Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:6 - ಕನ್ನಡ ಸತ್ಯವೇದವು C.L. Bible (BSI)

6 ರಾಜರ ಹತ್ತಿರದಲ್ಲೇ ಕುಳಿತುಕೊಂಡಿದ್ದಳು ರಾಣಿ. ರಾಜ, “ಪ್ರಯಾಣಕ್ಕೆ ನಿನಗೆ ಎಷ್ಟುಕಾಲಬೇಕು? ಯಾವಾಗ ಹಿಂದಿರುಗುವೆ,” ಎಂದು ವಿಚಾರಿಸಿದ. ನಾನು ಕಾಲವನ್ನು ಸೂಚಿಸಿದೆ. ಅವನು ಒಪ್ಪಿಕೊಂಡು ಹೋಗಿಬರಲು ಅಪ್ಪಣೆಕೊಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ರಾಣಿಯು ಅರಸನ ಹತ್ತಿರದಲ್ಲೇ ಕುಳಿತುಕೊಂಡಿದ್ದಳು. ಅರಸನು ನನಗೆ, “ಪ್ರಯಾಣಕ್ಕೆ ನಿನಗೆಷ್ಟು ಕಾಲ ಬೇಕು? ಯಾವಾಗ ಹಿಂದಿರುಗುವಿ” ಎಂದು ವಿಚಾರಿಸಿದಾಗ ನಾನು ಕಾಲವನ್ನು ಸೂಚಿಸಲು ಅರಸನು ಒಪ್ಪಿಕೊಂಡು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ರಾಣಿಯು ಅರಸನ ಹತ್ತಿರದಲ್ಲೇ ಕೂತುಕೊಂಡಿದ್ದಳು. ಅರಸನು - ಪ್ರಯಾಣಕ್ಕೆ ನಿನಗೆಷ್ಟು ಕಾಲಬೇಕು? ಯಾವಾಗ ಹಿಂದಿರುಗುವಿ ಎಂದು ವಿಚಾರಿಸಿದಾಗ ನಾನು ಕಾಲವನ್ನು ಸೂಚಿಸಲು ಅವನು ಒಪ್ಪಿಕೊಂಡು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರಾಣಿಯು ರಾಜನ ಪಕ್ಕದಲ್ಲಿ ಕುಳಿತಿದ್ದಳು. ರಾಜನೂ ರಾಣಿಯೂ, “ನಿನಗೆ ಹೋಗಿ ಬರಲು ಎಷ್ಟು ಸಮಯ ಬೇಕಾಗುವುದು? ನೀನು ಹಿಂದಕ್ಕೆ ಯಾವಾಗ ಬರುವಿ?” ಎಂದು ವಿಚಾರಿಸಿದರು. ನನ್ನನ್ನು ಕಳುಹಿಸಲು ರಾಜನಿಗೆ ಸಂತೋಷವಿದ್ದುದರಿಂದ ನಾನೊಂದು ಸಮಯವನ್ನು ಸೂಚಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ರಾಣಿಯು ಅವನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ, “ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರುಗಿ ಯಾವಾಗ ಬರುತ್ತೀ?” ಎಂದನು. ನಾನು ಅರಸನಿಗೆ ಸಮಯ ಗೊತ್ತು ಮಾಡಿದೆನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:6
9 ತಿಳಿವುಗಳ ಹೋಲಿಕೆ  

ನಾನು ಬಾಬಿಲೋನಿನ ಅರಸ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ಅರಸನ ಬಳಿಗೆ ಹೋಗಿದ್ದೆ. ಆದುದರಿಂದ ಇದೆಲ್ಲಾ ನಡೆಯುವಾಗ ನಾನು ಜೆರುಸಲೇಮಿನಲ್ಲಿರಲಿಲ್ಲ. ಕ್ರಮೇಣ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಅರಸ ಅರ್ತಷಸ್ತನು ನನ್ನನ್ನು ಜುದೇಯ ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳವರೆಗೆ ಅಂದರೆ, ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ, ನಾನಾಗಲಿ, ನನ್ನ ಸಹೋದರರಾಗಲಿ ರಾಜ್ಯಪಾಲನೆಗೆ ಸಲ್ಲ ತಕ್ಕ ಭತ್ಯದಿಂದ ಜೀವನ ಮಾಡಲಿಲ್ಲ.


ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ‘ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ’ ಎಂಬ ಬಿರುದು ನಿಮಗೆ ಬರುವುದು.”


ಆಗ ರಾಜ, “ನಿನ್ನ ಆಶೆಯೇನು?,” ಎಂದು ಕೇಳಿದನು. ನಾನು ಪರಲೋಕ ದೇವರನ್ನು ಪ್ರಾರ್ಥಿಸಿ, ಅವನಿಗೆ, “ರಾಜರ ಚಿತ್ತವಿರುವುದಾದರೆ,


ಮರಳಿ ಕಟ್ಟುವರಿವರು ಪಾಳುಬಿದ್ದ ಪುರಾತನ ಮನೆಗಳನು ಮತ್ತೆ ಎಬ್ಬಿಸುವರು ಬಿದ್ದ ಹಳೆಯ ಕಟ್ಟಡಗಳನು ನೂತನಗೊಳಿಸುವರು ತಲಾಂತರದ ಹಾಳುಬೀಳು ಪಟ್ಟಣಗಳನು.


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ಮತ್ತು ತಮ್ಮ ಸೇವಕನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ, ನನ್ನ ಪಿತೃಗಳ ಸಮಾಧಿಗಳಿರುವ ಪಟ್ಟಣವನ್ನು ಮರಳಿ ಕಟ್ಟುವುದಕ್ಕೆ ಜುದೇಯ ನಾಡಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು,” ಎಂದು ಹೇಳಿದೆ.


ಇದನ್ನು ತಿಳಿದು ಮನದಟ್ಟು ಮಾಡಿಕೊ, ‘ಹಿಂದಿರುಗಿ ಜೆರುಸಲೇಮನ್ನು ಪುನರ್‍ ನಿರ್ಮಿಸಿ’ ಎಂಬ ದೈವೋಕ್ತಿ ಹೊರಡುವಂದಿನಿಂದ ಪ್ರಭುವಾಗಿ ಅಭಿಷಿಕ್ತನಾದವನು ಬರುವುದರೊಳಗೆ ಏಳು ಸಾರಿ ಏಳು ವರ್ಷಗಳು ಕಳೆಯಬೇಕು. ಅದು ಪುನಃ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಕಟ್ಟಲ್ಪಟ್ಟು ಏಳು ಸಾರಿ ಅರವತ್ತೆರಡು ವರ್ಷಗಳು ಇರುವುದು. ಆ ಕಾಲವು ಬಹು ಕಷ್ಟಕರವಾದ ಕಾಲವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು