Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:14 - ಕನ್ನಡ ಸತ್ಯವೇದವು C.L. Bible (BSI)

14 ತಿಪ್ಪೆಬಾಗಿಲನ್ನು ಸರಿಪಡಿಸಿದವನು ಬೇತಹಕ್ಕೆರೆಮಿನ ನಾಡೊಡೆಯನೂ ರೇಕಾಬನ ಮಗನೂ ಆದ ಮಲ್ಕೀಯನು; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತಿಪ್ಪೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಬೇತ್ ಹಕ್ಕೆರೆಮಿನ ಅರ್ಧ ಪಟ್ಟಣಗಳ ಒಡೆಯನೂ, ರೇಕಾಬನ ಮಗನೂ ಆದ ಮಲ್ಕೀಯ. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತಿಪ್ಪೆಬಾಗಲನ್ನು ಜೀರ್ಣೋದ್ಧಾರಮಾಡಿದವನು ಬೇತ್‍ಹಕ್ಕೆರೆವಿುನ ನಾಡೊಡೆಯನೂ ರೇಕಾಬನ ಮಗನೂ ಆದ ಮಲ್ಕೀಯನು; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ರೇಕಾಬನ ಮಗನಾದ ಮಲ್ಕೀಯನು ತಿಪ್ಪೆಬಾಗಿಲನ್ನು ರಿಪೇರಿಮಾಡಿಸಿದನು. ಇವನು ಬೇತ್ ಹಕ್ಕೆರಿಮಿನ ರಾಜ್ಯಪಾಲನಾಗಿದ್ದನು. ಅವನು ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತಿಪ್ಪೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಬೇತ್ ಹಕ್ಕೆರೆಮಿನ ನಾಡೊಡೆಯನೂ, ರೇಕಾಬನ ಮಗನೂ ಆದ ಮಲ್ಕೀಯನೂ, ಇವರು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:14
9 ತಿಳಿವುಗಳ ಹೋಲಿಕೆ  

ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.


ನಾನು ರಾತ್ರಿ ವೇಳೆಯಲ್ಲಿ ಕಣಿವೆಯ ಬಾಗಿಲಿನಿಂದ ಹೊರಟು, ಹಾಳುಬಿದ್ದ ಜೆರುಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲಾಗಿದ್ದ ಅದರ ಬಾಗಿಲುಗಳನ್ನೂ ನೋಡುತ್ತಾ ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆ.


ಇದರ ಆಚೆಗೆ ಜೆರುಸಲೇಮಿನ ಅರೆನಾಡೊಡೆಯನೂ ಹೂರನ ಮಗನೂ ಆದ ರೆಫಾಯ.


ಆಮೇಲೆ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದೆ; ಭಜನೆ ಮಂಡಲಿಯವರಿಗೆ, “ಎರಡು ದೊಡ್ಡ ಗುಂಪುಗಳಾಗಿ ಇಲ್ಲಿ ನಿಲ್ಲಿ,” ಎಂದು ಅಪ್ಪಣೆಮಾಡಿದೆ. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು.


ಸೌಲನ ಮಗನಿಗೆ ಬಾಣ ಹಾಗು ರೇಕಾಬ್ ಎಂಬ ಇಬ್ಬರು ಸೇನಾಪತಿಗಳಿದ್ದರು. ಇವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. (ಈ ಬೇರೋತ್ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ;


ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿದನು. “ನಿನ್ನ ವಿಷಯದಲ್ಲಿ ನನ್ನ ಮನಸ್ಸು ಯಥಾರ್ಥವಾಗಿರುವಂತೆ ನಿನ್ನ ಮನಸ್ಸು ಯಥಾರ್ಥವಾಗಿ ಇರುತ್ತದೋ?’ ಎಂದು ಕೇಳಿದನು. ಅವನು, “ಹೌದು,” ಎಂದು ಉತ್ತರಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಕೊಡು,” ಎನ್ನಲು ಅವನು ಕೈಕೊಟ್ಟನು. ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು