Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:21 - ಕನ್ನಡ ಸತ್ಯವೇದವು C.L. Bible (BSI)

21 ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸಮಾಡುತ್ತಿದ್ದೆವು; ನನ್ನ ಸೇವಕರಲ್ಲಿ ಅರ್ಧಮಂದಿ ಬರ್ಜಿ ಹಿಡಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು. ನನ್ನ ಸೇವಕರಲ್ಲಿ ಅರ್ಧ ಮಂದಿ ಬರ್ಜಿಯನ್ನು ಹಿಡಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು; [ನನ್ನ ಸೇವಕರಲ್ಲಿ] ಅರ್ಧ ಮಂದಿ ಬರ್ಜಿ ಹಿಡಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹೀಗೆ ನಾವು ಗೋಡೆ ಕಟ್ಟುವ ಕಾರ್ಯವನ್ನು ಮುಂದುವರಿಸಿದೆವು. ಅರ್ಧ ಜನರು ಭರ್ಜಿಗಳನ್ನು ಹಿಡಿದುಕೊಂಡರು. ಮುಂಜಾನೆಯ ಸೂರ್ಯನ ಕಿರಣ ಬೀಳುವ ಹೊತ್ತಿನಿಂದ ಹಿಡಿದು ರಾತ್ರಿ ನಕ್ಷತ್ರಗಳು ಕಾಣುವ ತನಕ ನಾವು ಕೆಲಸದಲ್ಲಿ ನಿರತರಾಗಿರುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು. ನನ್ನ ಸೇವಕರಲ್ಲಿ ಅರ್ಧಮಂದಿ ಭರ್ಜಿ ಹಿಡಿದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:21
6 ತಿಳಿವುಗಳ ಹೋಲಿಕೆ  

ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.


ನಿಮಗೆ ಕಹಳೆಯ ಧ್ವನಿ ಕೇಳಿದಕೂಡಲೆ, ನಮ್ಮ ಬಳಿಗೆ ಕೂಡಿಬನ್ನಿರಿ. ನಮ್ಮ ದೇವರು ನಮ್ಮ ಪರವಾಗಿ ಯುದ್ಧಮಾಡುವರು,” ಎಂದು ಹೇಳಿದ್ದೆ.


ಇದಲ್ಲದೆ, ನಾನು ಮೇಸ್ತ್ರಿಗಳಿಗೆ, “ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರಲು ಹಾಗು ಹಗಲಿನಲ್ಲಿ ಕೆಲಸಮಾಡಲು ಸಾಧ್ಯವಾಗುವಂತೆ, ನೀವು ನಿಮ್ಮ ನಿಮ್ಮ ಆಳುಗಳೊಡನೆ ಜೆರುಸಲೇಮಿನಲ್ಲೇ ವಾಸಮಾಡಬೇಕು,” ಎಂದು ಅಪ್ಪಣೆಮಾಡಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು