Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:31 - ಕನ್ನಡ ಸತ್ಯವೇದವು C.L. Bible (BSI)

31 ನೇಮಿತಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆ; ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿಯಮಿತ ಕಾಲಗಳನ್ನು, ಸಲ್ಲತಕ್ಕ ಕಟ್ಟಿಗೆ ದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೇವಿುತ ಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪು ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಜನರು ಕಟ್ಟಿಗೆಯನ್ನೂ ಪ್ರಥಮಫಲಗಳನ್ನೂ ಸರಿಯಾದ ಸಮಯದಲ್ಲಿ ತರುವಂತೆ ನಾನು ಆಜ್ಞಾಪಿಸಿದೆನು. ನನ್ನ ದೇವರೇ, ಈ ಒಳ್ಳೆಯ ಕಾರ್ಯಗಳನ್ನೆಲ್ಲಾ ಮಾಡಿದ ನನ್ನನ್ನು ಮರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನೇಮಿತ ಕಾಲದಲ್ಲಿ ಸಲ್ಲತಕ್ಕ ಅರ್ಪಣೆಯ ಕಟ್ಟಿಗೆಗಳನ್ನೂ, ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ಇದನ್ನು ಸಹ ನನ್ನ ಮೇಲಿನ ನಿಮ್ಮ ದಯೆಯೊಂದಿಗೆ ನನ್ನನ್ನು ನೆನಪುಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:31
10 ತಿಳಿವುಗಳ ಹೋಲಿಕೆ  

ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ಸ್ಮರಿಸಿಕೊಳ್ಳಿ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿಮ್ಮ ನೆನಪಿನಿಂದ ಅಳಿಸಿಬಿಡಬೇಡಿ.


ಅವರು ಅಂದಿನಿಂದ ಸಬ್ಬತ್‍ದಿನದಂದು ಪುನಃ ಬರಲಿಲ್ಲ. ಆಮೇಲೆ ನಾನು ಲೇವಿಯರಿಗೆ, “ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು,” ಎಂದು ಆಜ್ಞಾಪಿಸಿದೆ. “ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿಮ್ಮ ಮಹಾಕೃಪೆಗನುಸಾರ ನನ್ನನ್ನು ಕನಿಕರಿಸಿರಿ.”


ಮರೆಯಬೇಡೆನ್ನನು ಪ್ರಭು, ನಿನ್ನ ಪ್ರಜೆಗೆ ದಯೆತೋರುವಾಗ I ನೆರವು ನೀಡೆನಗೆ ಸ್ವಾಮಿ, ನೀನಾ ಜನರನು ಉದ್ಧರಿಸುವಾಗ II


ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II


ಧರ್ಮಶಾಸ್ತ್ರವಿಧಿಗನುಸಾರ, ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮೇಲೆ ಬೆಂಕಿಯುರಿಸುವುದಕ್ಕಾಗಿ ವರ್ಷವರ್ಷವೂ ನೇಮಿತವಾದ ಕಾಲಗಳಲ್ಲಿ, ನಮ್ಮ ದೇವಾಲಯಕ್ಕೆ ಸೌದೆ ದೊರಕುವ ಹಾಗೆ ಆಯಾ ಗೋತ್ರಾನುಸಾರ ಕಟ್ಟಿಗೆ ದಾನಮಾಡತಕ್ಕವರು ಇಂತಿಂಥವರು ಎಂಬುದನ್ನು ಯಾಜಕರೂ ಲೇವಿಯರೂ ಜನಸಾಮಾನ್ಯರೂ ಸೇರಿ, ನಮ್ಮಲ್ಲೇ ಚೀಟುಹಾಕಿ ಗೊತ್ತುಮಾಡುತ್ತೇವೆ;


ಬಳಿಕ ಅವನು, “ಸ್ವಾಮಿ ಯೇಸುವೇ, ನೀವು ರಾಜ್ಯಾಧಿಕಾರದೊಡನೆ ಬರುವಾಗ ನನ್ನನ್ನು ಜ್ಞಾಪಿಸಿಕೊಳ್ಳಿ,” ಎಂದು ಬೇಡಿಕೊಂಡನು.


‘ನನ್ನ ದೇವರೇ, ನಾನು ಈ ಜನರಿಗೆ ಮಾಡಿದ ಉಪಕಾರವನ್ನು ನೆನೆಸಿಕೊಂಡು ನನಗೆ ಒಳಿತನ್ನು ಅನುಗ್ರಹಿಸಿ!’ ಎಂದು ಪ್ರಾರ್ಥಿಸಿದೆ.


ನಮ್ಮ ಭೂಮಿಯ ಮತ್ತು ಎಲ್ಲ ಹಣ್ಣಿನಮರಗಳ ಪ್ರಥಮ ಫಲವನ್ನು ಪ್ರತೀ ವರ್ಷವೂ ಸರ್ವೇಶ್ವರನ ಆಲಯಕ್ಕೆ ತಂದುಕೊಡುತ್ತೇವೆ;


ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದಕೊಠಡಿಗಳಲ್ಲಿಡಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು