Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:15 - ಕನ್ನಡ ಸತ್ಯವೇದವು C.L. Bible (BSI)

15 ನಮ್ಮ ಶತ್ರುಗಳು ತಮ್ಮ ಹಂಚಿಕೆ ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥಮಾಡಿದರೆಂದೂ ತಿಳಿದುಕೊಂಡರು. ನಮ್ಮನ್ನು ಬಿಟ್ಟುಹೋದರು; ನಾವೆಲ್ಲರು ನಮ್ಮ ನಮ್ಮ ಗೋಡೆಯ ಕೆಲಸಕ್ಕೆ ಮತ್ತೆ ಕೈಹಾಕಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಮ್ಮ ಶತ್ರುಗಳು ತಮ್ಮ ಉದ್ದೇಶ ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥಮಾಡಿದನೆಂದೂ ತಿಳಿದುಕೊಂಡಾಗ ಅವರು ನಮ್ಮನ್ನು ಬಿಟ್ಟು ಹೋದರು. ನಾವೆಲ್ಲರೂ ನಮ್ಮ ನಮ್ಮ ಪೌಳಿಗೋಡೆಯ ಕೆಲಸವನ್ನು ಪುನಃ ಪ್ರಾರಂಭಿಸಲು ತೊಡಗಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಮ್ಮ ಶತ್ರುಗಳು ತಮ್ಮ ಹಂಚಿಕೆಯು ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥ ಮಾಡಿದನೆಂದೂ ತಿಳಿದುಕೊಂಡಾಗ [ಅವರು ನಮ್ಮನ್ನು ಬಿಟ್ಟು ಹೋದರು;] ನಾವೆಲ್ಲರೂ ನಮ್ಮ ನಮ್ಮ ಗೋಡೆಯ ಕೆಲಸಕ್ಕೆ ತಿರಿಗಿ ಹೋದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರ ಕುತಂತ್ರವು ನಮಗೆ ಗೊತ್ತಾಯಿತೆಂದು ವೈರಿಗಳಿಗೆ ತಿಳಿದಾಗ ದೇವರೇ ಅವರ ಯೋಜನೆಯನ್ನು ನಿಷ್ಫಲಮಾಡಿದನೆಂದು ಅವರು ತಿಳಿದರು. ಮತ್ತೆ ನಾವೆಲ್ಲಾ ಕಟ್ಟುವ ಕೆಲಸಕ್ಕೆ ಕೈಹಾಕಿದೆವು. ಅವರವರ ಭಾಗಕ್ಕೆ ಜನರು ತೆರಳಿ ತಮ್ಮ ಕೆಲಸವನ್ನು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಶತ್ರುಗಳು ಅವರ ಕುತಂತ್ರವು ನಮಗೆ ಗೊತ್ತಾಯಿತೆಂದು ದೇವರು ಅದನ್ನು ವ್ಯರ್ಥ ಮಾಡಿದನೆಂದು ತಿಳಿದುಕೊಂಡರು. ನಮ್ಮನ್ನು ಬಿಟ್ಟುಹೋದರು. ನಾವೆಲ್ಲರು ನಮ್ಮ ನಮ್ಮ ಗೋಡೆಯ ಕೆಲಸಕ್ಕೆ ಮತ್ತೆ ಕೈಹಾಕಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:15
13 ತಿಳಿವುಗಳ ಹೋಲಿಕೆ  

ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.


ಪ್ರಭುವಿನ ಸೇವೆಯಲ್ಲಿ ಆಲಸಿಗಳಾಗದೆ ಅತ್ಯಾಸಕ್ತರಾಗಿರಿ.


ಸುಳ್ಳುಶಕುನ ಹೇಳುವವರನು ನಿರರ್ಥಕಗೊಳಿಸುವವನು ನಾನೆ ಕಣಿ ಹೇಳುವವರನು ಮರುಳುಗೊಳಿಸುವವನು ನಾನೆ ವಿವೇಕಿಗಳೊಡನೆ ವಾದಿಸಿ ಅವರ ವಿವೇಕವೇ ಅವಿವೇಕವೆಂದು ತೋರಿಸಿದವನು ನಾನೆ.


ಮತ್ತೊಬ್ಬರ ವಿಷಯದಲ್ಲಿ ನೀವು ತಲೆಹಾಕದೆ ನಿಮ್ಮ ಸ್ವಂತಕಾರ್ಯಗಳಲ್ಲೇ ಮಗ್ನರಾಗಿರಿ. ನೆಮ್ಮದಿಯ ಜೀವನವೇ ನಿಮ್ಮ ಗುರಿಯಾಗಿರಲಿ. ನಿಮ್ಮ ಸ್ವಂತ ದುಡಿಮೆಯಿಂದ ಬದುಕನ್ನು ಸಾಗಿಸಿರಿ. ಇದೇ ನಿಮಗೆ ನಮ್ಮ ಆದೇಶ.


ಪ್ರವಾಸಕ್ಕೆಂದು ಯಜಮಾನನೊಬ್ಬನು ಮನೆಬಿಟ್ಟು ಹೋಗುವಾಗ ತನ್ನ ಸೇವಕರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಜವಾಬ್ದಾರಿಕೆಯನ್ನು ವಹಿಸಿ, ದ್ವಾರಪಾಲಕನಿಗೆ ‘ನೀನು ಎಚ್ಚರವಾಗಿರಬೇಕು,’ ಎಂದು ಅಪ್ಪಣೆಕೊಡುವ ರೀತಿಯಲ್ಲಿ ನಾನು ನಿಮಗೆ ಹೇಳುತ್ತಿದ್ದೇನೆ. ಎಚ್ಚರವಾಗಿರಿ;


ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.


ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧಮಂದಿ ಕಟ್ಟಡ ಕೆಲಸದಲ್ಲಿ ನಿರತರಾದರು. ಅರ್ಧಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಅಧಿಕಾರಿಗಳೂ ಗೋಡೆ ಕಟ್ಟುವ ಯೆಹೂದ್ಯರ ಹಿಂದೆ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು