ನೆಹೆಮೀಯ 2:8 - ಕನ್ನಡ ಸತ್ಯವೇದವು C.L. Bible (BSI)8 ರಾಜ ವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳನ್ನೂ ಪಟ್ಟಣದ ಪೌಳಿಗೋಡೆಯನ್ನೂ ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡಬೇಕಾಗುತ್ತದೆ; ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆ. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ ರಾಜನು ಅವುಗಳನ್ನು ನನಗೆ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೂ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಬೇಕು ಎಂದು ಬಿನ್ನವಿಸಲು ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದದ್ದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅಲ್ಲದೆ ಬಾಗಿಲುಗಳಿಗೆ, ಗೋಡೆಗಳಿಗೆ, ದೇವಾಲಯದ ಆವರಣದ ಗೋಡೆಗಳಿಗೆ ಮತ್ತು ನನ್ನ ಮನೆಗೆ ಮರದ ತೊಲೆಗಳು ಬೇಕಾಗಿವೆ. ಆದ್ದರಿಂದ ನಿಮ್ಮ ಅರಣ್ಯಗಳ ಮುಖ್ಯಾಧಿಕಾರಿಯಾದ ಆಸಾಫನಿಗೂ ಪತ್ರವನ್ನು ಕೊಡಬೇಕು” ಎಂದು ವಿನಂತಿಸಿದೆನು. ಅರಸನು ಪತ್ರಗಳನ್ನು ಮತ್ತು ನಾನು ಕೇಳಿದ್ದೆಲ್ಲವನ್ನು ನನಗೆ ಕೊಟ್ಟನು. ದೇವರು ನನ್ನನ್ನು ಕರುಣಿಸಿರುವುದರಿಂದ ರಾಜನು ನನಗೆ ಹಾಗೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು. ಅಧ್ಯಾಯವನ್ನು ನೋಡಿ |