Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:28 - ಕನ್ನಡ ಸತ್ಯವೇದವು C.L. Bible (BSI)

28 ಮಹಾಯಾಜಕ ಎಲ್ಯಾಷೀಬನ ಮಗ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದುದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮಹಾಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾಗಿದ್ದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮಹಾಯಾಜಕ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಪ್ರಧಾನ ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನಿನ ಸನ್ಬಲ್ಲಟನಿಗೆ ಅಳಿಯನಾದನು. ನಾನು ಅವನನ್ನು ಆ ಸ್ಥಳದಿಂದ ಹೊರಗೆ ಓಡಿಸಿಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಮಹಾಯಾಜಕನಾದ ಎಲ್ಯಾಷೀಬನ ಮಗ ಯೋಯಾದನ ಮಕ್ಕಳಲ್ಲಿ ಒಬ್ಬನು ಹೋರೋನಿನವನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:28
14 ತಿಳಿವುಗಳ ಹೋಲಿಕೆ  

ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಯೂ ಅರೇಬಿಯನಾದ ಗೆಷೆಮನೂ ಈ ಸಮಾಚಾರವನ್ನೂ ಕೇಳಿದಾಗ ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿದರು. “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರೋಧವಾಗಿ ದಂಗೆ ಏಳಬೇಕೆಂದಿದ್ದೀರೋ?” ಎಂದು ಕೇಳಿದರು.


ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿ ಹಾಗು ಪರ್ಷಿಯಾದ ದಾರ್ಯಾವೆಷ ರಾಜನ ಆಳ್ವಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದೆ.


ಯೇಷೂವನಿಗೆ ಯೋಯಾಕೀಮನು, ಯೋಯಾಕೀಮನಿಗೆ ಎಲ್ಯಾಷೀಬನು, ಎಲ್ಯಾಷೀಬನಿಗೆ ಯೋಯಾದನು,


ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಬುರುಜಿನವರೆಗೆ ಗೋಡೆಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.


ಇಸ್ರಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್ ದೇಶದವನಾದ ತೊಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬ ಹೊಟ್ಟೆಕಿಚ್ಚುಪಟ್ಟರು.


ಜ್ಞಾನಿಯಾದ ಅರಸ ಚದರಿಸಿಬಿಡುವನು ದುಷ್ಟರನ್ನು; ಅವರ ಮೇಲೆ ಉರುಳಿಸುವನು ಕಣದ ಗುಂಡನ್ನು.


ರಾಜನು ನ್ಯಾಯಾಸನದ ಮೇಲೆ ವಿರಾಜಿಸುವಾಗ ಕೆಟ್ಟತನವನ್ನು ತೂರಿಬಿಡುವನು ದೃಷ್ಟಿಯಿಂದ.


ಇಲ್ಲಮಾಡುವೆನು ಕೆಡುಕರನು ಪ್ರಭುವಿನಾ ನಗರದೊಳಗೆ I ನಾಶಮಾಡುವೆನು ನಾಡಿನ ದುರುಳರನು ದಿನದಿನಗಳೊಳಗೆ II


ಕೋಪಗೊಂಡು ಅವರನ್ನು ಶಪಿಸಿದೆ; ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕೀಳಿಸಿದೆ.


ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿ ಸನ್ಬಲ್ಲಟನಿಗೆ ಮುಟ್ಟಿತು. ಅವನು ಬಹಳ ಹೊಟ್ಟೆಕಿಚ್ಚಿನ ಹಾಗು ಸಿಡುಕಿನ ವ್ಯಕ್ತಿ.


ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸಗಳೊಳಗೆ ಬರಬೇಕು; ಬಾರದವನು ತನ್ನ ಎಲ್ಲ ಆಸ್ತಿಪಾಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು,” ಎಂದು ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು