Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:14 - ಕನ್ನಡ ಸತ್ಯವೇದವು C.L. Bible (BSI)

14 ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ಸ್ಮರಿಸಿಕೊಳ್ಳಿ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿಮ್ಮ ನೆನಪಿನಿಂದ ಅಳಿಸಿಬಿಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿನ್ನ ಪುಸ್ತಕದಿಂದ ಆಳಿಸಿಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು [ನಿನ್ನ ಪುಸ್ತಕದಿಂದ] ಅಳಿಸಿಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರೇ, ನಾನು ಮಾಡಿದ ಈ ಕಾರ್ಯಗಳು ನಿನ್ನ ನೆನಪಿನಲ್ಲಿರಲಿ. ನಿನ್ನ ಆಲಯಕ್ಕೂ ಅದರ ಸೇವೆಗಳಿಗಾಗಿಯೂ ನಾನು ನಂಬಿಗಸ್ತಿಕೆಯಿಂದ ಮಾಡಿರುವ ಸೇವೆಯನ್ನೂ ಮರೆಯದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ದೇವರೇ, ಇದಕ್ಕಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ. ನಾನು ನನ್ನ ದೇವರ ಆಲಯಕ್ಕೋಸ್ಕರವೂ, ಅದರ ಸೇವೆಗೋಸ್ಕರವೂ ನಂಬಿಗಸ್ತಿಕೆಯಿಂದ ಮಾಡಿದ ಭಕ್ತಿಕಾರ್ಯಗಳನ್ನು ಅಳಿಸಿಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:14
14 ತಿಳಿವುಗಳ ಹೋಲಿಕೆ  

ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ನೇಮಿತಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆ; ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೊಳ್ಳಿ.


ಅವರು ಅಂದಿನಿಂದ ಸಬ್ಬತ್‍ದಿನದಂದು ಪುನಃ ಬರಲಿಲ್ಲ. ಆಮೇಲೆ ನಾನು ಲೇವಿಯರಿಗೆ, “ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು,” ಎಂದು ಆಜ್ಞಾಪಿಸಿದೆ. “ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿಮ್ಮ ಮಹಾಕೃಪೆಗನುಸಾರ ನನ್ನನ್ನು ಕನಿಕರಿಸಿರಿ.”


ನಿನ್ನ ದೇವರ ಆಲಯಕ್ಕಾಗಿ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ, ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.


‘ನನ್ನ ದೇವರೇ, ನಾನು ಈ ಜನರಿಗೆ ಮಾಡಿದ ಉಪಕಾರವನ್ನು ನೆನೆಸಿಕೊಂಡು ನನಗೆ ಒಳಿತನ್ನು ಅನುಗ್ರಹಿಸಿ!’ ಎಂದು ಪ್ರಾರ್ಥಿಸಿದೆ.


ಅವನು ಇಸ್ರಯೇಲರ ವಿಷಯದಲ್ಲೂ ದೇವರ ಮತ್ತು ದೇವಾಲಯದ ವಿಷಯದಲ್ಲೂ ಹಲವಾರು ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದ ನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.


ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ, ನನ್ನ ದೇವರಾಲಯದ ಮೇಲಣ ಅಭಿಮಾನದಿಂದ ಅದಕ್ಕಾಗಿ ನನ್ನ ಸ್ವಂತ ಸೊತ್ತಿನಿಂದ


ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


ಇದಲ್ಲದೆ, ಆ ದೇವಾಲಯದ ಪರಿಚರ್ಯೆಯಲ್ಲಿದ್ದ, ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


“ಸರ್ವೇಶ್ವರಾ, ನಿಮಗೆ ಶ್ರದ್ಧೆಯಿಂದಲೂ, ಪ್ರಾಮಾಣಿಕತೆಯಿಂದಲೂ ಸೇವೆಮಾಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಂಡಿದ್ದೇನೆ. ಇದನ್ನು ದಯೆಯಿಂದ ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥನೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು