ನೆಹೆಮೀಯ 13:9 - ಕನ್ನಡ ಸತ್ಯವೇದವು C.L. Bible (BSI)9 ಆ ಕೊಠಡಿಯಿಂದ ಹೊರಗೆ ಹಾಕಿಸಿ ಕೊಠಡಿಯನ್ನು ಶುದ್ಧಮಾಡುವುದಕ್ಕೆ ಅಪ್ಪಣೆಕೊಟ್ಟೆ. ಅದು ಶುದ್ಧಮಾಡುವುದಕ್ಕೆ ಅಪ್ಪಣೆಕೊಟ್ಟೆ. ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಅಲ್ಲಿಡಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕೊಠಡಿಯನ್ನು ಶುದ್ಧಮಾಡುವುದಕ್ಕಾಗಿ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಆ ಕೊಠಡಿಯಲ್ಲಿ ಇಡಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕೊಠಡಿಯನ್ನು ಶುದ್ಧಿಮಾಡುವದಕ್ಕೆ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯ ದ್ರವ್ಯ, ಧೂಪ ಇವುಗಳನ್ನು ತಿರಿಗಿ ಅಲ್ಲಿಡಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಕೋಣೆಗಳನ್ನು ಶುದ್ಧಮಾಡಲು ನಾನು ಆಜ್ಞೆ ಮಾಡಿದೆನು. ಆಮೇಲೆ ದೇವಾಲಯದ ಪಾತ್ರೆಗಳನ್ನು, ವಸ್ತುಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಧೂಪವನ್ನು ಆ ಕೋಣೆಯೊಳಗೆ ತಂದಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ನಾನು ಹೇಳಿದ್ದರಿಂದ ಅವರು ಕೊಠಡಿಗಳನ್ನು ಶುದ್ಧ ಮಾಡಿದರು. ತರುವಾಯ ದೇವರ ಆಲಯದ ಪಾತ್ರೆಗಳನ್ನೂ ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತಿರುಗಿ ಅಲ್ಲಿ ತಂದು ಇಡಿಸಿದೆನು. ಅಧ್ಯಾಯವನ್ನು ನೋಡಿ |