Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:14 - ಕನ್ನಡ ಸತ್ಯವೇದವು C.L. Bible (BSI)

14 ಅಲ್ಲಿಂದ ಬುಗ್ಗೆಬಾಗಿಲನ್ನು ಹಾದು ಅರಸನ ಕೊಳಕ್ಕೆ ಹೋದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಲ್ಲಿಂದ ಬುಗ್ಗೆ ಬಾಗಿಲನ್ನು ಹಾದು ಅರಸನ ಕೊಳಕ್ಕೆ ಬಂದೆನು. ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಲ್ಲಿಂದ ಬುಗ್ಗೆಬಾಗಲನ್ನು ಹಾದು ಅರಸನ ಕೊಳಕ್ಕೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಲ್ಲಿಂದ ಬುಗ್ಗೆಬಾಗಿಲಿಗೂ ಅರಸನ ಕೊಳಕ್ಕೂ ಬಂದೆನು. ಇಲ್ಲಿಂದ ಮುಂದಕ್ಕೆ ಹೋಗಲು ನನ್ನ ಕುದುರೆಗೆ ಸಾಧ್ಯಾವಾಗಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಲ್ಲಿಂದ ಬುಗ್ಗೆಬಾಗಿಲನ್ನು ಹಾದು, ಅರಸನ ಕೊಳಕ್ಕೆ ಹೋದೆನು. ನನ್ನ ವಾಹನ ಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿಲ್ಲದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:14
7 ತಿಳಿವುಗಳ ಹೋಲಿಕೆ  

ಬುಗ್ಗೆಬಾಗಿಲನ್ನು ದುರಸ್ತಿಪಡಿಸಿದವನು ಮಿಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ, ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ, ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.


ಹಿಜ್ಕೀಯನ ಉಳಿದ ಚರಿತ್ರೆ, ಅವನ ಪರಾಕ್ರಮಕಾರ್ಯ ಹಾಗು ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರ, ಇವು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಮೇಲಣ ಗೀಹೋನ್ ಎಂಬ ಬುಗ್ಗೆಗೆ ಕಟ್ಟೆಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪೂರ್ವದಿಕ್ಕಿನ ಕಣಿವೆಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲ ಕಾರ್ಯಗಳಲ್ಲೂ ಯಶಸ್ವಿ ಆದನು.


ಅಸ್ಸೀರಿಯದ ಅರಸನು ಲಾಕೀಷಿನಿಂದ ಮಹಾ ಸೈನ್ಯಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಜೆರುಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ದಿಣ್ಣೆ ಹತ್ತಿ ಜೆರುಸಲೇಮಿಗೆ ಬಂದು, ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ, ಕೆರೆಯ ಕಾಲುವೆಯ ಬಳಿ, ಪಾಳೆಯ ಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ಇವರು ಬುಗ್ಗೆಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನನುಸರಿಸಿ, ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ, ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು.


ಬೆಳೆಯುವ ಗಿಡತೋಟಗಳಿಗೆ ನೀರುಹಾಯಿಸಲು ಕೆರೆಕುಂಟೆಗಳನ್ನು ತೋಡಿಸಿದೆ.


ಇವನ ಆಚೆ ಅಂದರೆ, ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ, ಇವುಗಳವರೆಗೂ ದುರಸ್ತುಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು