Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:7 - ಕನ್ನಡ ಸತ್ಯವೇದವು C.L. Bible (BSI)

7 ಮತ್ತೆ ಜೆರುಸಲೇಮಿಗೆ ಬಂದೆ. ಆಗ ಎಲ್ಯಾಷೀಬನು ಟೋಬೀಯನಿಗಾಗಿ ದೇವಾಲಯ ಪ್ರಾಕಾರದೊಳಗೆ ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನೋಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹಿಂತಿರುಗಿ ಯೆರೂಸಲೇಮಿಗೆ ಬಂದೆನು. ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವಾಲಯದ ಪ್ರಾಕಾರದೊಳಗೆ ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತಿರಿಗಿ ಯೆರೂಸಲೇವಿುಗೆ ಬಂದಾಗ ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವಾಲಯ ಪ್ರಾಕಾರದೊಳಗೆ ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನೋಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಎಲ್ಯಾಷೀಬನು ಟೋಬೀಯನಿಗೆ ನಮ್ಮ ದೇವರ ಆಲಯದ ಒಂದು ಕೋಣೆಯನ್ನು ಕೊಟ್ಟನೆಂಬ ದುಃಖದ ವಿಷಯವು ನನಗೆ ಜೆರುಸಲೇಮಿನಲ್ಲಿದ್ದಾಗ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನಾನು ಕಂಡಾಗ, ಅದು ನನಗೆ ಬಹಳ ವ್ಯಸನಕರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:7
8 ತಿಳಿವುಗಳ ಹೋಲಿಕೆ  

ನೈವೇದ್ಯದ್ರವ್ಯ, ಧೂಪಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯರಿಗೆ, ಗಾಯಕರಿಗೆ ಹಾಗು ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗಾಗಿ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಅವನಿಗಾಗಿ ಸಿದ್ಧಮಾಡಿಸಿಕೊಟ್ಟಿದ್ದನು.


ಸಹೋದರರೇ, ನೀವು ಜಗಳವಾಡುತ್ತಿದ್ದೀರಿ ಎಂಬುದು ಖ್ಲೊಯೇಯನ ಮನೆಯವರಿಂದ ತಿಳಿದುಬಂದಿದೆ.


ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ !


ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರ ಪಾರಾಯಣವು ನಡೆಯುತ್ತಿತ್ತು. ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದಿತ್ತು.


ಇದಾದನಂತರ ಮುಖ್ಯಸ್ಥರು ನನ್ನ ಬಳಿಗೆ ಬಂದು, “ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಎಂಬ ಅನ್ಯದೇಶಗಳವರ ಪದ್ಧತಿಯನ್ನು ತೊರೆಯದೆ, ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ,


ಎಲ್ಯೋಗೇನೈಯ ಏಳು ಜನ ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ, ಅನಾನೀ ಎಂಬವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು