Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:37 - ಕನ್ನಡ ಸತ್ಯವೇದವು C.L. Bible (BSI)

37 ಇವರು ಬುಗ್ಗೆಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನನುಸರಿಸಿ, ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ, ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಇವರು ಬುಗ್ಗೆ ಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನು ಅನುಸರಿಸಿ ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಇವರು ಬುಗ್ಗೆ ಬಾಗಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನನುಸರಿಸಿ ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ ಪೂರ್ವದಿಕ್ಕಿನಲ್ಲಿರುವ ನೀರು ಬಾಗಲಿನವರೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅವರು ಬುಗ್ಗೆ ಬಾಗಿಲಿನೊಳಗೆ ಪ್ರವೇಶಿಸಿ, ಮೆಟ್ಟಲುಗಳನ್ನು ಹತ್ತಿ ದಾವೀದ ನಗರದ ತನಕ ಹೋದರು. ಈಗ ಅವರು ನಗರದ ಗೋಡೆಯನ್ನು ಹತ್ತಿ ದಾವೀದನ ಮನೆಯ ಮೇಲ್ಗಡೆಯಿಂದ, “ನೀರು” ಎಂಬ ದ್ವಾರದ ಕಡೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ತಮಗೆ ಎದುರಾದ ಬುಗ್ಗೆಯ ಬಾಗಿಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಿಲುಗಳಿಂದ ದಾವೀದನ ಅರಮನೆಯ ಮೇಲೆ ಪೂರ್ವದ ಕಡೆಗಿರುವ ನೀರಿನ ಬಾಗಿಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:37
7 ತಿಳಿವುಗಳ ಹೋಲಿಕೆ  

ಆ ಮೂಲೆಬುರುಜಿನ ಮತ್ತು ನೀರುಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಸ್ಥಾನ ಪರಿಚಾರಕರ ನಿವಾಸಸ್ಥಾನ.


ಅಲ್ಲಿಂದ ಬುಗ್ಗೆಬಾಗಿಲನ್ನು ಹಾದು ಅರಸನ ಕೊಳಕ್ಕೆ ಹೋದೆ.


ಈ ಆಜ್ಞಾನುಸಾರ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ, ನೀರುಬಾಗಿಲು, ಹಾಗು ಎಫ್ರಯಿಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಕುಟೀರಗಳನ್ನು ಮಾಡಿಕೊಂಡರು.


ಆ ನೀರುಬಾಗಿಲಿನ ಮುಂದಣ ಬಯಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಲು ಶಕ್ತರಾದವರೆಲ್ಲರೂ ಧರ್ಮಶಾಸ್ತ್ರ ಪಾರಾಯಣವನ್ನು ಆಲಿಸುತ್ತಿದ್ದರು.


ತಮ್ಮ ತಮ್ಮ ಪಟ್ಟಣಗಲ್ಲಿ ವಾಸಿಸುತ್ತಿದ್ದ ಇಸ್ರಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ಒಟ್ಟಿಗೆ ಸೇರಿದರು. ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು