Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:3 - ಕನ್ನಡ ಸತ್ಯವೇದವು C.L. Bible (BSI)

3 ಅವನ ಬಳಿಯಲ್ಲೇ ನಿಂತಿದ್ದ ಅಮ್ಮೋನಿಯನಾದ ಟೋಬೀಯನು, “ಅವರು ಕಟ್ಟುವ ಕಲ್ಲು ಗೋಡೆಯ ಮೇಲೆ ನರಿ ಹಾರಿದರೆ ಅದು ಬಿದ್ದುಹೋಗುವುದು!” ಎಂದು ಅಣಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯಾದ ಟೋಬೀಯನು, “ಅವರು ಹೇಗೆ ಕಟ್ಟಿದ್ದರೂ ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಉರುಳಿ ಬಿದ್ದು ಹೋಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯನಾದ ಟೋಬೀಯನು - ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಬಿದ್ದುಹೋಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನ ಜೊತೆಯಲ್ಲಿದ್ದ ಅಮ್ಮೋನಿಯನಾದ ಟೋಬೀಯನು, “ಈ ಯೆಹೂದ್ಯರು ಕಟ್ಟುತ್ತಿರುವುದೇನು? ಆ ಗೋಡೆಯ ಮೇಲೆ ಒಂದು ನರಿ ಹಾರಿದರೂ ಗೋಡೆಯು ಕುಸಿದುಬೀಳುವುದು” ಎಂದು ವ್ಯಂಗ್ಯವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನ ಬಳಿಯಲ್ಲೇ ನಿಂತಿದ್ದ ಅಮ್ಮೋನಿಯನಾದ ಟೋಬೀಯನು, “ಅವರು ಕಟ್ಟುವ ಕಲ್ಲು ಗೋಡೆಯ ಮೇಲೆ ನರಿ ಹಾರಿದರೆ, ಅದು ಬಿದ್ದುಹೋಗುವುದು!” ಎಂದು ಅಣಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:3
8 ತಿಳಿವುಗಳ ಹೋಲಿಕೆ  

ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಯೂ ಅರೇಬಿಯನಾದ ಗೆಷೆಮನೂ ಈ ಸಮಾಚಾರವನ್ನೂ ಕೇಳಿದಾಗ ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿದರು. “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರೋಧವಾಗಿ ದಂಗೆ ಏಳಬೇಕೆಂದಿದ್ದೀರೋ?” ಎಂದು ಕೇಳಿದರು.


ಇಸ್ರಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್ ದೇಶದವನಾದ ತೊಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬ ಹೊಟ್ಟೆಕಿಚ್ಚುಪಟ್ಟರು.


ಆದುದರಿಂದ ಬಾ, ಬಂದು ನನ್ನ ಒಡೆಯರಾದ ಅಸ್ಸೀರಿಯದ ಅರಸನೊಂದಿಗೆ ಒಂದು ಒಪ್ಪಂದ ಮಾಡಿಕೊ. ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುವನು; ಅವುಗಳ ಮೇಲೆ ಕೂರಿಸುವಷ್ಟು ಮಂದಿ ಸವಾರರು ನಿನಗಿದ್ದಾರೋ?


“ಅವರು ಯುದ್ಧಕ್ಕಾಗಿಯೇ ಬಂದಿರಲಿ, ಸಮಾಧಾನಕ್ಕಾಗಿಯೇ ಬಂದಿರಲಿ, ಅವರನ್ನು ಸಜೀವಿಗಳನ್ನಾಗಿ ಹಿಡಿದುತನ್ನಿ,” ಎಂದು ಆಜ್ಞಾಪಿಸಿದನು.


ಆಗ ಅವರು ಅಹಾಬನಿಗೆ, “ಸಮಾರಿಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು; ಲೆಕ್ಕವಿಲ್ಲದ ನನ್ನ ಸೈನಿಕರು ಅದರಲ್ಲಿ ಒಂದು ಹಿಡಿ ಧೂಳನ್ನೂ ಬಿಡುವುದಿಲ್ಲ; ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದನು.


ಸಿಯೋನ್ ಶ್ರೀ ಪರ್ವತ ಹಾಳಾಯಿತು ಅದು ಅಲೆದಾಡುವ ನರಿಗಳ ಬೀಡಾಯಿತು.


ನಾನು ಗೋಡೆಯನ್ನು ಕಟ್ಟಿ ಮುಗಿಸಿ ಬಾಗಿಲುಗಳಿಗೆ ಕದಗಳನ್ನು ಇನ್ನೂ ಹಚ್ಚಿಸಿರಲಿಲ್ಲ. ಗೋಡೆಯ ಸಂದುಗೊಂದುಗಳನ್ನು ಕೂಡಿಸಿದ ಸಂಗತಿ ಸನ್ಬಲ್ಲಟ್, ಟೋಬೀಯ ಹಾಗು ಅರೇಬಿಯನಾದ ಗೆಷಮ್ ಇವರಿಗೂ


“ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಸರ್ವೇಶ್ವರನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಸರ್ವೇಶ್ವರನ ಸಭೆಗೆ ಸೇರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು