Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:45 - ಕನ್ನಡ ಸತ್ಯವೇದವು C.L. Bible (BSI)

45 ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವಾಸಂಬಂಧದಲ್ಲಿ ಹಾಗು ಶುದ್ಧೀಕರಣ ಸಂಬಂಧದಲ್ಲಿ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರ ನಡೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವೆಯ ಸಂಬಧದಲ್ಲಿಯೂ ಶುದ್ಧೀಕರಣ ಸಂಬಂಧದಲ್ಲಿಯೂ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗನಾದ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರವಾಗಿ ನಡೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವಾಸಂಬಂಧದಲ್ಲಿಯೂ ಶುದ್ಧೀಕರಣಸಂಬಂಧದಲ್ಲಿಯೂ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗನಾದ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರ ನಡೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಯಾಜಕರೂ ಲೇವಿಯರೂ ತಮ್ಮ ದೇವರಿಗೋಸ್ಕರ ತಮ್ಮ ಕೆಲಸಗಳನ್ನು ಮಾಡಿದರು. ಶುದ್ಧೀಕರಣ ಆಚರಣೆಯ ಮೂಲಕ ಜನರನ್ನು ಶುದ್ಧರನ್ನಾಗಿ ಮಾಡಿದರು. ಗಾಯಕರೂ ದ್ವಾರಪಾಲಕರೂ ತಮ್ಮತಮ್ಮ ಕೆಲಸಗಳನ್ನು ಮಾಡಿದರು. ದಾವೀದನು ಮತ್ತು ಸೊಲೊಮೋನನು ಆಜ್ಞಾಪಿಸಿದ್ದ ಪ್ರಕಾರವೇ ಅವರು ಎಲ್ಲವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಇದಲ್ಲದೆ ದಾವೀದನೂ, ಅವನ ಮಗನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ, ದ್ವಾರಪಾಲಕರೂ ತಮ್ಮ ದೇವರ ಕಾವಲನ್ನೂ, ಶುದ್ಧೀಕರಣದ ಕಾವಲನ್ನೂ ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:45
5 ತಿಳಿವುಗಳ ಹೋಲಿಕೆ  

ಯಾಜಕರು ಹಾಗು ಸೇವೆಯಲ್ಲಿರುವ ಲೇವಿಯರು ಇವರನ್ನು ಬಿಟ್ಟು ಬೇರೆ ಯಾರೂ ಸರ್ವೇಶ್ವರನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರು ಸರ್ವೇಶ್ವರನ ಆಜ್ಞಾನುಸಾರ ಹೊರಗಿರಬೇಕು.


ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಸರ್ವೇಶ್ವರನ ಆಲಯದ ಪರಿಚರ್ಯೆಯನ್ನು ನಡೆಸಬೇಕಾಗಿತ್ತು. ಅವರ ಕೆಲಸ ಕಾರ್ಯ ಇವು: ಅಂಗಳವನ್ನೂ ಅಲ್ಲಿಯ ಕೋಣೆಗಳನ್ನು ನೋಡಿಕೊಳ್ಳುವುದು, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದು, ದೇವಾಲಯದಲ್ಲಿ ಸೇವೆಮಾಡುವುದು;


ಅಲ್ಲಿಂದ ಹೊರಟು ಊರಬಾಗಿಲಿಗೆ ಬಂದು, ಕಾವಲುಗಾರರಿಗೆ, “ನಾವು ಸಿರಿಯಾದವರ ಪಾಳೆಯಕ್ಕೆ ಹೋಗಿದ್ದೆವು; ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳನ್ನು ಅಲ್ಲಲ್ಲಿ ಕಟ್ಟಲಾಗಿದೆ. ಡೇರೆಗಳು ಇದ್ದ ಹಾಗೆಯೇ ಇರುತ್ತವೆ,” ಎಂದು ಕೂಗಿ ತಿಳಿಸಿದರು.


ಜಿಕ್ರೀಯ ಮಗನೂ ಆಗಿರುವ ಶೆಕೋಮೋತನೂ ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು; ಇವರು ಶೆಬೂವೇಲನ ಗೋತ್ರ ಬಂಧುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು