Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:29 - ಕನ್ನಡ ಸತ್ಯವೇದವು C.L. Bible (BSI)

29 ಇವರ ಆಚೆ, ಇಮ್ಮೇರನ ಮಗ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ದುರಸ್ತಿಮಾಡಿದನು. ಇವನ ಆಚೆ, ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇವರ ನಂತರ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ನಂತರ ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇವರ ಆಚೆ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರಮಾಡಿದನು. ಇವನ ಆಚೆ ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇಮೇರನ ಮಗನಾದ ಚಾದೋಕನು ತನ್ನ ಮನೆಯ ಮುಂದಿದ್ದ ಗೋಡೆಯ ಭಾಗವನ್ನು ರಿಪೇರಿ ಮಾಡಿದನು. ಪೂರ್ವ ಬಾಗಿಲಿನ ದ್ವಾರಪಾಲಕನಾಗಿರುವ ಶೆಕನ್ಯನ ಮಗನಾದ ಶೆಮಾಯನು ಮುಂದಿನ ಭಾಗವನ್ನು ರಿಪೇರಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇವರ ಆಚೆ, ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ಆಚೆ, ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:29
8 ತಿಳಿವುಗಳ ಹೋಲಿಕೆ  

ಬೋಕಿಯ ಬಾಗಿಲಿನ ಸಮೀಪದಲ್ಲಿರುವ ‘ಬೆನ್‍ಹಿನ್ನೋಮ್’ ಕಣಿವೆಗೆ ಹೋಗು. ನಾನು ನಿನಗೆ ತಿಳಿಸುವ ಈ ಸಂದೇಶವನ್ನು ಅಲ್ಲಿ ಸಾರು -


ಆಗ ಏಲಾಮ್ ಸಂತಾನದ ಯೆಹೀಯೇಲನ ಮಗ ಶೆಕನ್ಯನು ಎಜ್ರನಿಗೆ, “ಇಸ್ರಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧ ದ್ರೋಹಮಾಡಿದ್ದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆ ಇನ್ನೂ ಉಂಟು.


ಹನನ್ಯನ ಇಬ್ಬರು ಮಕ್ಕಳು: ಪೆಲಟ್ಯ ಮತ್ತು ಯೆಶಾಯ ಎಂಬವರು ಯೆಶಾಯ ರೆಫಾಯನ ತಂದೆ, ಇವನು ಅರ್ನಾನನ ತಂದೆ, ಇವನು ಓಬದ್ಯನ ತಂದೆ, ಇವನು ಶೆಕನ್ಯನ ತಂದೆ.


ಯಾಜಕರು ಕುದುರೆಬಾಗಿಲಿನ ಆಚೆ ದಿಣ್ಣೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಸರಿಮಾಡಿದರು.


ಇವನ ಆಚೆ ಶೆಲೆಮ್ಯನ ಮಗನಾದ ಹನನ್ಯ; ಗೋಡೆಯ ಇನ್ನೊಂದು ಭಾಗವನ್ನು ಸರಿಮಾಡಿದವನು ಚಾಲಫನ ಆರನೆಯ ಮಗನಾದ ಹಾನೂನ್; ಇವನ ಆಚೆ, ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್.


ಮಾಜ್ಯ, ಬಿಲ್ಗೈ, ಶೆಮಾಯ ಎಂಬ ಯಾಜಕರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು