Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:22 - ಕನ್ನಡ ಸತ್ಯವೇದವು C.L. Bible (BSI)

22 ಮುಂದಿನ ಭಾಗವನ್ನು ಕಟ್ಟಿದವರು ಜೋರ್ಡನ್ ನದಿಯ ಕಣಿವೆಯಲ್ಲಿ ವಾಸಿಸುತ್ತಿದ್ದ ಯಾಜಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮುಂದಿನ ಭಾಗವನ್ನು ಜೀರ್ಣೋದ್ಧಾರ ಮಾಡಿದವರು ಯೊರ್ದನ್ ಹೊಳೆಯ ತಗ್ಗಿನಲ್ಲಿ ವಾಸಿಸುತ್ತಿದ್ದ ಯಾಜಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮುಂದಿನ ಭಾಗವನ್ನು ಜೀರ್ಣೋದ್ಧಾರಮಾಡಿದವರು ಯೊರ್ದನ್ ಹೊಳೆಯ ತಗ್ಗಿನಲ್ಲಿ ವಾಸಿಸುತ್ತಿದ್ದ ಯಾಜಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ಪ್ರಾಂತ್ಯದಲ್ಲಿ ವಾಸಿಸಿದ್ದ ಯಾಜಕರು ಸೇರಿ ಮುಂದಿನ ಭಾಗವನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮುಂದಿನ ಭಾಗವನ್ನು ಜೀರ್ಣೋದ್ಧಾರ ಮಾಡಿದವರು ಸುತ್ತಲಿನ ಪ್ರದೇಶದ ಯಾಜಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:22
4 ತಿಳಿವುಗಳ ಹೋಲಿಕೆ  

ಆಗ ಜೆರುಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗಾಗಿ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕಮಂಡಲಿಯವರು ಜೋರ್ಡನ್ ನದಿಯ ತಗ್ಗು, ಜೆರುಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ


ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು. ಅವರಲ್ಲಿ ಸನ್ಬಲ್ಲಟ್ ಮತ್ತು ಗೆಷನರು ನನಗೆ, “ಓನೋ ಕಣಿವೆಯ ಹಕ್ಕೆಫಿರೀಮಿನಲ್ಲಿ ಒಬ್ಬರನೊಬ್ಬರು ಎದುರುಗೊಳ್ಳೋಣ ಬಾ,” ಎಂದು ಹೇಳಿ ಕಳುಹಿಸಿದರು. ಅವರು ನನಗೆ ಕೇಡು ಬಗೆಯುವವರು ಎಂದು ತಿಳಿಯಿತು.


ಇವನ ಆಚೆ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ, ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ದುರಸ್ತಿಮಾಡಿಸಿದನು.


ಇವರ ಆಚೆ, ಬೆನ್ಯಾಮೀನ್ ಹಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ದುರಸ್ತಿಮಾಡಿಸಿದರು. ಇವರ ಆಚೆ, ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ: ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಸರಿಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು