Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:15 - ಕನ್ನಡ ಸತ್ಯವೇದವು C.L. Bible (BSI)

15 ಬುಗ್ಗೆಬಾಗಿಲನ್ನು ದುರಸ್ತಿಪಡಿಸಿದವನು ಮಿಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ, ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ, ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಬುಗ್ಗೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ಒಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ದಾವೀದ ನಗರದಿಂದ ಇಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಬುಗ್ಗೆಬಾಗಲನ್ನು ಜೀರ್ಣೋದ್ಧಾರ ಮಾಡಿದವನು ವಿುಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಕದ ತಿರುಗಣಿ ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮಿಚ್ಪ ಜಿಲ್ಲಾಧಿಕಾರಿಯಾದ ಶಲ್ಲೂನನು ಬುಗ್ಗೆಬಾಗಿಲನ್ನು ರಿಪೇರಿಮಾಡಿದನು. ಶಲ್ಲೂನನು ಕೊಲ್ಹೋಜಿಯನ ಮಗ. ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು. ನಂತರ ಗೋಡೆಯನ್ನು ರಾಜನ ತೋಟದ ಸಮೀಪದಲ್ಲಿದ್ದ ಸಿಲೋವಕೊಳದ ತನಕ ಮುಂದುವರಿಸಿ ದಾವೀದನಗರಕ್ಕೆ ಪ್ರವೇಶಿಸುವ ಮೆಟ್ಟಿಲುಗಳ ತನಕ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಬುಗ್ಗೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ನಾಡೊಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್, ಇವನು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಮಾಳಿಗೆಯನ್ನು ಹಾಕಿ, ಕದ ತಿರುಗಣಿ ಅಗುಳಿಗಳನ್ನು ಹಚ್ಚಿ, ದಾವೀದನ ನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:15
19 ತಿಳಿವುಗಳ ಹೋಲಿಕೆ  

(’ಶಿಲೋವಾಮ್’ ಎಂದರೆ ಕಳುಹಿಸಲಾದವನು ಎಂದರ್ಥ). ಅದರಂತೆಯೇ ಆ ಕುರುಡನು ಹೋಗಿ ಕಣ್ಣುಗಳನ್ನು ತೊಳೆದುಕೊಂಡನು; ಹಿಂದಿರುಗಿದಾಗ ಅವನಿಗೆ ಕಣ್ಣು ಬಂದಿತ್ತು.


“ಈ ಜನರು ಸುಲಲಿತವಾಗಿ ಹರಿಯುವ ಸಿಲೋವದ ನೀರನ್ನು ಅಲ್ಲಗಳೆದು, ಅರಸನಾದ ರೆಚೀನ ಹಾಗೂ ಪೆಕಹ ಇವರುಗಳನ್ನು ನೆಚ್ಚಿಕೊಂಡು ನಲಿಯುತ್ತಿದ್ದಾರೆ.


ಇವರು ಬುಗ್ಗೆಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನನುಸರಿಸಿ, ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ, ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು.


ಶಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ ಹದಿನೆಂಟು ಜನ ಸತ್ತರಲ್ಲವೆ? ಅವರು ಜೆರುಸಲೇಮಿನಲ್ಲಿ ವಾಸವಾಗಿರುವ ಇತರ ಎಲ್ಲಾ ಜನರಿಗಿಂತ ಹೆಚ್ಚು ದೋಷಿಗಳಾಗಿದ್ದರೆಂದು ಭಾವಿಸಿತ್ತೀರೋ?


ಅಲ್ಲಿಂದ ಬುಗ್ಗೆಬಾಗಿಲನ್ನು ಹಾದು ಅರಸನ ಕೊಳಕ್ಕೆ ಹೋದೆ.


ಆಗ ಯೆರೆಮೀಯನು ಅಹೀಕಾಮನ ಮಗ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ಅವನೊಡನೆ ಹಾಗು ನಾಡಿನ ಉಳಿದ ಜನರ ನಡುವೆ ವಾಸಮಾಡಿದನು.


ತಿಪ್ಪೆಬಾಗಿಲನ್ನು ಸರಿಪಡಿಸಿದವನು ಬೇತಹಕ್ಕೆರೆಮಿನ ನಾಡೊಡೆಯನೂ ರೇಕಾಬನ ಮಗನೂ ಆದ ಮಲ್ಕೀಯನು; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದನು.


ಇವನ ಸಮೀಪದಲ್ಲಿ ಗೋಡೆಯನ್ನು ದುರಸ್ತುಮಾಡಿದವರು ಜೆರುಸಲೇಮಿನ ಅರೆನಾಡೊಡೆಯನೂ ಹಲ್ಲೊಹೇಷನ ಮಗನೂ ಆದ ಶಲ್ಲೂಮನು ಹಾಗು ಅವನ ಕುಮಾರಿಯರು.


ಇದರ ಆಚೆಗೆ ಜೆರುಸಲೇಮಿನ ಅರೆನಾಡೊಡೆಯನೂ ಹೂರನ ಮಗನೂ ಆದ ರೆಫಾಯ.


ಅಲ್ಲಿಂದ ನದಿಯಾಚೆಯ ರಾಜ್ಯಪಾಲನ ನ್ಯಾಯಸ್ಥಾನದವರೆಗೆ ಗಿಬ್ಯೋನಿನವನಾದ ಮೆಲೆಟ್ಯ, ಮೇರೋನೋತಿನವನಾದ ಯಾದೋನ್ ಇವರೂ ಗಿಬ್ಯೋನ್ ಮತ್ತು ಮಿಚ್ಚ ಊರುಗಳವರು ದುರಸ್ತಿಮಾಡಿದರು.


ಮೇಲಣ ಗೀಹೋನ್ ಎಂಬ ಬುಗ್ಗೆಗೆ ಕಟ್ಟೆಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪೂರ್ವದಿಕ್ಕಿನ ಕಣಿವೆಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲ ಕಾರ್ಯಗಳಲ್ಲೂ ಯಶಸ್ವಿ ಆದನು.


ಒಳಗಿದ್ದ ಅರಸನೂ ಅವನ ಎಲ್ಲ ಸೈನಿಕರೂ ಅದೇ ರಾತ್ರಿ, ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ, ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅರಸನು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಓಡಿಹೋದನು.


(ಇಸ್ರಯೇಲರು ಕೂಡಿಕೊಂಡು ಮಿಚ್ಫೆಗೆ ಬಂದಿದ್ದಾರೆಂಬ ವರ್ತಮಾನ ಬೆನ್ಯಾಮೀನ್ಯರಿಗೆ ಮುಟ್ಟಿತು.) ಇಸ್ರಯೇಲರು, “ಈ ದುಷ್ಟತನ ಹೇಗೆ ನಡೆಯಿತೆಂದು ತಿಳಿಸಿರಿ,” ಎಂದು ಕೇಳಿದರು.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.


ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣಮುಂದಿರುತ್ತದಲ್ಲವೇ? ಜೆರುಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಜೆರುಸಲೇಮಿನ ಗೋಡೆಯನ್ನು ಕಟ್ಟೋಣ, ಹೀಗೆ ಮಾಡಿದರೆ ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.


ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಟಲುಗಳ ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ ಯೇಷೂವನ ಮಗನೂ ಆದ ಏಜೆರನು ಸರಿಪಡಿಸಿದನು.


ಬೆಳೆಯುವ ಗಿಡತೋಟಗಳಿಗೆ ನೀರುಹಾಯಿಸಲು ಕೆರೆಕುಂಟೆಗಳನ್ನು ತೋಡಿಸಿದೆ.


ದಾವೀದನು ಆ ಕೋಟೆಗೆ ‘ದಾವೀದನಗರ’ ಎಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಿದ್ದನು. ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು