಿದನು: “ಇಸ್ರಯೇಲರೇ, ನಾನು ಈಗ ನಿಮಗೆ ತಿಳಿಸಲಿರುವ ಆಜ್ಞಾವಿಧಿಗಳನ್ನು ಕಿವಿಗೊಟ್ಟು ಕೇಳಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಿರಿ.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


ಇವೇ ಸರ್ವೇಶ್ವರನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಆಜ್ಞೆಗಳು.


ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.


ಮೀರಿ ನಡೆದರಾದರೆ ನನ್ನ ಶಾಸನಗಳನು I ಪರಿಪಾಲಿಸದೆ ಹೋದರೆ ಎನ್ನ ನಿಯಮಗಳನು II


ದಂಡಿಸುವೆನವರ ದ್ರೋಹವನು ದಂಡದಿಂದ I ಶಿಕ್ಷಿಸುವೆನವರ ಅಪರಾಧವನು ಚಾಟಿಯಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು