Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:3 - ಕನ್ನಡ ಸತ್ಯವೇದವು C.L. Bible (BSI)

3 ನಾನು ರಾಜನಿಗೆ, “ರಾಜಾಧಿರಾಜರು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಹೀಗಿರುವಲ್ಲಿ, ನನ್ನ ಮುಖ ಕಳೆಗುಂದದೆ ಇರಲು ಸಾಧ್ಯವೆ?,” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಅರಸನಿಗೆ - ಅರಸನು ಚಿರಂಜೀವಿಯಾಗಿರಲಿ. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವದು ಹೇಗೆ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಭಯದಿಂದಲೇ, “ಅರಸನೇ ಚಿರಂಜೀವಿಯಾಗಿರು. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳುದಿಬ್ಬವಾಗಿರುವುದರಿಂದ ನಾನು ದುಃಖಿತನಾಗಿದ್ದೇನೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿರುವಾಗ ನನ್ನ ಮುಖವು ದುಃಖವಿಲ್ಲದೆ ಇರಲು ಸಾಧ್ಯವೇ?” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:3
21 ತಿಳಿವುಗಳ ಹೋಲಿಕೆ  

ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ. ಜೆರುಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.


ಆ ಪಂಡಿತರು ಅರಮೀಯ ಭಾಷೆಯಲ್ಲಿ ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ! ಆ ಕನಸನ್ನು ನಿಮ್ಮ ದಾಸರಾದ ನಮಗೆ ಹೇಳಿ. ಅದರ ತಾತ್ಪರ್ಯವನ್ನು ತಿಳಿಸುತ್ತೇವೆ,” ಎಂದು ಅರಿಕೆಮಾಡಿದರು.


ಆಗ ಬತ್ಷೆಬೆ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದಳು, “ನನ್ನೊಡೆಯರಾದ ದಾವೀದರಸರು ಸುದೀರ್ಘಕಾಲ ಬಾಳಲಿ!” ಎಂದಳು.


ರಾಜನೂ ಅವನ ಸಾಮಂತರೂ ಆಡಿದ ಮಾತು ರಾಣಿಗೆ ಮುಟ್ಟಿತು. ಆಕೆ ಔತಣ ಶಾಲೆಗೆ ಬಂದು, “ರಾಜರೇ, ಚಿರಂಜೀವಿಯಾಗಿರಿ! ನಿಮ್ಮ ಮನಸ್ಸು ಕಳವಳಗೊಳ್ಳದಿರಲಿ, ನಿಮ್ಮ ಮುಖ ಕಳೆಗುಂದದಿರಲಿ! ಪರಿಶುದ್ಧ ದೇವರ ಆತ್ಮ ನೆಲೆಸಿರುವ ಒಬ್ಬ ವ್ಯಕ್ತಿ ನಿಮ್ಮ ರಾಜ್ಯದಲ್ಲಿದ್ದಾನೆ.


ಜೆರುಸಲೇಮನು ನಾ ಸ್ಮರಣೆಮಾಡದಿದ್ದಲ್ಲಿ I ಆ ಸ್ಮರಣೆ ಸರ್ವೋತ್ತಮ ನಲಿವು ನನಗಾಗದಿದ್ದಲ್ಲಿ I ಸೇದಿಹೋಗಲಿ ನಾಲಿಗೆ ನನ್ನ ಬಾಯಲಿ II


ಆಗ ದಾನಿಯೇಲನು ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ!


ಬಳಿಕ ಆ ಮುಖ್ಯಾಧಿಕಾರಿಗಳೂ ಪ್ರಾಂತ್ಯಾಧಿಪತಿಗಳೂ ರಾಜನ ಸಮ್ಮುಖದಲ್ಲಿ ಕೂಡಿಬಂದು ಅವನಿಗೆ, “ದಾರ್ಯಾವೆಷ ರಾಜರೇ, ಚಿರಂಜೀವಿಯಾಗಿರಿ!


ಹೂತುಹೋಗಿವೆ ಸಿಯೋನ್ ಹೆಬ್ಬಾಗಿಲುಗಳು ಚೂರುಚೂರಾಗಿ ಬಿದ್ದಿವೆ ಅದರ ಅಗುಳಿಗಳು. ಅರಸರೂ ಪಾಲಕರೂ ಸೇರಿಹೋದರು ಅನ್ಯಜನಾಂಗಗಳೊಳು. ನಿಂತುಹೋಗಿವೆ ಧರ್ಮಶಾಸ್ತ್ರ ಬೋಧನೆಗಳು. ಸರ್ವೇಶ್ವರನಿಂದ ಪ್ರವಾದಿಗಳಿಗೆ ಆಗುತ್ತಿದ್ದ ದಿವ್ಯದರ್ಶನಗಳು.


ಹಿಜ್ಕೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಲು, ಅವನ ಶವವನ್ನು ದಾವೀದವಂಶದವರ ಕುಟುಂಬದ ಸ್ಮಶಾನಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಶವಸಂಸ್ಕಾರ ನಡೆಯುವಾಗ ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗ ಮನಸ್ಸೆ ಅರಸನಾದನು.


ಅವನು ಸತ್ತು ತನ್ನ ಪಿತೃಗಳ ಬಳಿಗೆ ಸೇರಲು ಅವನನ್ನು ಇಸ್ರಯೇಲ್ ರಾಜಸ್ಮಶಾನದಲ್ಲಿ ಹೂಣದೆ ಜೆರುಸಲೇಮ್ ಪಟ್ಟಣದೊಳಗಿನ ಒಂದು ಸ್ಥಳದಲ್ಲಿ ಹೂಣಿಟ್ಟರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.


ಅವನು ಪಟ್ಟಕ್ಕೆ ಬಂದಾಗ ಮೂವತ್ತ ಎರಡು ವರ್ಷದವನಾಗಿದ್ದನು. ಜೆರುಸಲೇಮಿನಲ್ಲಿ ಎಂಟುವರ್ಷ ಆಳಿದನು. ಅವನು ತೀರಿಹೋದಾಗ ಯಾರೂ ಶೋಕಿಸಲಿಲ್ಲ. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.


“ಅರಸರೇ, ನೀವು ಚಿರಂಜೀವಿಯಾಗಿರಿ!”


ಕಲ್ಲುಕುಪ್ಪೆಯಾಗಿದ್ದರೂ ನಿನ್ನ ಭಕ್ತರಿಗದು ಪ್ರಿಯ I ಅದರ ವಿನಾಶವನು ಕಂಡು ಕರಗಿಹೋಗಿದೆ ಹೃದಯ II


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.


ಐದನೆಯ ತಿಂಗಳಿನ ಏಳನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬವನು ಜೆರುಸಲೇಮಿಗೆ ಬಂದನು.


ಅವನ ಜನರು ಜೆರುಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿದರು; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.


ನಾನು ರಾತ್ರಿ ವೇಳೆಯಲ್ಲಿ ಕಣಿವೆಯ ಬಾಗಿಲಿನಿಂದ ಹೊರಟು, ಹಾಳುಬಿದ್ದ ಜೆರುಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲಾಗಿದ್ದ ಅದರ ಬಾಗಿಲುಗಳನ್ನೂ ನೋಡುತ್ತಾ ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆ.


ಐದನೆಯ ತಿಂಗಳಿನ ಹತ್ತನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವನು ಜೆರುಸಲೇಮಿಗೆ ಬಂದನು.


ನನ್ನ ಜನರಿಗೆ ಕೇಡು ಸಂಭವಿಸುವುದನ್ನು ಕಣ್ಣಾರೆ ಕಂಡು ನಾನು ಹೇಗೆ ತಾನೆ ಸಹಿಸಲಿ? ನನ್ನ ಕುಲನಾಶವನ್ನು ಕಂಡು ಸುಮ್ಮನಿರುವುದಾದರೂ ಹೇಗೆ?” ಎಂದು ಬಿನ್ನವಿಸಿದಳು.


ಉರಿಬಡಿದಂತಿದೆ ಎನ್ನ ಸೊಂಟಕೆ I ಆರೋಗ್ಯವಿಲ್ಲದಿದೆ ದೇಹಕೆ II


ಹೆದರುವುವು ಪ್ರಭುವೆಂಬ ನಿನ್ನ ನಾಮಕೆ ಜನಾಂಗಗಳು I ಭಯಪಡುವರು ನಿನ್ನ ಪ್ರತಾಪಕೆ ಭೂರಾಜರುಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು