Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:1 - ಕನ್ನಡ ಸತ್ಯವೇದವು C.L. Bible (BSI)

1 ನಾನು ರಾಜನ ಪಾನಸೇವಕನಾಗಿದ್ದೆ. ಅರ್ತಷಸ್ತರಾಜನ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ, ರಾಜನು ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ, ದ್ರಾಕ್ಷಾರಸವನ್ನು ತಂದುಕೊಟ್ಟೆ. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಅರಸನ ಪಾನಸೇವಕನಾಗಿದ್ದನು. ಅರಸನಾದ ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅರಸನ ಸನ್ನಿಧಿಯಲ್ಲಿ ಇದ್ದಾಗ ಹಿಂದೆ ಎಂದೂ ಮನಗುಂದಿದವನಂತೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ಅರಸನ ಪಾನಸೇವಕನಾಗಿದ್ದೆನು. ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರುಷದ ಚೈತ್ರಮಾಸದಲ್ಲಿ ಅರಸನು ದ್ರಾಕ್ಷಾರಸಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ನಿಸ್ಸಾನ್ ತಿಂಗಳಲ್ಲಿ ರಾಜನಿಗೆ ದ್ರಾಕ್ಷಾರಸವನ್ನು ನಾನು ಕೊಟ್ಟೆನು. ನಾನೆಂದೂ ರಾಜನ ಮುಂದೆ ದುಃಖಿತನಾಗಿರಲಿಲ್ಲ. ಆದರೆ ಈ ಸಮಯದಲ್ಲಿ ನನ್ನ ಮುಖವು ಕಳೆಗುಂದಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರ್ಷದ, ನಿಸಾನ ತಿಂಗಳಲ್ಲಿ, ಅವನ ಮುಂದೆ ದ್ರಾಕ್ಷಾರಸವನ್ನು ತೆಗೆದುಕೊಂಡು ಅರಸನಿಗೆ ಕೊಟ್ಟೆನು. ನಾನು ಅವನ ಸಮ್ಮುಖದಲ್ಲಿ ಹಿಂದೆ ಎಂದೂ ದುಃಖಿತನಾಗಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:1
9 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಪರ್ಷಿಯ ರಾಜ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರಾಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ;


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ಹಕಲ್ಯನ ಮಗ ನೆಹೆಮೀಯನ ಮಾತುಗಳು: ಇಪ್ಪತ್ತನೆಯ ವರ್ಷದ ಮಾರ್ಗಶಿರ ಮಾಸದಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದೆ.


ಅರಸ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ವರ್ಷದ ಮೊದಲನೆಯ ತಿಂಗಳು ಆದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿನವೂ ಯಾವುದು ಎಂದು ತಿಳಿದುಕೊಳ್ಳಲು ‘ಪೂರ’ನ್ನು ಅಂದರೆ ಚೀಟನ್ನು ಹಾಕಲು ಚೀಟು ಹನ್ನೆರಡನೆ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.


ಅವನೊಡನೆ ಕೆಲವು ಮಂದಿ ಇಸ್ರಯೇಲರು, ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಹಾಗು ದೇವಸ್ಥಾನದ ಪರಿಚಾರಕರು ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಜೆರುಸಲೇಮಿಗೆ ಬಂದರು.


ಪಾನಸೇವಕರ ಮುಖ್ಯಸ್ಥನನ್ನು ಪುನಃ ಅವನ ನೌಕರಿಗೆ ಏರಿಸಿದ; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸುವಂಥವನಾದ.


ಫರೋಹನ ಪಾನಪಾತ್ರೆ ನನ್ನ ಕೈಯಲ್ಲಿತ್ತು. ನಾನು ಆ ಗೊಂಚಲುಗಳನ್ನು ಕೊಯ್ದು ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದೆ,” ಎಂದು ಹೇಳಿದ.


ಇದನ್ನು ತಿಳಿದು ಮನದಟ್ಟು ಮಾಡಿಕೊ, ‘ಹಿಂದಿರುಗಿ ಜೆರುಸಲೇಮನ್ನು ಪುನರ್‍ ನಿರ್ಮಿಸಿ’ ಎಂಬ ದೈವೋಕ್ತಿ ಹೊರಡುವಂದಿನಿಂದ ಪ್ರಭುವಾಗಿ ಅಭಿಷಿಕ್ತನಾದವನು ಬರುವುದರೊಳಗೆ ಏಳು ಸಾರಿ ಏಳು ವರ್ಷಗಳು ಕಳೆಯಬೇಕು. ಅದು ಪುನಃ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಕಟ್ಟಲ್ಪಟ್ಟು ಏಳು ಸಾರಿ ಅರವತ್ತೆರಡು ವರ್ಷಗಳು ಇರುವುದು. ಆ ಕಾಲವು ಬಹು ಕಷ್ಟಕರವಾದ ಕಾಲವಾಗಿರುವುದು.


ಪರ್ಷಿಯರಾಜ ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್, ಈ ಮೊದಲಾದವರು ಅರ್ತಷಸ್ತನಿಗೆ ಪತ್ರ ಬರೆದರು. ಆ ಪತ್ರ ಅರಮಾಯಿಕ್ ಲಿಪಿಯಲ್ಲೂ ಅರಮಾಯಿಕ್ ಭಾಷೆಯಲ್ಲೂ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು