Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:6 - ಕನ್ನಡ ಸತ್ಯವೇದವು C.L. Bible (BSI)

6 ನಾನು ಬಾಬಿಲೋನಿನ ಅರಸ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ಅರಸನ ಬಳಿಗೆ ಹೋಗಿದ್ದೆ. ಆದುದರಿಂದ ಇದೆಲ್ಲಾ ನಡೆಯುವಾಗ ನಾನು ಜೆರುಸಲೇಮಿನಲ್ಲಿರಲಿಲ್ಲ. ಕ್ರಮೇಣ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬಾಬಿಲೋನಿನ ಅರಸನಾದ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅರಸನ ಬಳಿಗೆ ಹೋಗಿದ್ದೆನು. ಇದೆಲ್ಲಾ ನಡೆಯುವಾಗ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ. ಕಾಲಾಂತರದಲ್ಲಿ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಬಾಬೆಲಿನ ಅರಸನಾದ ಅರ್ತಷಸ್ತನ ಮೂವತ್ತೆರಡನೆಯ ವರುಷದಲ್ಲಿ ಅರಸನ ಬಳಿಗೆ ಹೋಗಿದ್ದೆನಾದದರಿಂದ ಇದೆಲ್ಲಾ ನಡೆಯುವಾಗ ನಾನು ಯೆರೂಸಲೇವಿುನಲ್ಲಿರಲಿಲ್ಲ. ಕಾಲಾಂತರದಲ್ಲಿ ನಾನು ಅರಸನಿಂದ ಅಪ್ಪಣೆಪಡಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇದೆಲ್ಲಾ ನಡೆಯುತ್ತಿರುವಾಗ ನಾನು ಜೆರುಸಲೇಮಿನಲ್ಲಿರಲಿಲ್ಲ. ನಾನು ಬಾಬಿಲೋನಿನ ಅರಸನ ಬಳಿಗೆ ಹಿಂತಿರುಗಿದ್ದೆನು. ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅವನ ಬಳಿಗೆ ಹೋದೆನು. ಸ್ವಲ್ಪಕಾಲವಾದ ಬಳಿಕ ಅರಸನ ಅಪ್ಪಣೆಯೊಂದಿಗೆ ನಾನು ಹಿಂತಿರುಗಿ ಜೆರುಸಲೇಮಿಗೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಇವೆಲ್ಲಾ ಸಂಭವಿಸುವಾಗ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ. ಬಾಬಿಲೋನಿನ ಅರಸನಾದ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅರಸನ ಬಳಿಗೆ ಹೋಗಿದ್ದೆ. ತರುವಾಯ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:6
7 ತಿಳಿವುಗಳ ಹೋಲಿಕೆ  

ಅರಸ ಅರ್ತಷಸ್ತನು ನನ್ನನ್ನು ಜುದೇಯ ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳವರೆಗೆ ಅಂದರೆ, ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ, ನಾನಾಗಲಿ, ನನ್ನ ಸಹೋದರರಾಗಲಿ ರಾಜ್ಯಪಾಲನೆಗೆ ಸಲ್ಲ ತಕ್ಕ ಭತ್ಯದಿಂದ ಜೀವನ ಮಾಡಲಿಲ್ಲ.


ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿ ಹೋದ.


ನಾನು ರಾಜನ ಪಾನಸೇವಕನಾಗಿದ್ದೆ. ಅರ್ತಷಸ್ತರಾಜನ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ, ರಾಜನು ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ, ದ್ರಾಕ್ಷಾರಸವನ್ನು ತಂದುಕೊಟ್ಟೆ. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ.


ಇದಲ್ಲದೆ, ಆಡಂಬರದಿಂದ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಏಕೆಂದರೆ, ಇಸ್ರಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಸ್ಸೀರಿಯದ ಅರಸ, ತಮಗೆ ಸಹಾಯಮಾಡುವಂತೆ ಸರ್ವೇಶ್ವರ ಅವನ ಮನಪರಿವರ್ತಿಸಿ, ಅವರಿಗೆ ಸಂತೋಷವನ್ನು ಉಂಟುಮಾಡಿದ್ದರು.


‘ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಯೇಲರು ನೋಡಿ, ಆರೋನನ ಬಳಿಗೆ ಕೂಡಿಬಂದರು. ಅವನಿಗೆ, “ಈಜಿಪ್ಟ್ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆ ಏನಾದನೋ ಗೊತ್ತಿಲ್ಲ. ಆದ್ದರಿಂದ ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗಲು ನಮಗೊಬ್ಬ ದೇವರನ್ನು ಮಾಡಿಸಿಕೊಡು,” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು