Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:9 - ಕನ್ನಡ ಸತ್ಯವೇದವು C.L. Bible (BSI)

9 ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗಾಗಿ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು; ಎಂದು ಹೇಳಿದಿರಲ್ಲವೆ? ಆ ಮಾತನ್ನು ನೆನಪುಮಾಡಿಕೊಳ್ಳಿ. ಸ್ವಾಮೀ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವುದಾದರೆ ನಿಮ್ಮ ಜನರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ, ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು’ ಎಂದು ಹೇಳಿರುವೆಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವದಾದರೆ ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗೋಸ್ಕರ ಆರಿಸಿದ ಸ್ಥಳಕ್ಕೆ ತಿರಿಗಿ ಬರಮಾಡುವೆನು ಎಂದು ಹೇಳಿದಿಯಲ್ಲಾ; ಆ ಮಾತನ್ನು ನೆನಪು ಮಾಡಿಕೊಳ್ಳಬೇಕು, ಸ್ವಾಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನೀವು ಹಿಂತಿರುಗಿ ನನ್ನ ಬಳಿಗೆ ಬಂದು, ನನ್ನ ಕಟ್ಟಳೆಗಳಿಗೆ ವಿಧೇಯರಾದರೆ, ನಿಮ್ಮ ಜನರನ್ನು ಬಲವಂತವಾಗಿ ಭೂಲೋಕದ ಕಟ್ಟಕಡೆಯವರೆಗೆ ಕೊಂಡೊಯ್ದಿದ್ದರೂ ಅಲ್ಲಿಂದ ನನ್ನ ಹೆಸರನ್ನು ನೆಲೆಗೊಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸ್ಥಳಕ್ಕೆ ಕರೆದುಕೊಂಡು ಬರುವೆನು” ಎಂದು ಹೇಳಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ನೀವು ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ, ಅವುಗಳ ಪ್ರಕಾರ ನಡೆದರೆ, ನಿಮ್ಮಲ್ಲಿರುವವರು ಆಕಾಶದ ಅಂತ್ಯದವರೆಗೂ ಸೆರೆಯಾಗಿ ಹೋಗಿದ್ದರೂ, ನಾನು ಅಲ್ಲಿಂದ ಅವರನ್ನು ಕೂಡಿಸಿ, ನನ್ನ ಹೆಸರನ್ನಿಡಲು ಆಯ್ದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು,’ ಎಂದು ಹೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:9
28 ತಿಳಿವುಗಳ ಹೋಲಿಕೆ  

‘ಇಗೋ, ನಾನು ಕಡುಕೋಪದಿಂದಲೂ ರೋಷಾವೇಶದಿಂದಲೂ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಎಲ್ಲ ದೇಶಗಳಿಂದ ಈ ಸ್ಥಳಕ್ಕೆ ಮರಳಿ ಕರೆತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ತುತೂರಿಯ ಘೋಷಣೆಯೊಂದಿಗೆ ಆತನು ತನ್ನ ದೂತರನ್ನು ನಾಲ್ಕು ದಿಕ್ಕುಗಳಿಗೂ ಕಳುಹಿಸುವನು. ಅವರು ಹೋಗಿ ಆತನಿಂದ ಆಯ್ಕೆಯಾದ ಜನರನ್ನು ವಿಶ್ವದ ಅಷ್ಟದಿಕ್ಕುಗಳಿಂದ ಒಟ್ಟುಗೂಡಿಸುವರು.


ಆದರೆ ಅವರನ್ನು ಕಿತ್ತುಹಾಕಿದ ಮೇಲೆ ಮತ್ತೆ ಅವರಿಗೆ ಕನಿಕರಿಸುವೆನು. ಪ್ರತಿಯೊಬ್ಬನನ್ನು ಅವನವನ ಆಸ್ತಿಪಾಸ್ತಿಗೆ ಅವನವನ ನಾಡಿಗೆ ಮರಳಿ ಬರಮಾಡುವೆನು.


ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.


ನಿರ್ಮಿಸುತಿಹನು ಪ್ರಭು ಮರಳಿ ಜೆರುಸಲೇಮನು I ಬಂದು ಸೇರಿಸುತಿಹನು ಚದರಿದ ಇಸ್ರಯೇಲರನು II


ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡ ದೇವರು, ಈ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ಜೆರುಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕಾಗಲಿ, ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ನಾಶಮಾಡಲಿ! ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಕೈಗೊಳ್ಳತಕ್ಕದ್ದು.”


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಕುಲಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಅವರ ದರ್ಶನಕ್ಕಾಗಿ ಸಭೆಸೇರಬೇಕು.


ನಾನು ನಿಮ್ಮನ್ನು ಜನಾಂಗಗಳಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡುವೆನು.


ರಾಷ್ಟ್ರಗಳೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ: ದೂರದ ದ್ವೀಪಗಳಲ್ಲೂ ಅದನ್ನು ಸಾರಿರಿ: ಇಸ್ರಯೇಲರನ್ನು ಚದುರಿಸಿದಾತ ಕುರಿಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನೆಂದು ಪ್ರಕಟಿಸಿರಿ.


ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.


ಹೇ ಪ್ರಭು, ನಮ್ಮ ದೇವಾ, ನಮ್ಮನ್ನುದ್ಧರಿಸು I ನಾಡುನಾಡುಗಳಿಂದ ನಮ್ಮನೊಂದುಗೂಡಿಸು I ನಿನ್ನ ಪವಿತ್ರ ನಾಮವನು ನಾವು ಭಜಿಸುವೆವು I ನಿನ್ನ ಸ್ತುತಿ ಸ್ತೋತ್ರಗಳಲಿ ಹೆಚ್ಚಳ ಪಡುವೆವು II


ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು.


“ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು.


ಹೇ ದೇವಾ, ನಮ್ಮ ಸಹಾಯಕ, ನಮ್ಮನ್ನು ಉದ್ಧರಿಸು I ನಾಡು ನಾಡುಗಳಿಂದ ನಮ್ಮನ್ನು ಒಂದುಗೂಡಿಸು I ನಿನ್ನ ಪವಿತ್ರ ನಾಮವನು ಭಜಿಸುವೆವು ನಾವು I ನಿನ್ನ ಸ್ತುತಿಸ್ತೋತ್ರಗಳಲಿ ಹೆಚ್ಚಳಪಡುವೆವು II


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಲು ಆರಿಸಿಕೊಳ್ಳುವ ಸ್ಥಳ ನಿಮಗೆ ದೂರವಾದರೆ, ಅವರು ನಿಮಗೆ ಅನುಗ್ರಹಿಸಿದ ದನಕುರಿಗಳಲ್ಲಿ ಬೇಕಾದಷ್ಟನ್ನು, ನಾನು ಅಪ್ಪಣೆಕೊಟ್ಟ ಮೇರೆಗೆ, ನೀವು ಕೊಯ್ದು ನಿಮ್ಮ ಊರಲ್ಲೇ ಊಟಮಾಡಬಹುದು.


ನಿಮ್ಮ ಅನುಗ್ರಹದಿಂದ ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೂ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗು ಪೂರ್ಣಪ್ರಾಣದಿಂದ, ನಿಮ್ಮನ್ನು ಪ್ರಾರ್ಥಿಸಿದರೆ,


ಅಂತೆಯೇ ವಂದಿಸಲಿ ಬಂದವರು ಚತುರ್ದಿಕ್ಕುಗಳಿಂದ I ಒಂದಾಗಿ ಕೂಡಿಸಲ್ಪಟ್ಟವರೆಲ್ಲರು ನಾನಾ ದೇಶಗಳಿಂದ II


ಇಸ್ರಯೇಲಿನ ಜನರೇ, ದಿನವು ಬರಲಿದೆ. ಆಗ ಯೂಫ್ರೆಟಿಸ್ ನದಿಯಿಂದ ಈಜಿಪ್ಟ್ ದೇಶದ ನದಿಯವರೆಗೆ, ಸರ್ವೇಶ್ವರ ತೆನೆಗಳನ್ನು ಒಕ್ಕಣೆಮಾಡುವರು. ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಬೇರ್ಪಡಿಸಿ ಆಯ್ಕೆಮಾಡುವರು.


ಮತ್ತೆ ಸರ್ವೇಶ್ವರ ಸ್ವಾಮಿ, “ಇಗೋ, ಉತ್ತರದಿಂದ ಒಂದು ರಾಷ್ಟ್ರ ಬರುತ್ತಿದೆ. ಅದು ಮಹಾ ಬಲಿಷ್ಠ ರಾಷ್ಟ್ರ. ಜಗದ ಕಟ್ಟಕಡೆಯಿಂದ ಹೊರಟುಬರುತ್ತಿದೆ.


“ಆದಕಾರಣ ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿರಿ; ನಿಮ್ಮ ಎಲ್ಲಾ ಅಸಹ್ಯವಸ್ತುಗಳ ಕಡೆಗೆ ಬೆನ್ನುಮಾಡಿರಿ.


“ನೀವು ನನ್ನ ನಿಯಮಗಳನ್ನು ಕೈಗೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ


“ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದ ಹಾಗು ಶಾಪ ನಿಮ್ಮ ಅನುಭವಕ್ಕೆ ಬರುವುವು; ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಚದುರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇಗೋ, ನಾನು ನನ್ನ ಜನರನ್ನು ಪೂರ್ವಪಶ್ಚಿಮ ನಾಡುಗಳಿಂದ ಬಿಡುಗಡೆಮಾಡಿ, ಇಲ್ಲಿಗೆ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು