Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:1 - ಕನ್ನಡ ಸತ್ಯವೇದವು C.L. Bible (BSI)

1 ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿ ಸನ್ಬಲ್ಲಟನಿಗೆ ಮುಟ್ಟಿತು. ಅವನು ಬಹಳ ಹೊಟ್ಟೆಕಿಚ್ಚಿನ ಹಾಗು ಸಿಡುಕಿನ ವ್ಯಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಗೊತ್ತಾದಾಗ ಅವನು ಬಹಳ ಹೊಟ್ಟೆಕಿಚ್ಚಿನಿಂದ ಕೋಪಗೊಂಡು ಯೆಹೂದ್ಯರನ್ನು ಗೇಲಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಮುಟ್ಟಿದಾಗ ಅವನು ಬಲು ಹೊಟ್ಟೆಕಿಚ್ಚೂ ಸಿಟ್ಟೂ ಉಳ್ಳವನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾವು ಜೆರುಸಲೇಮಿನ ಗೋಡೆ ಕಟ್ಟುತ್ತಿದ್ದೇವೆ ಎಂಬುದನ್ನು ಕೇಳಿದ ಸನ್ಬಲ್ಲಟನು ಹೊಟ್ಟೆಕಿಚ್ಚಿನಿಂದ ಕೋಪಗೊಂಡನು. ಅವನು ಯೆಹೂದ್ಯರನ್ನು ಹಾಸ್ಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾವು ಗೋಡೆಯನ್ನು ಪುನಃ ಕಟ್ಟುವ ವರ್ತಮಾನವನ್ನು ಸನ್ಬಲ್ಲಟನು ಕೇಳಿದಾಗ, ಅವನು ಕೋಪಗೊಂಡು, ಯೆಹೂದ್ಯರಿಗೆ ಗೇಲಿಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:1
13 ತಿಳಿವುಗಳ ಹೋಲಿಕೆ  

ಇನ್ನೂ ಕೆಲವರು ಹಾಸ್ಯ ಪರಿಹಾಸ್ಯ, ಏಟುಪೆಟ್ಟು, ಸೆರೆಸಂಕಲೆಗಳನ್ನು ಅನುಭವಿಸಿದರು.


ಇಸ್ರಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್ ದೇಶದವನಾದ ತೊಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬ ಹೊಟ್ಟೆಕಿಚ್ಚುಪಟ್ಟರು.


ಇಂತಿರಲು ಪ್ರಧಾನಯಾಜಕನೂ ಅವನ ಸಂಗಡವಿದ್ದ ಸ್ಥಳೀಯ ಸದ್ದುಕಾಯರೂ ಪ್ರೇಷಿತರ ಬಗ್ಗೆ ತೀವ್ರ ಅಸೂಯೆಪಟ್ಟು ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಿದರು.


ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಯೂ ಅರೇಬಿಯನಾದ ಗೆಷೆಮನೂ ಈ ಸಮಾಚಾರವನ್ನೂ ಕೇಳಿದಾಗ ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿದರು. “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರೋಧವಾಗಿ ದಂಗೆ ಏಳಬೇಕೆಂದಿದ್ದೀರೋ?” ಎಂದು ಕೇಳಿದರು.


ಮುಳ್ಳಿನಿಂದ ಒಂದು ಕಿರೀಟವನ್ನು ಹೆಣೆದು, ಅವರ ತಲೆಯ ಮೇಲೆ ಇರಿಸಿದರು. ಕೈಗೆ ಒಂದು ಕೋಲನ್ನು ಕೊಟ್ಟರು. ಆಮೇಲೆ ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನಿಗೆ ಜಯವಾಗಲಿ!” ಎಂದು ಹೇಳಿ ಪರಿಹಾಸ್ಯಮಾಡಿದರು.


ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಮುಗಿಯಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಹಿಡಿದವು.


ಈ ಸುದ್ದಿ ಸುತ್ತ-ಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.


ಮಹಾಯಾಜಕ ಎಲ್ಯಾಷೀಬನ ಮಗ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದುದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆ.


ಇದನ್ನು ಕೇಳಿದ ಅರಸ ಚಿದ್ಕೀಯನು ಯೆರೆಮೀಯನಿಗೆ, “ಬಾಬಿಲೋನಿಯದವರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸಬಹುದು. ಅವರು ನನ್ನನ್ನು ಹಿಂಸಿಸಬಹುದು ಎಂಬ ಸಂಶಯ ನನಗಿದೆ,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು