Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:15 - ಕನ್ನಡ ಸತ್ಯವೇದವು C.L. Bible (BSI)

15 ಆ ಕಾಲದಲ್ಲಿ, ಜನರು ಸಬ್ಬತ್‍ದಿನ ಜುದೇಯನಾಡಿನಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನು ಕಂಡೆ; ಅಂತೆಯೇ ಕಣದ ಕಾಳನ್ನು ಕೂಡಿಸಿ ಆ ಕಾಳು, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು, ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಜೆರುಸಲೇಮಿಗೆ ತರುವುದನ್ನು ಗಮನಿಸಿದೆ. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ಅವರನ್ನು ಗದರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಕಾಲದಲ್ಲಿ ಜನರು ಸಬ್ಬತ್‍ದಿವಸ ಯೆಹೂದ ದೇಶದಲ್ಲಿ ತೊಟ್ಟಿಯೊಳಗೆ ದ್ರಾಕ್ಷೆತುಳಿಯುವದನ್ನೂ ಕಣದ ಕಾಳನ್ನು ಕೂಡಿಸಿ ಆ ಕಾಳು ದ್ರಾಕ್ಷಾರಸ ದ್ರಾಕ್ಷೆ ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇವಿುಗೆ ತರುವದನ್ನೂ ಕಂಡು ಅವರು ಆ ಆಹಾರಪದಾರ್ಥಗಳನ್ನು ಮಾರುವದಕ್ಕೆ ಬಂದಾಗ ಅವರನ್ನು ಗದರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ದಿವಸಗಳಲ್ಲಿ ಯೆಹೂದದ ಜನರು ಸಬ್ಬತ್ ದಿನದಲ್ಲಿ ಕೆಲಸ ಮಾಡುವುದನ್ನು ನೋಡಿದೆನು. ಅವರು ದ್ರಾಕ್ಷಿಯನ್ನು ತುಳಿದು ದ್ರಾಕ್ಷಾರಸ ತಯಾರಿಸುತ್ತಿದ್ದರು. ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಹೋಗುತ್ತಿದ್ದರು. ಬೆಳೆಯನ್ನು ಮಾರಲು ಜೆರುಸಲೇಮಿಗೆ ಬರುತ್ತಿದ್ದರು. ನಾನು ಅವರನ್ನು ಕಟುವಾಗಿ ಎಚ್ಚರಿಸಿ ಇನ್ನು ಮುಂದೆ ಸಬ್ಬತ್ ದಿನದಲ್ಲಿ ಪಟ್ಟಣದೊಳಗೆ ಏನನ್ನೂ ತರಬಾರದೆಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ದಿನಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ ದಿನಗಳಲ್ಲಿ ಕೆಲವರು ದ್ರಾಕ್ಷಿಯ ಆಲೆಗಳಲ್ಲಿ ಕೆಲಸಮಾಡುವುದನ್ನೂ, ಸಿವುಡುಗಳನ್ನು ತರುವುದನ್ನೂ, ಕತ್ತೆಗಳ ಮೇಲೆ ಹೇರಿಕೊಂಡು ಬರುವುದನ್ನೂ ಮತ್ತು ಸಬ್ಬತ್ ದಿನಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ, ದ್ರಾಕ್ಷಿಹಣ್ಣುಗಳನ್ನೂ, ಅಂಜೂರದ ಹಣ್ಣುಗಳನ್ನೂ, ಎಲ್ಲಾ ಹೊರೆಗಳನ್ನೂ ತರುವುದನ್ನು ನಾನು ಕಂಡೆನು. ಆದ್ದರಿಂದ, ವಿಶ್ರಾಂತಿಯ ದಿನದಲ್ಲಿ ಮಾರುವುದರ ವಿರೋಧವಾಗಿ ನಾನು ಎಚ್ಚರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:15
31 ತಿಳಿವುಗಳ ಹೋಲಿಕೆ  

ದೇಶನಿವಾಸಿಗಳು ಮಾರುವುದಕ್ಕೆ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್‍ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವುದಿಲ್ಲ; ಪ್ರತಿಯೊಂದು ಏಳನೆಯ ವರ್ಷ ಭೂಮಿಯ ಸಾಗುವಳಿಯನ್ನೂ, ಇತರರು ಕೊಡಬೇಕಾದ ಸಾಲವನ್ನೂ ಬಿಟ್ಟುಬಿಡುತ್ತೇವೆ;


ಕಡೆಗೆ ನಾನು ಅವರನ್ನು, “ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಮತ್ತೆ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು,” ಎಂದು ಗದರಿಸಿದೆ.


“ಆರು ದಿವಸಗಳು ನೀವು ದುಡಿಯಬಹುದು. ಆದರೆ ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದು. ಅದು ಉಳುವ ಕಾಲವಾಗಿರಲಿ, ಕೊಯ್ಯುವ ಕಾಲವಾಗಿರಲಿ ಏಳನೆಯ ದಿನ ದುಡಿಯದೆ ಇರಬೇಕು.


“ನೀವು ಸಬ್ಬತ್‍ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್‍ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ


ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.


ಆದರೆ ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಹೊತ್ತು, ಜೆರುಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಗೊಳ್ಳದೆ, ಆ ಸಬ್ಬತ್ ದಿನವನ್ನು ಪವಿತ್ರ ದಿನ ಎಂದು ಆಚರಿಸದೆಹೋದರೆ, ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಅದು ಜೆರುಸಲೇಮಿನ ಅರಮನೆಗಳನ್ನು ದಹಿಸಿಬಿಡುವುದು, ಆ ಬೆಂಕಿ ಆರುವುದೇ ಇಲ್ಲ.”


“ಸರ್ವೇಶ್ವರನಾದ ನಾನು ಹೇಳುವ ಮಾತಿದು : ನೀವು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನು ತರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ಪವಿತ್ರವಾಗಿ ಆಚರಿಸಿದರೆ,


ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ ನೀವು ತಪ್ಪದೆ ನಾಶವಾಗಿಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ಆರು ದಿನಗಳು ದುಡಿಯಬೇಕು. ಏಳನೆಯ ದಿನ ಪರಿಶುದ್ಧವಾದ ದಿನ. ಅದು ಸರ್ವೇಶ್ವರನಿಗೆ ಮೀಸಲಾದ ಸಬ್ಬತ್ ದಿನ. ಆದ್ದರಿಂದ ನೀವು ಸಂಪೂರ್ಣವಾಗಿ ದುಡಿಮೆ ನಿಲ್ಲಿಸಬೇಕು. ಆ ದಿನ ದುಡಿಯುವವನಿಗೆ ಮರಣದಂಡನೆಯಾಗಬೇಕು.


‘ಧರ್ಮೋಪದೇಶಕೆ ಮರಳಿ ಮನವೊಲಿದು ಬನ್ನಿ’ ಎಂದು ನೀವೆಷ್ಟೋ ಸಾರಿ ಅವರನ್ನೆಚ್ಚರಿಸಿದಿರಿ ಖಚಿತವಾಗಿ ಆದರೂ ಆಲಿಸಲಿಲ್ಲಾ ಗರ್ವಿಗಳು, ಅವಿಧೇಯರು, ಪಾಪಿಗಳು. ಜೀವಾಧಾರವಾದ ನಿಮ್ಮಾ ವಿಧಿನಿಯಮಗಳನು ಮೀರಿದರು ಮೊಂಡುಬಿದ್ದು ನಿಮ್ಮ ನೊಗಕೆ ಕೊರಳೊಡ್ಡದೆ ಹೋದರು.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.


ಸುನ್ನತಿಮಾಡಿಸಿಕೊಳ್ಳುವ ಪ್ರತಿಯೊಬ್ಬನೂ ಇಡೀ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಲು ಬದ್ಧನಾಗಿದ್ದಾನೆ ಎಂದು ಪುನಃ ನಿಮಗೆ ನಾನು ಒತ್ತಿ ಹೇಳುತ್ತೇನೆ.


ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.


ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು.


ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆ? ಯಾವ ವಿಷಯದಲ್ಲಿ ನಿನಗೆ ಬೇಸರವನ್ನುಂಟುಮಾಡಿದೆ? ಪ್ರಮಾಣವಾಗಿ ಹೇಳು.


“ಯೆಹೂದ್ಯರಲ್ಲಿ ಅಳಿದುಳಿದವರೇ, ಸರ್ವೇಶ್ವರ ನಿಮಗೆ ‘ಈಜಿಪ್ಟಿಗೆ ಹೋಗಬೇಡಿ’ ಎಂದು ಆಜ್ಞೆಮಾಡಿದ್ದಾರೆ. ನಾನು ಆ ಮಾತನ್ನು ಇಂದೇ ನಿಮಗೆ ಪ್ರಕಟಿಸಿದ್ದೇನೆ. ಇದು ನಿಮಗೆ ಚೆನ್ನಾಗಿ ತಿಳಿದಿರಲಿ.


“ಎಲೈ ಪ್ರಜೆ ಇಸ್ರಯೆಲ್, ನಾನು ನಿನ್ನ ದೇವರು I ಕಿವಿಗೊಟ್ಟು ಆಲಿಸು ನಾನು ನಿನ್ನ ವಿರುದ್ಧ ವಾದಿಸುವುದನು II


ಸರ್ವೇಶ್ವರ ಅವರನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ಇದಲ್ಲದೆ, ಈ ನಾಡಿನಲ್ಲಿ ವಾಸಿಸುತ್ತಿದ್ದ ಟೈರಿನವರು ಮೀನು ಮುಂತಾದ ಸರಕುಗಳನ್ನು ತಂದು ಯೆಹೂದ್ಯರಿಗೆ ಸಬ್ಬತ್‍ದಿನದಲ್ಲಿ ಜೆರುಸಲೇಮಿನಲ್ಲೇ ಮಾರುತ್ತಿದ್ದರು.


ಧರ್ಮಶಾಸ್ತ್ರವನ್ನು ಕೈಗೊಳ್ಳದವರು ದುಷ್ಟರನ್ನು ಹೊಗಳುವರು; ಕೈಗೊಳ್ಳುವವರು ಅವರ ವಿರುದ್ಧ ಹೋರಾಡುವರು.


“ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ? ಕೊಳಗವನ್ನು ಕಿರಿದು ಮಾಡೋಣ, ತೊಲವನ್ನು ಹಿರಿದು ಮಾಡೋಣ, ಕಳ್ಳತಕ್ಕಡಿಯನ್ನು ಬಳಸೋಣ;


ಮೋಶೆ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಇತ್ತ ಆಜ್ಞೆ: “ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಇರುವ ಗುರುತು.


ಆದುದರಿಂದ ಇಸ್ರಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆ ಅವರಿಗೂ ಅವರ ಪೀಳಿಗೆಗೂ ಶಾಶ್ವತವಾದ ಒಂದು ನಿಬಂಧನೆ.


ವರ್ಷಕ್ಕೆ ಐದು ಗ್ರಾಂ ಬೆಳ್ಳಿಯನ್ನು ದೇವಾಲಯ ಸೇವೆಗಾಗಿ ಕೊಡಬೇಕೆಂಬ ಕರ್ತವ್ಯವನ್ನು ವಹಿಸಿಕೊಳ್ಳುತ್ತೇವೆ;


ಬೆಳೆಯನು ಅದು ನಿನಗೆ ಹೊತ್ತು ತರುವುದೆಂದು ನಂಬುವೆಯಾ? ಕಣದಲಿ ನಿನಗೆ ಕಾಳನು ಕೂಡಿಸುವುದೆಂಬ ನಂಬಿಕೆ ನಿನಗಿದೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು