Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:16 - ಕನ್ನಡ ಸತ್ಯವೇದವು C.L. Bible (BSI)

16 ನಾನು ಆವರೆಗೆ ಯೆಹೂದ್ಯರಿಗೂ ಯಾಜಕರಿಗೂ ಶ್ರೀಮಂತರಿಗೂ ಅಧಿಕಾರಿಗಳಿಗೂ ಹಾಗು ಕೆಲಸ ನಡೆಸತಕ್ಕ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ, ನಾನು ಎಲ್ಲಿ ಹೋಗಿದ್ದೆ, ಏನು ಮಾಡಿದೆ ಎಂಬುದು ಅಧಿಕಾರಿಗಳಿಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಆ ವರೆಗೆ ಯೆಹೂದ್ಯರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಆವರೆಗೆ ಯೆಹೂದ್ಯರಿಗೂ ಯಾಜಕರಿಗೂ ಶ್ರೀಮಂತರಿಗೂ ಅಧಿಕಾರಿಗಳಿಗೂ ಕೆಲಸನಡಿಸತಕ್ಕ ಇತರರಿಗೂ ಏನೂ ತಿಳಿಸದೆ ಇದ್ದದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬದು ಅಧಿಕಾರಿಗಳಿಗೆ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಸ್ರೇಲಿನ ನಾಯಕರಿಗೂ ಅಧಿಕಾರಿಗಳಿಗೂ ನಾನು ಎಲ್ಲಿಗೆ ಹೋದೆನೆಂದು ತಿಳಿದಿರಲಿಲ್ಲ; ನಾನು ಏನು ಮಾಡುತ್ತಿದ್ದೇನೆಂದೂ ಅವರಿಗೆ ಗೊತ್ತಿರಲಿಲ್ಲ. ಯೆಹೂದ್ಯರಿಗಾಗಲಿ ಅಧಿಕಾರಿಗಳಿಗಾಗಲಿ ರಾಜನಿಂದ ನೇಮಕಗೊಂಡ ಕೆಲಸವರ್ಗದವರಿಗಾಗಲಿ ನಾನು ಇನ್ನೂ ಯಾವ ವಿಷಯವನ್ನೂ ಹೇಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಎಲ್ಲಿ ಹೋದೆನೆಂದೂ, ಏನು ಮಾಡಿದೆನೆಂದೂ ಅಧಿಕಾರಿಗಳು ತಿಳಿಯದೆ ಇದ್ದರು. ಅಲ್ಲಿಯವರೆಗೆ ನಾನು ಯೆಹೂದ್ಯರಿಗಾದರೂ, ಯಾಜಕರಿಗಾದರೂ, ಶ್ರೀಮಂತರಿಗಾದರೂ, ಅಧಿಕಾರಿಗಳಿಗಾದರೂ, ಕೆಲಸ ಮಾಡುವ ಇತರ ಜನರಿಗಾದರೂ ಗೊತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:16
4 ತಿಳಿವುಗಳ ಹೋಲಿಕೆ  

ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿಲ್ಲದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆ. ಆಮೇಲೆ ಪುನಃ ಕಣಿವೆಯ ಬಾಗಿಲಿನಿಂದ ಮನೆಗೆ ಬಂದೆ.


ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣಮುಂದಿರುತ್ತದಲ್ಲವೇ? ಜೆರುಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಜೆರುಸಲೇಮಿನ ಗೋಡೆಯನ್ನು ಕಟ್ಟೋಣ, ಹೀಗೆ ಮಾಡಿದರೆ ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.


ಅವರು ಇಸ್ರಯೇಲರ ಮುಖಂಡರಿಗೆ ಯಾವ ಹಾನಿಯನ್ನೂ ಮಾಡಲಿಲ್ಲ. ಆ ಮುಖಂಡರು ದೇವರನ್ನು ಸಂದರ್ಶಿಸಿದರು; ಬಳಿಕ ಅನ್ನಪಾನಗಳನ್ನು ತೆಗೆದುಕೊಂಡರು.


ಜಾಣನು ತನ್ನ ಜ್ಞಾನವನ್ನು ಮುಚ್ಚಿಡುವನು; ಮೂಢನು ತನ್ನ ಮೂರ್ಖತನವನ್ನು ಪ್ರಕಟಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು