Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:17 - ಕನ್ನಡ ಸತ್ಯವೇದವು C.L. Bible (BSI)

17 ಹೊರೆಹೊರುವವರೂ ಒಂದು ಕೈಯಿಂದ ಹೊರೆಹೊತ್ತು ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೊರೆ ಹೊರುವವರು ಒಂದು ಕೈಯಿಂದ ಹೊರೆಹೊತ್ತುಕೊಳ್ಳುತ್ತಾ ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದೇ ಪ್ರಕಾರ ಪ್ರಭುಗಳೂ ಗೋಡೆಕಟ್ಟುವ ಯೆಹೂದ್ಯರ ಹಿಂದೆ ನಿಂತರು. ಹೊರೆ ಹೊರುವವರು ಒಂದು ಕೈಯಿಂದ ಹೊರೆಹೊತ್ತುಕೊಳ್ಳುತ್ತಾ ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಗೋಡೆ ಕಟ್ಟುವವರೂ ಅವರ ಸಹಾಯಕರೂ ಒಂದು ಕೈಯಲ್ಲಿ ಆಯುಧ ಹಿಡಿದುಕೊಂಡು ಇನ್ನೊಂದು ಕೈಯಲ್ಲಿ ಕೆಲಸ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೊರೆ ಹೊರುವವರು ಒಂದು ಕೈಯಿಂದ ಹೊರೆಹೊತ್ತು, ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:17
15 ತಿಳಿವುಗಳ ಹೋಲಿಕೆ  

ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.


ಕ್ರಿಸ್ತಯೇಸುವಿನ ನಿಷ್ಠಾವಂತ ಸೈನಿಕನಂತೆ ಕಷ್ಟದುಃಖಗಳನ್ನು ತಾಳ್ಮೆಯಿಂದ ಸಹಿಸಿಕೋ.


ಸತ್ಯೋಕ್ತಿ, ದೈವಶಕ್ತಿ, ಇವುಗಳಿಂದಲೂ ನಾವು ದೇವರ ದಾಸರೆಂದು ತೋರ್ಪಡಿಸುತ್ತೇವೆ. ರಕ್ಷಿಸಲೂ ಎದುರಿಸಲೂ ಧರ್ಮವೆಂಬ ಆಯುಧವನ್ನು ಕೈಯಲ್ಲಿ ಹಿಡಿದಿದ್ದೇವೆ.


ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲೂ ಅಂಜದೆ, ಅಳುಕದೆ ಧೈರ್ಯದಿಂದಿರಿ. ಇದೇ ಅವರಿಗೆ ಅವರ ವಿನಾಶದ ಸ್ಪಷ್ಟ ಮುನ್ಸೂಚನೆ! ನಿಮಗೆ ದೇವರಿಂದ ಬರುವ ಸಂರಕ್ಷಣೆಯ ಮುನ್ಸೂಚನೆ.


ಜಾಗರೂಕರಾಗಿರಿ, ವಿಶ್ವಾಸದಲ್ಲಿ ದೃಢರಾಗಿರಿ, ಧೈರ್ಯಶಾಲಿಗಳಾಗಿರಿ, ಸ್ಥೈರ್ಯದಿಂದ ಬಾಳಿರಿ.


ಇಲ್ಲಿ ಅನೇಕ ವಿರೋಧಿಗಳಿದ್ದರೂ ಶುಭಸಂದೇಶದ ಕಾರ್ಯವನ್ನು ಕೈಗೊಳ್ಳಲು ಮಹಾದ್ವಾರಗಳು ನನಗೆ ತೆರೆದಿವೆ.


ಇತರರಿಗೆ ನಿಮ್ಮ ಮೇಲೆ ಇಂಥ ಹಕ್ಕಿದ್ದರೆ ಅದಕ್ಕಿಂತಲೂ ಹೆಚ್ಚು ಹಕ್ಕು ನಮಗಿರಬೇಕಲ್ಲವೇ? ಆದರೂ ನಾವು ಈ ಹಕ್ಕನ್ನು ಚಲಾಯಿಸಲೇ ಇಲ್ಲ. ಬದಲಿಗೆ, ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯಾವ ಅಡ್ಡಿಯೂ ಬಾರದಿರಲೆಂದು ಎಲ್ಲವನ್ನು ಸಹಿಸಿಕೊಂಡೆವು.


ಇದನ್ನು ತಿಳಿದು ಮನದಟ್ಟು ಮಾಡಿಕೊ, ‘ಹಿಂದಿರುಗಿ ಜೆರುಸಲೇಮನ್ನು ಪುನರ್‍ ನಿರ್ಮಿಸಿ’ ಎಂಬ ದೈವೋಕ್ತಿ ಹೊರಡುವಂದಿನಿಂದ ಪ್ರಭುವಾಗಿ ಅಭಿಷಿಕ್ತನಾದವನು ಬರುವುದರೊಳಗೆ ಏಳು ಸಾರಿ ಏಳು ವರ್ಷಗಳು ಕಳೆಯಬೇಕು. ಅದು ಪುನಃ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಕಟ್ಟಲ್ಪಟ್ಟು ಏಳು ಸಾರಿ ಅರವತ್ತೆರಡು ವರ್ಷಗಳು ಇರುವುದು. ಆ ಕಾಲವು ಬಹು ಕಷ್ಟಕರವಾದ ಕಾಲವಾಗಿರುವುದು.


ಆಗ ನಾನು ಜನರಿಗೆ, “ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಿ,” ಎಂದು ಆಜ್ಞಾಪಿಸಿದೆ.


ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧಮಂದಿ ಕಟ್ಟಡ ಕೆಲಸದಲ್ಲಿ ನಿರತರಾದರು. ಅರ್ಧಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಅಧಿಕಾರಿಗಳೂ ಗೋಡೆ ಕಟ್ಟುವ ಯೆಹೂದ್ಯರ ಹಿಂದೆ ನಿಂತರು.


ಕಟ್ಟುವವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಳ್ಳುತ್ತ ಇದ್ದನು. ನಾನಂತೂ ಕಹಳೆ ಊದುವವನೊಬ್ಬನನ್ನು ನನ್ನ ಬಳಿಯಲ್ಲೇ ಇರಿಸಿಕೊಂಡಿದ್ದೆ.


ಇರಲಿ ಪ್ರಭುವಿನ ಸ್ತೋತ್ರ ಅವರ ಬಾಯಲಿ I ಇರಲಿ ಇಬ್ಬಾಯಿ ಕತ್ತಿಯು ಅವರ ಕೈಯಲಿ II


ನೂಕುನುಗ್ಗಲಿಲ್ಲದೆ, ಸಾಲುಸಾಲಾಗಿ ನಡೆಯುತ್ತವೆ, ಸಾಲುಗಳನ್ನು ಒಡೆಯದೆ ಆಯುಧಗಳ ನಡುವೆ ನುಗ್ಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು