Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:16 - ಕನ್ನಡ ಸತ್ಯವೇದವು C.L. Bible (BSI)

16 ಇವನ ಆಚೆ ಅಂದರೆ, ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ, ಇವುಗಳವರೆಗೂ ದುರಸ್ತುಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವನ ನಂತರ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವರು ಬೇತ್ಚೂರಿನ ಒಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವನ ಆಚೆ ಅಂದರೆ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯರ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಜ್ಬೂಕನ ಮಗನಾದ ನೆಹೆಮೀಯನು ಗೋಡೆಯ ಮುಂದಿನ ಭಾಗವನ್ನು ಕಟ್ಟಿದನು. ಇವನು ಬೇತ್ಚೂರ್ ಜಿಲ್ಲೆಯ ಅರ್ಧಭಾಗಕ್ಕೆ ಅಧಿಕಾರಿಯಾಗಿದ್ದನು. ದಾವೀದನ ಸಮಾಧಿಯ ತನಕ ಗೋಡೆಯನ್ನು ಮುಂದುವರಿಸಿ ವೀರರ ಮನೆಗಳ ತನಕ ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವನ ಆಚೆ ಎಂದರೆ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯರ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವನು ಬೇತ್ ಚೂರಿನ ಅರೆನಾಡೊಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:16
18 ತಿಳಿವುಗಳ ಹೋಲಿಕೆ  

“ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ.


ಇವನ ಸಮೀಪದಲ್ಲಿ ಗೋಡೆಯನ್ನು ದುರಸ್ತುಮಾಡಿದವರು ಜೆರುಸಲೇಮಿನ ಅರೆನಾಡೊಡೆಯನೂ ಹಲ್ಲೊಹೇಷನ ಮಗನೂ ಆದ ಶಲ್ಲೂಮನು ಹಾಗು ಅವನ ಕುಮಾರಿಯರು.


ಇದರ ಆಚೆಗೆ ಜೆರುಸಲೇಮಿನ ಅರೆನಾಡೊಡೆಯನೂ ಹೂರನ ಮಗನೂ ಆದ ರೆಫಾಯ.


ಹಿಜ್ಕೀಯನ ಉಳಿದ ಚರಿತ್ರೆ, ಅವನ ಪರಾಕ್ರಮಕಾರ್ಯ ಹಾಗು ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರ, ಇವು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಎರಡು ಗೋಡೆಗಳ ನಡುವೆ ಹಳೆಯ ಕೊಳದಿಂದ ಹರಿಯುವ ನೀರಿಗಾಗಿ ಜಲಾಶಯವನ್ನು ಕಟ್ಟಿದಿರಿ. ಆದರೆ ಪುರಾತನ ಕಾಲದಿಂದ ನಿಯೋಜಿಸಿ ಇದನ್ನೆಲ್ಲಾ ನಡೆಸಿದಾತನ ಕಡೆಗೆ ಗಮನ ಕೊಡದೆಹೋದಿರಿ.


ಆಗ ಸರ್ವೇಶ್ವರಸ್ವಾಮಿ ಯೆಶಾಯನಿಗೆ ಹೀಗೆಂದರು : “ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಆಹಾಜಾರಸನನ್ನು ಕಾಣಲುಹೋಗು. ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದಲ್ಲಿ ಕೆರೆಯ ಕಾಲುವೆಯ ತುದಿಯ ಬಳಿ ಆತ ನಿನಗೆ ಸಿಕ್ಕುವನು. ಅವನಿಗೆ ಈ ಪ್ರಕಾರ ತಿಳಿಸು :


ತಿಪ್ಪೆಬಾಗಿಲನ್ನು ಸರಿಪಡಿಸಿದವನು ಬೇತಹಕ್ಕೆರೆಮಿನ ನಾಡೊಡೆಯನೂ ರೇಕಾಬನ ಮಗನೂ ಆದ ಮಲ್ಕೀಯನು; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದನು.


ಹಲ್ಪೂಲ್, ಬೇತ್ ಚೂರ್, ಗೆದೋರ್,


ಇದೋ, ನೋಡು ಸೊಲೊಮೋನನ ಪಲ್ಲಕ್ಕಿ ಅದರ ಸುತ್ತ ಇಸ್ರಯೇಲಿನ ಶೂರರು ಅರವತ್ತು ಮಂದಿ ಯುದ್ಧಪ್ರವೀಣರಾದ ಅವರಾಗಿಹರು ಶಸ್ತ್ರಧಾರಿ ಕತ್ತಿಯ ಕಟ್ಟಿಹರು ಪ್ರತಿಯೊಬ್ಬರು ಸೊಂಟಕ್ಕೆ ಕತ್ತಲ ದುರಂತಗಳನ್ನು ಎದುರಿಸಲಿಕ್ಕೆ.


ಅವನ ಶವವನ್ನು ಬುಕ್ಕಿಟ್ಟುಗಾರನ ಕಸಬಿನ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗಾಗಿ ದಾವೀದನಗರದಲ್ಲಿ ತೋಡಿಸಿದ್ದ ಸಮಾಧಿಯಲ್ಲಿ ಅದನ್ನು ಇಟ್ಟರು. ಹೇರಳವಾಗಿ ಧೂಪಹಾಕಿ ಸಂತಾಪ ಸೂಚಿಸಿದರು.


ಬೇತ್ಚೂರ್, ಸೋಕೋ, ಅದುಲ್ಲಾಮ್, ಗತ್‍ಊರು,


ಇವನು ಮಾವೋನ್ಯನ ತಂದೆ, ಇವನು ಬೇತ್ಸೂರನ ತಂದೆ.


ಇವನ ಆಚೆ ದುರಸ್ತಿಕಾರ್ಯವನ್ನು ಕೈಗೊಂಡವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.


ಬೆಳೆಯುವ ಗಿಡತೋಟಗಳಿಗೆ ನೀರುಹಾಯಿಸಲು ಕೆರೆಕುಂಟೆಗಳನ್ನು ತೋಡಿಸಿದೆ.


ದಾವೀದನ ಕೋಟೆಯ ಬಿರುಕುಗಳು ಬಹಳವೆಂಬುದನ್ನು ಗಮನಿಸಿದಿರಿ. ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ.


ಅಲ್ಲಿಂದ ಬುಗ್ಗೆಬಾಗಿಲನ್ನು ಹಾದು ಅರಸನ ಕೊಳಕ್ಕೆ ಹೋದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು