Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:7 - ಕನ್ನಡ ಸತ್ಯವೇದವು C.L. Bible (BSI)

7 ಯೋಯಾರೀಬ್, ಯೆದಾಯ, ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ. ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಮುಖಂಡರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಪ್ರಧಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೋಯಾರೀಬ್, ಯೆದಾಯ, ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಪ್ರಧಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸಲ್ಲೂ, ಅಮೋಕ್, ಹಿಲ್ಕೀಯ ಮತ್ತು ಯೆದಾಯ. ಇವರೆಲ್ಲಾ ಯಾಜಕರ ನಾಯಕರು. ಇವರು ಯೇಷೂವನ ಕಾಲದಲ್ಲಿದ್ದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ. ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ, ಅವರ ಸಂಗಡಿಗರಲ್ಲಿಯೂ ಮುಖ್ಯಸ್ಥರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:7
8 ತಿಳಿವುಗಳ ಹೋಲಿಕೆ  

ಮತ್ತೊಂದು ದರ್ಶನದಲ್ಲಿ ಪ್ರಧಾನ ಯಾಜಕನಾದ ಯೆಹೋಶುವನು ದೂತನ ಮುಂದೆ ನಿಂತಿರುವುದನ್ನು ಸರ್ವೇಶ್ವರ ನನಗೆ ತೋರಿಸಿದರು. ಯೆಹೋಶುವನಿಗೆ ಪ್ರತಿವಾದಿಯಾಗಿ ಸೈತಾನನು ಅವನ ಪಕ್ಕದಲ್ಲಿ ನಿಂತಿದ್ದ.


ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.


ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್ ಹಾಗು ಯೇಷೂವ ಇವರೊಡನೆ ಜುದೇಯ ನಾಡಿಗೆ ಹಿಂದಿರುಗಿ ಬಂದ ಯಾಜಕರು ಮತ್ತು ಲೇವಿಯರ ಪಟ್ಟಿ : ಯಾಜಕರು -


ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.


ಇಪ್ಪತ್ತಮೂರನೆಯದು ದೆಲಾಯನಿಗೆ; ಇಪ್ಪತ್ತನಾಲ್ಕನೆಯದು ಮಾಜ್ಯನಿಗೆ.


ಆಗ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಅಲ್ಲಿಗೆ ಬಂದರು.


ಲೇವಿಯರು - ಯೇಷೂವ, ಬೆನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ್ಯ, ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಭಜನ ನಾಯಕರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು