Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:31 - ಕನ್ನಡ ಸತ್ಯವೇದವು C.L. Bible (BSI)

31 ಆಮೇಲೆ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದೆ; ಭಜನೆ ಮಂಡಲಿಯವರಿಗೆ, “ಎರಡು ದೊಡ್ಡ ಗುಂಪುಗಳಾಗಿ ಇಲ್ಲಿ ನಿಲ್ಲಿ,” ಎಂದು ಅಪ್ಪಣೆಮಾಡಿದೆ. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆನಂತರ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದು, ಆರಾಧನೆ ಮಂಡಳಿಯವರಿಗೆ ಎರಡು ದೊಡ್ಡ ಗುಂಪುಗಳಾಗಿ ಆಲ್ಲಿ ನಿಲ್ಲಬೇಕೆಂದು ಅಪ್ಪಣೆಮಾಡಿದನು. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಮೇಲೆ ನಾನು ಯೆಹೂದ ಪ್ರಭುಗಳನ್ನು ಗೋಡೆಯ ಮೇಲೆ ಕರಕೊಂಡು ಬಂದು ಭಜನ ಮಂಡಲಿಯವರಿಗೆ - ಎರಡು ದೊಡ್ಡ ಗುಂಪುಗಳಾಗಿ ಇಲ್ಲಿ ನಿಲ್ಲಬೇಕೆಂದು ಅಪ್ಪಣೆಮಾಡಿದೆನು. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಲಿನಿಂದ ಬಲಗಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಾನು ಯೆಹೂದದ ನಾಯಕರಿಗೆ ಗೋಡೆಯ ಮೇಲೆ ನಿಂತುಕೊಳ್ಳಲು ಹೇಳಿದೆನು. ಅಲ್ಲದೆ ದೇವರಿಗೆ ಕೃತಜ್ಞತಾಸ್ತುತಿ ಮಾಡಲು ಗಾಯಕರ ಎರಡು ದೊಡ್ಡ ಗುಂಪುಗಳನ್ನು ಆರಿಸಿಕೊಂಡೆನು. ಒಂದು ಗುಂಪಿನವರು ಮೆರವಣಿಗೆಯಿಂದ ಬಲಗಡೆಯಿದ್ದ ತಿಪ್ಪೆಬಾಗಿಲಿನ ಕಡೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ, ಸ್ತುತಿಸಲು ಎರಡು ಗುಂಪುಗಳನ್ನು ನೇಮಿಸಿದೆನು. ಒಂದು ಗುಂಪಿನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಿಲ ಕಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:31
8 ತಿಳಿವುಗಳ ಹೋಲಿಕೆ  

ನಾನು ರಾತ್ರಿ ವೇಳೆಯಲ್ಲಿ ಕಣಿವೆಯ ಬಾಗಿಲಿನಿಂದ ಹೊರಟು, ಹಾಳುಬಿದ್ದ ಜೆರುಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲಾಗಿದ್ದ ಅದರ ಬಾಗಿಲುಗಳನ್ನೂ ನೋಡುತ್ತಾ ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆ.


ಅವರನ್ನು ಎದುರುಗೊಳ್ಳುವ ಹಾಗೆ ಭಜನೆಮಂಡಲಿಯ ಎರಡನೆಯ ಗುಂಪಿನವರೂ ನಾನೂ ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲ ಗೋಡೆಯವರೆಗೂ


ಎರಡು ಭಜನೆಮಂಡಲಿಯ ಗುಂಪಿನವರೂ ನಾನು ನನ್ನ ಜೊತೆಯಲ್ಲಿದ್ದ ಅರ್ಧಮಂದಿ ಅಧಿಕಾರಿಗಳೂ


ಅನಂತರ ಸೊಲೊಮೋನನು ದಾವೀದ ನಗರವಾದ ಸಿಯೋನಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವುದಕ್ಕಾಗಿ ಇಸ್ರಯೇಲರ ಹಿರಿಯರು, ಕುಲಾಧಿಪತಿಗಳು, ಇವರೇ ಮೊದಲಾದ ಎಲ್ಲಾ ಇಸ್ರಯೇಲ್ ಗಣ್ಯವ್ಯಕ್ತಿಗಳನ್ನು ಜೆರುಸಲೇಮಿಗೆ ಕರೆಸಿಕೊಂಡನು.


ದಾವೀದನು ಇಸ್ರಯೇಲರ ಎಲ್ಲ ಪದಾಧಿಕಾರಿಗಳನ್ನು ಅಂದರೆ, ಕುಲ ಅಧ್ಯಕ್ಷರುಗಳು, ಅರಸನ ಸೇವೆಮಾಡುತ್ತಿದ್ದ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಹೀಗೆ ಎಲ್ಲ ಅಧಿಕಾರಿಗಳನ್ನು ಜೆರುಸಲೇಮಿಗೆ ಕರೆಸಿದನು.


ಅರಸ ದಾವೀದನು ಸರ್ವಸಹಸ್ರಾಧಿಪತಿಗಳೊಂದಿಗೂ ಶತಾಧಿಪತಿಗಳೊಂದಿಗೂ ಸಮಾಲೋಚನೆ ನಡೆಸಿದನು.


ಅವರ ಹಿಂದೆ ಯೆಹೂದ ಪ್ರಮುಖರು ಅರ್ಧಜನರೊಡನೆ ಹೋದರು; ಹೋಷಾಯನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು