Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:9 - ಕನ್ನಡ ಸತ್ಯವೇದವು C.L. Bible (BSI)

9 ಇದರ ಆಚೆಗೆ ಜೆರುಸಲೇಮಿನ ಅರೆನಾಡೊಡೆಯನೂ ಹೂರನ ಮಗನೂ ಆದ ರೆಫಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಂತರ ಯೆರೂಸಲೇಮಿನ ಅರ್ಧ ಪಟ್ಟಣಗಳ ಒಡೆಯನೂ, ಹೂರನ ಮಗನೂ ಆದ ರೆಫಾಯನು ಅದರ ಕುಂದುಕೊರತೆಗಳನ್ನು ಸರಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದರ ಆಚೆಗೆ ಯೆರೂಸಲೇವಿುನ ಅರೆನಾಡೊಡೆಯನೂ ಹೂರನ ಮಗನೂ ಆದ ರೆಫಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅರ್ಧ ಜೆರುಸಲೇಮಿನ ರಾಜ್ಯಪಾಲನಾಗಿದ್ದ ಹೂರನ ಮಗನಾದ ರೆಫಾಯನು ಮುಂದಿನ ಭಾಗವನ್ನು ಕಟ್ಟಿ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದರ ಆಚೆಗೆ ಯೆರೂಸಲೇಮಿನ ಅರೆನಾಡೊಡೆಯನೂ, ಹೂರನ ಮಗನೂ ಆದ ರೆಫಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:9
4 ತಿಳಿವುಗಳ ಹೋಲಿಕೆ  

ಇವನ ಸಮೀಪದಲ್ಲಿ ಗೋಡೆಯನ್ನು ದುರಸ್ತುಮಾಡಿದವರು ಜೆರುಸಲೇಮಿನ ಅರೆನಾಡೊಡೆಯನೂ ಹಲ್ಲೊಹೇಷನ ಮಗನೂ ಆದ ಶಲ್ಲೂಮನು ಹಾಗು ಅವನ ಕುಮಾರಿಯರು.


ಇವನ ಆಚೆ ದುರಸ್ತಿಕಾರ್ಯವನ್ನು ಕೈಗೊಂಡವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.


ಇವನ ಮುಂದಕ್ಕೆ ಹರೂಮಫನ ಮಗ ಯೆದಾಯ; ಇವನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ದುರಸ್ತಿಮಾಡಿದನು. ಇವನ ಆಚೆಗೆ ಹಷಬ್ನೇಯನ ಮಗ ಹಟ್ಟೂಷ್,


ಇವನ ಆಚೆ ಅಂದರೆ, ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ, ಇವುಗಳವರೆಗೂ ದುರಸ್ತುಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು