Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:12 - ಕನ್ನಡ ಸತ್ಯವೇದವು C.L. Bible (BSI)

12 ಆಮೇಲೆ ಜೆರುಸಲೇಮಿಗಾಗಿ ಮಾಡತಕ್ಕ ಕಾರ್ಯದ ಬಗ್ಗೆ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾರೆಂದು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆ. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಮೇಲೆ ಯೆರೂಸಲೇಮಿಗಾಗಿ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂಬುದನ್ನು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆರೂಸಲೇವಿುಗೋಸ್ಕರ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂದು ಯಾರಿಗೂ ತಿಳಿಸದೆ ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟಿದ್ದನ್ನು ಯಾರಿಗೂ ತಿಳಿಸಲಿಲ್ಲ. ನಾನು ಸವಾರಿಮಾಡುತ್ತಿದ್ದ ವಾಹನ ಪಶುವಿನ ಹೊರತು ಬೇರೆ ಪಶು ನನ್ನೊಂದಿಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:12
20 ತಿಳಿವುಗಳ ಹೋಲಿಕೆ  

ಹೀಗೆ ದೈವಸಂಕಲ್ಪವು ನೆರವೇರಬೇಕೆಂದು ದೇವರೇ ಆ ಜನರನ್ನು ಪ್ರೇರೇಪಿಸುವರು. ಇದೇ ಪ್ರೇರಣೆಯಿಂದಾಗಿ ದೇವರ ವಾಕ್ಯ ನೆರವೇರುವವರೆಗೆ ಅವರು ಒಮ್ಮನಸ್ಸಿನಿಂದ ರಾಜ್ಯಾಧಿಕಾರವನ್ನು ಆ ಮೃಗಕ್ಕೆ ಒಪ್ಪಿಸಿಬಿಡುವರು.


ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:


ನಿಮ್ಮ ಮೇಲೆ ನನಗಿರುವ ಅದೇ ಅಕ್ಕರೆಯನ್ನು ತೀತನಲ್ಲೂ ಮೂಡಿಸಿದ ದೇವರಿಗೆ ಕೃತಜ್ಞತೆ ಸಲ್ಲಬೇಕು.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು.


ಹರಿಯುವ ಸಮಯ, ಹೊಲಿಯುವ ಸಮಯ ಸುಮ್ಮನಿರುವ ಸಮಯ, ಮಾತಾಡುವ ಸಮಯ.


ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ I “ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ II


ಸಿಯೋನಿಗೆ ದೇವಾ, ಶುಭವನು ಕರುಣಿಸು I ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು II


ಆದುದರಿಂದ ನೀನು ಈ ರಾತ್ರಿಯಲ್ಲೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು.


ಅಂತೆಯೇ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ, ಸರ್ವೇಶ್ವರನು ಹೇಳಿದ ಹಾಗೆ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ ಊರಿನವರಿಗೂ ಹೆದರಿಕೊಂಡದ್ದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಅದರಂತೆ ಜೋಸೆಫನು ಕೂಡಲೇ ಎದ್ದು ಮಗುವನ್ನೂ ತಾಯಿಯನ್ನೂ ರಾತ್ರೋರಾತ್ರಿಯಲ್ಲೇ ಕರೆದುಕೊಂಡು ಈಜಿಪ್ಟಿಗೆ ತೆರಳಿದನು.


ನೆರೆಯವನನ್ನು ನಂಬಬೇಡ, ಆಪ್ತನಲ್ಲಿ ಭರವಸೆ ಇಡಬೇಡ. ನಿನ್ನೊಡನೆ ಮಲಗುವ ಮಡದಿಯೊಂದಿಗೂ ಬಾಯಿಬಿಡಬೇಡ.


ಯೆಹೋಶುವನು ಗಿಲ್ಗಾಲ್ ಬಿಟ್ಟು ರಾತ್ರಿಯೆಲ್ಲಾ ಪ್ರಯಾಣ ಮಾಡಿ ತಟ್ಟನೆ ಅವರ ಮೇಲೆ ಬಿದ್ದನು.


ಅನಂತರ ಜೆರುಸಲೇಮಿಗೆ ಬಂದೆ. ಅಲ್ಲಿ ಮೂರು ದಿನಗಳಿದ್ದೆ.


ನಾನು ರಾತ್ರಿ ವೇಳೆಯಲ್ಲಿ ಕಣಿವೆಯ ಬಾಗಿಲಿನಿಂದ ಹೊರಟು, ಹಾಳುಬಿದ್ದ ಜೆರುಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲಾಗಿದ್ದ ಅದರ ಬಾಗಿಲುಗಳನ್ನೂ ನೋಡುತ್ತಾ ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆ.


ಜಾಣನು ತನ್ನ ಜ್ಞಾನವನ್ನು ಮುಚ್ಚಿಡುವನು; ಮೂಢನು ತನ್ನ ಮೂರ್ಖತನವನ್ನು ಪ್ರಕಟಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು