Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:31 - ಕನ್ನಡ ಸತ್ಯವೇದವು C.L. Bible (BSI)

31 ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ; ಇವನು ದಂಡುಕೂಡುವ ಬಾಗಿಲಿನ ಎದುರಿನಲ್ಲಿರುವ ದೇವಸ್ಥಾನ ಪರಿಚಾರಕರ ಮತ್ತು ವರ್ತಕರ ಕೇರಿಯವರೆಗೂ ಮೂಲೆಯುಪ್ಪರಿಗೆಯವರೆಗೂ ದುರಸ್ತಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ. ಇವನು ಸೈನ್ಯದವರು ಸೇರಿಬರುವ ಬಾಗಿಲಿನೆದುರಿನಲ್ಲಿರುವ ದೇವಾಲಯದ ಸೇವಕರ ಮತ್ತು ವರ್ತಕರ ಕೇರಿಯ ವರೆಗೂ ಮತ್ತು ಮೂಲೆಯುಪ್ಪರಿಗೆಯವರೆಗೂ ಜೀರ್ಣೋದ್ಧಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ; ಇವನು ದಂಡುಕೂಡುವ ಬಾಗಲಿನೆದುರಿನಲ್ಲಿರುವ ದೇವಸ್ಥಾನದಾಸರ ಮತ್ತು ವರ್ತಕರ ಕೇರಿಯವರೆಗೂ ಮೂಲೆಯುಪ್ಪರಿಗೆಯವರೆಗೂ ಜೀರ್ಣೋದ್ಧಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ವರ್ತಕರ ಮತ್ತು ಆಲಯದ ಸೇವಕರ ಮನೆಗಳ ತನಕದ ಭಾಗವನ್ನು ಮಲ್ಕೀಯನು ರಿಪೇರಿ ಮಾಡಿದನು. ಇದು, “ತನಿಕೆ” ಎಂಬ ಬಾಗಿಲಿನ ಎದುರಿನಲ್ಲಿತ್ತು. ಮೂಲೆಗೋಡೆಯ ಮೇಲಿರುವ ಕೋಣಿಯ ತನಕದ ಭಾಗವನ್ನು ಅಕ್ಕಸಾಲಿಗನಾದ ಮಲ್ಕೀಯನು ರಿಪೇರಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ, ಇವನು ದಂಡು ಕೊಡುವ ಬಾಗಿಲಿನೆದುರಿನಲ್ಲಿರುವ ದೇವಾಲಯದ ಸೇವಕರ ಮತ್ತು ವರ್ತಕರ ಕೇರಿಯವರೆಗೂ ಮೂಲೆಯುಪ್ಪರಿಗೆಯವರೆಗೂ ಜೀರ್ಣೋದ್ಧಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:31
4 ತಿಳಿವುಗಳ ಹೋಲಿಕೆ  

ಈ ಮೂಲೆಯುಪ್ಪರಿಗೆಗೂ ಕುರಿಬಾಗಿಲಿಗೂ ನಡುವೆಯಿದ್ದ ಗೋಡೆಯನ್ನು ಸರಿಮಾಡಿದವರು ಅಕ್ಕಸಾಲಿಗರು ಹಾಗು ವರ್ತಕರು.


ಇವರ ಆಚೆಗೆ ಹರ್ಹಯನ ಮಗನಾದ ಅಕ್ಕಸಾಲಿಗರ ಉಜ್ಜೀಯೇಲ್; ಆಮೇಲೆ ಬುಕ್ಕಿಟ್ಟುಗಾರರ ಹನನ್ಯ; ಇವರು ಅಗಲಗೋಡೆಯೆನಿಸಿಕೊಳ್ಳುವ ಗೋಡೆಯ ಆಚೆಗಿರುವ ಜೆರುಸಲೇಮಿನ ಭಾಗವನ್ನು ಗೋಡೆಯೊಳಗೆ ಸೇರಿಸಲಿಲ್ಲ.


ಇವನ ಆಚೆ ಶೆಲೆಮ್ಯನ ಮಗನಾದ ಹನನ್ಯ; ಗೋಡೆಯ ಇನ್ನೊಂದು ಭಾಗವನ್ನು ಸರಿಮಾಡಿದವನು ಚಾಲಫನ ಆರನೆಯ ಮಗನಾದ ಹಾನೂನ್; ಇವನ ಆಚೆ, ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು