Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:46 - ಕನ್ನಡ ಸತ್ಯವೇದವು C.L. Bible (BSI)

46 ಗಾಯನಮಂಡಲಿಗಳು ಕೃತಜ್ಞತಾ ಸ್ತುತಿಕೀರ್ತನೆಗಳ ದೇವಸೇವೆಯೂ ಪೂರ್ವಕಾಲದಲ್ಲಿ ಅಂದರೆ, ದಾವೀದನ ಮತ್ತು ಆಸಾಫನ ಕಾಲದಲ್ಲೇ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಗಾಯನಮಂಡಳಿಯ ನಾಯಕರು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುವ ಕೀರ್ತನೆಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಗಾಯನ ಮಂಡಲಿಗಳೂ ಕೃತಜ್ಞತಾಸ್ತುತಿಕೀರ್ತನೆಗಳ ದೇವಸೇವೆಯೂ ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಇದ್ದವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 (ಬಹುಕಾಲದ ಹಿಂದೆ, ದಾವೀದನು ಆಳುತ್ತಿದ್ದಾಗ ಆಸಾಫನು ಗಾಯಕರಿಗೆ ನಿರ್ದೇಶಕನಾಗಿದ್ದನು. ಅವನು ದೇವರಿಗಾಗಿ ಅನೇಕ ಕೃತಜ್ಞತಾಗೀತೆಗಳನ್ನೂ ಸ್ತುತಿಗೀತೆಗಳನ್ನೂ ರಚಿಸಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಏಕೆಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿಯೇ ದೇವರಿಗೆ ಸ್ತೋತ್ರವನ್ನೂ, ಕೃತಜ್ಞತೆಯನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:46
7 ತಿಳಿವುಗಳ ಹೋಲಿಕೆ  

ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ಮಾತನಾಡದೆ ದೇವಾ, ಸುಮ್ಮನಿರಬೇಡ I ಮೌನದಿಂದ ಸ್ವಾಮೀ, ನಿಶ್ಚಿಂತನಿರಬೇಡ II


ದೇವನು ಎನಿತೋ ಒಳ್ಳೆಯವನು ಇಸ್ರಯೇಲಿಗೆ I ದಯಾಪರನಾತನು ಶುದ್ಧಹೃದಯಿಗಳಿಗೆ II


ಇನ್ನು ಕೆಲವು ಲೇವಿಯ ಕುಟುಂಬಗಳ ಮೇಲೆ ದೇವಾಲಯದ ಸಂಗೀತದ ಹೊಣೆಯಿತ್ತು. ಈ ಕುಟುಂಬಗಳ ಮುಖ್ಯಸ್ಥರು ದೇವಾಲಯದ ಕಟ್ಟಡಗಳಲ್ಲಿ ವಾಸಿಸುತ್ತಾ, ಹಗಲಿರುಳೂ ಕೆಲಸ ಮಾಡಬೇಕಾಗಿದ್ದರಿಂದ ಬೇರೆ ಕೆಲಸಗಳ ಜವಾಬ್ದಾರಿ ಅವರಿಗಿರಲಿಲ್ಲ.


ಪ್ರಭುಗೀತೆಗಳ ನಾವು ಗಾನ ಮಾಡುವುದೆಂತು I ಅನ್ಯನಾಡಿನೊಳು ಅವುಗಳನು ಹಾಡುವುದೆಂತು II


ಮೀಕನ ಮಗ ಜಬ್ದೀಯ ಮೊಮ್ಮಗ, ಆಸಾಫನ ಮರಿಮಗ ಪ್ರಾರ್ಥನಾ ಸಮಯದಲ್ಲಿ ಕೃತಜ್ಞತಾ ಸ್ತುತಿಮಾಡಿರಿ ಎಂದು ಹೇಳಿ ಭಜಕರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ‍ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನು; ಗಾಲಾಲನ ಮೊಮ್ಮಗನು, ಯೆದೂತೂನನ ಮರಿಮಗನು ಆದ ಅಬ್ದ ಎಂಬವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು